No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
  • Advertise With Us
  • Grievances
  • About Us
  • Contact Us
Wednesday, September 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಹಾಸನ

1.10 ಕೋಟಿ ಆಯುಷ್ಮಾನ್‌ ಸ್ಮಾರ್ಟ್‌ ಕಾರ್ಡ್‌ ವಿತರಣೆಗೆ ಸಿದ್ಧ: ಸಚಿವ ಡಾ.ಕೆ. ಸುಧಾಕರ್

kalpa News by kalpa News
December 1, 2022
in ಹಾಸನ
0
ಇಂದು ಉಡುಪಿಯಲ್ಲಿ 300ಕ್ಕೂ ಅಧಿಕ ಕೊರೋನಾ ಪಾಸಿಟಿವ್ ಸಾಧ್ಯತೆ: ಸಚಿವ ಸುಧಾಕರ್ ಸ್ಪೋಟಕ ಮಾಹಿತಿ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಹಾಸನ |

ನಗರ ಪ್ರದೇಶಗಳಲ್ಲಿ ಒಟ್ಟು 100 ʼನಮ್ಮ ಕ್ಲಿನಿಕ್‌ʼಗಳಿಗೆ ಡಿಸೆಂಬರ್‌ 14 ರಂದು ಚಾಲನೆ ದೊರೆಯಲಿದೆ. ಹಾಸನ ಜಿಲ್ಲೆಯಲ್ಲಿ 5 ಕ್ಲಿನಿಕ್‌ಗಳು ಆರಂಭವಾಗಲಿವೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದರು.

ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಸಚಿವರು ಮಾತನಾಡಿದರು.

ನಗರ ಪ್ರದೇಶಗಳಲ್ಲಿ ಜನಸಂಖ್ಯೆಗನುಗುಣವಾಗಿ ಆರೋಗ್ಯ ಕೇಂದ್ರಗಳಿಲ್ಲ. ಆದ್ದರಿಂದ 438 ʼನಮ್ಮ ಕ್ಲಿನಿಕ್‌ʼಗಳನ್ನು ಆರಂಭಿಸಲಾಗುತ್ತಿದೆ. ಡಿಸೆಂಬರ್‌ 14 ರಂದು ಮುಖ್ಯಮಂತ್ರಿಗಳು ಕ್ಲಿನಿಕ್‌ಗಳನ್ನು ಉದ್ಘಾಟಿಸಲಿದ್ದಾರೆ. ಈ ದಿನ 100 ಕ್ಲಿನಿಕ್‌ಗಳು ಆರಂಭವಾಗಲಿವೆ. ಹಾಸನ ಜಿಲ್ಲೆಯಲ್ಲಿ 5 ಕ್ಲಿನಿಕ್‌ಗಳು ಪ್ರಾರಂಭವಾಗಲಿವೆ ಎಂದರು.
ಕೋವಿಡ್‌ ಬಂದ ಸಂದರ್ಭದಲ್ಲಿ ಸುಮಾರು 72 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರ ಕೊರತೆ ಇತ್ತು. 70 ಕ್ಕೂ ಅಧಿಕ ಕೇಂದ್ರಗಳಲ್ಲಿ ವೈದ್ಯರ ಹುದ್ದೆ ಭರ್ತಿ ಮಾಡಲಾಗಿದೆ. ಜಿಲ್ಲೆಯಲ್ಲಿ ನಿರ್ಮಾಣವಾಗುತ್ತಿರುವ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಯ ಕಟ್ಟಡ ಮಾರ್ಚ್‌ ವೇಳೆಗೆ ಉದ್ಘಾಟನೆಯಾಗಲಿದೆ. 339 ವೈದ್ಯ ಹುದ್ದೆಗಳ ಪೈಕಿ 269 ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. 123 ತಜ್ಞರ ಪೈಕಿ 105 ಭರ್ತಿಯಾಗಿದೆ. 23 ದಂತ ವೈದ್ಯರ ಹುದ್ದೆ ತುಂಬಿದೆ. 135 ಎಂಬಿಬಿಎಸ್‌ ವೈದ್ಯರ ಪೈಕಿ 115 ತುಂಬಿದೆ, ತುರ್ತು ಚಿಕಿತ್ಸಾ ವೈದ್ಯಾಧಿಕಾರಿಗಳ ಹುದ್ದೆಯಲ್ಲಿ 25 ಖಾಲಿ ಇದೆ. ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಲ್ಲಿ 30 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕ್ಯಾನ್ಸರ್‌, ಮಧುಮೇಹ ಮೊದಲಾದ ಅಸಾಂಕ್ರಾಮಿಕ ರೋಗಗಳ ತಪಾಸಣೆ, ಉಚಿತ ಚಿಕಿತ್ಸೆ ಹಾಗೂ ಔಷಧಿ ನೀಡಲು ಮಾಡಲು ಕ್ರಮ ವಹಿಸಲಾಗಿದೆ. ಹಾಸನದಲ್ಲಿ 60% ತಪಾಸಣೆ ನಡೆದಿದೆ ಎಂದು ತಿಳಿಸಿದರು.

1.10 ಕೋಟಿ ಜನರಿಗೆ ಆಯುಷ್ಮಾನ್‌ ಸ್ಮಾರ್ಟ್‌ ಕಾರ್ಡ್‌, ಉಚಿತ ಕಣ್ಣು ಪರೀಕ್ಷೆ:
60 ವರ್ಷ ಮೇಲ್ಪಟ್ಟವರಿಗೆ ಉಚಿತವಾಗಿ ಕಣ್ಣಿನ ಪರೀಕ್ಷೆ ಮಾಡಿ ಕನ್ನಡಕ, ಲೆನ್ಸ್‌ ನೀಡಲು ಕ್ರಮ ವಹಿಸಲಾಗಿದೆ. 330 ಕೋಟಿ ರೂ. ಮೊತ್ತದ ಈ ಯೋಜನೆಯನ್ನು ಮಾರ್ಚ್‌ ಒಳಗಾಗಿ ಜಾರಿ ಮಾಡಿ ಉಚಿತವಾಗಿ ಈ ಸೌಲಭ್ಯ ಕಲ್ಪಿಸಲಾಗುವುದು. ಆಯುಷ್ಮಾನ್‌ ಭಾರತ್‌ ಯೋಜನೆಯಡಿ 1.10 ಕೋಟಿಗೂ ಅಧಿಕ ಜನರಿಗೆ ಸ್ಮಾರ್ಟ್‌ ಕಾರ್ಡುಗಳನ್ನು ಸಿದ್ಧಪಡಿಸಿದ್ದು, ಡಿಸೆಂಬರ್‌ 9 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ವಿತರಣೆಗೆ ಚಾಲನೆ ನೀಡಲಿದ್ದಾರೆ. ಒಂದು ವಿಧಾನಸಭಾ ಕ್ಷೇತ್ರದಲ್ಲಿ ಕನಿಷ್ಠ 1,000 ಸ್ಮಾರ್ಟ್‌ ಕಾರ್ಡ್‌ ನೀಡಲಾಗುವುದು. ಜನವರಿ ಅಂತ್ಯಕ್ಕೆ ರಾಜ್ಯದ 5 ಕೋಟಿ ಕಾರ್ಡ್‌ಗಳನ್ನು ನೀಡುವ ಗುರಿ ಇದೆ ಎಂದು ವಿವರಿಸಿದರು.
100 ಪಿಎಚ್‌ಸಿ ಮೇಲ್ದರ್ಜೆಗೆ:
ರಾಜ್ಯದ 100 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳಾಗಿ ಮೇಲ್ದರ್ಜೆಗೇರಿಸಲಾಗುವುದು. ಹೋಬಳಿ ಮಟ್ಟದಲ್ಲಿ ಉತ್ತಮ ಆರೋಗ್ಯ ವ್ಯವಸ್ಥೆಗೆ 100 ಸಮುದಾಯ ಆರೋಗ್ಯ ಕೇಂದ್ರಗಳನ್ನು ಕೂಡ ಮೇಲ್ದರ್ಜೆಗೇರಿಸಿ ಜಿಲ್ಲಾಸ್ಪತ್ರೆಗಳ ಒತ್ತಡ ಕಡಿಮೆ ಮಾಡಲಾಗುವುದು. ರಾಜ್ಯದ ಆಸ್ಪತ್ರೆಗಳಲ್ಲಿ ಡಯಾಲಿಸಿಸ್‌ ಸೇವೆಯನ್ನು ಉತ್ತಮಪಡಿಸಿದ್ದು, ದಿನಕ್ಕೆ 30,000 ಇದ್ದ ಪ್ರಕ್ರಿಯೆಯನ್ನು 60,000 ಕ್ಕೆ ಏರಿಸಲಾಗಿದೆ. 500 ಮಕ್ಕಳಿಗೆ 32 ಕೋಟಿ ರೂ. ವೆಚ್ಚದಲ್ಲಿ ಕಾಕ್ಲಿಯರ್‌ ಇಂಪ್ಲಾಂಟ್‌ ಮಾಡುತ್ತಿದ್ದು, 65 ಮಕ್ಕಳಿಗೆ ಈಗಾಗಲೇ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಹೆಣ್ಣುಮಕ್ಕಳಿಗೆ ಶುಚಿ ಪ್ಯಾಡ್‌ ನೀಡುವ ಕಾರ್ಯಕ್ರಮ ಈ ವರ್ಷದಿಂದ ಆರಂಭವಾಗಲಿದೆ ಎಂದು ತಿಳಿಸಿದರು.

ಆಂಬ್ಯುಲೆನ್ಸ್‌ ಸೇವೆಯ ದೋಷ ಸರಿಪಡಿಸಲಾಗಿದೆ
108 ಆಂಬ್ಯುಲೆನ್ಸ್‌ನ ಸೇವೆಯಲ್ಲಿ ಹಿಂದಿನ ಸರ್ಕಾರದಿಂದ ಅನೇಕ ದೋಷಗಳಾಗಿತ್ತು. ಅದನ್ನು ಸರಿಪಡಿಸಿ ಹೊಸ ಟೆಂಡರ್‌ ಕರೆದಿದ್ದು, ಜನವರಿ ಅಂತ್ಯಕ್ಕೆ ಹೊಸ ವ್ಯವಸ್ಥೆ ಬರಲಿದೆ. ಇದರಲ್ಲಿ ಅತ್ಯಾಧುನಿಕ ವ್ಯವಸ್ಥೆ, ಸಮನ್ವಯ, ಸರಿಯಾದ ಸಮಯಕ್ಕೆ ಸೇವೆ ದೊರೆಯುವಂತೆ ಇರಲಿದೆ ಎಂದರು.
ಕಳೆದ ಎರಡೂವರೆ ವರ್ಷದಿಂದ ಆರೋಗ್ಯ ವ್ಯವಸ್ಥೆಯ ಸುಧಾರಣೆಗೆ ಹೊಸ ಸ್ಪರ್ಶ ನೀಡಲಾಗಿದೆ. ವೈದ್ಯ ಹುದ್ದೆಗಳ ಭರ್ತಿ, ಮೂಲಸೌಕರ್ಯಗಳನ್ನು ಐದಾರು ಪಟ್ಟು ಹೆಚ್ಚಳ ಮಾಡಿ ಸುಧಾರಣೆ, ಶಿಸ್ತುಪಾಲನೆ, ಜನಸ್ನೇಹಿ ಕ್ರಮ ತರಲಾಗಿದೆ. ಪ್ರತಿ ಜಿಲ್ಲಾಸ್ಪತ್ರೆಯಲ್ಲಿ ಹೆಲ್ಪ್‌ ಡೆಸ್ಕ್‌ ಕೂಡ ಆರಂಭಿಸಲಾಗಿದೆ ಎಂದರು.

ಹಾಸನ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಹೊರರೋಗಿ ವಿಭಾಗಕ್ಕೆ 1,500 ಜನರು ಪ್ರತಿ ದಿನ ಬರುತ್ತಿದ್ದಾರೆ. ಐಪಿಡಿಗೆ 150-200 ಜನರು ಬರುತ್ತಿದ್ದಾರೆ. ಹೀಗಾಗಿ ಸರ್ಕಾರಿ ಆರೋಗ್ಯ ವ್ಯವಸ್ಥೆ ಮೇಲೆ ಜನರಿಗೆ ವಿಶ್ವಾಸ ಹೆಚ್ಚಿದೆ ಎನ್ನಬಹುದು. ಆದರೂ ಎಲ್ಲೋ ಕೆಲವರಿಂದಾಗಿ ದೂರುಗಳು ಬರುತ್ತಿವೆ. ಆದರೆ ವ್ಯವಸ್ಥೆ ಉತ್ತಮಪಡಿಸುವ ಕೆಲಸ ಮುಂದುವರಿದಿದೆ. ಎಸ್‌ಸಿ ಎಸ್‌ಟಿ ಮೀಸಲಾತಿಗೆ ಸಂಬಂಧಿಸಿದಂತೆ ಸಮಸ್ಯೆ ತಲೆದೋರಿದೆ. ಇವೆಲ್ಲವನ್ನೂ ಬಗೆಹರಿಸಿದ್ದು, ಇನ್ನು ಒಂದು ತಿಂಗಳಲ್ಲಿ ನೇಮಕಾತಿ ನಡೆಯಲಿದೆ. ಹಾಸನ ಮೆಡಿಕಲ್‌ ಕಾಲೇಜು ಎನ್‌ಎಬಿಎಚ್‌ ಮಾನ್ಯತೆ ಪಡೆದಿರುವುದು ಹೆಮ್ಮೆ ತಂದಿದೆ ಎಂದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: HasanaKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಹಾಸನ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕನ್ನಡ ರಾಜ್ಯೋತ್ಸವ ಮನೆ ಮನೆಯಲ್ಲಿ ಹಬ್ಬವಾಗಬೇಕು: ರೇಣುಕಾ ಪ್ರಸಾದ್

Next Post

ರಾಜ್ಯದ ನೀರಾವರಿ ಯೋಜನೆಗಳಿಗೆ ಅನುದಾನ ಬಿಡುಗಡೆಗೊಳಿಸಿ: ಸಿಎಂ ಮನವಿ

kalpa News

kalpa News

Next Post
ರಾಜ್ಯದ ನೀರಾವರಿ ಯೋಜನೆಗಳಿಗೆ ಅನುದಾನ ಬಿಡುಗಡೆಗೊಳಿಸಿ: ಸಿಎಂ ಮನವಿ

ರಾಜ್ಯದ ನೀರಾವರಿ ಯೋಜನೆಗಳಿಗೆ ಅನುದಾನ ಬಿಡುಗಡೆಗೊಳಿಸಿ: ಸಿಎಂ ಮನವಿ

Leave a Reply Cancel reply

Your email address will not be published. Required fields are marked *

No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL