ಕಲ್ಪ ಮೀಡಿಯಾ ಹೌಸ್ | ಹಾಸನ |
ಈ ಬಾರಿಯ ಚುನಾವಣೆಯಲ್ಲಿ ಭಾರೀ ಕುತೂಹಲ ಕೆರಳಿಸಿದ್ದ ಹಾಸನ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿ ಸ್ವರೂಪ್ ಪ್ರಕಾಶ್ Swaroop Prakash ಭರ್ಜರಿ ಜಯ ದಾಖಲಿಸಿದ್ದಾರೆ.
ಸುಮಾರು 40 ಸಾವಿರ ಮತಗಳ ಅಂತರದಲ್ಲಿ ಜಯ ದಾಖಲಿಸಿರುವ ಸ್ವರೂಪ್, ಜಿಲ್ಲೆಯಲ್ಲಿ ಹೊಸ ದಾಖಲೆ ನಿರ್ಮಿಸಿದ್ದಾರೆ.
ಇನ್ನು, ಸೋಲಿನ ಬೆನ್ನಲ್ಲೇ ಮಾತನಾಡಿರುವ ಬಿಜೆಪಿ ಅಭ್ಯರ್ಥಿ ಪ್ರೀತಂ ಗೌಡ, ಈ ಸೋಲಿನಿಂದ ಹೆದರಲ್ಲ. ಜೆಡಿಎಸ್’ಗೂ ನಮಗೂ ನೇರ ಹಣಾಹಣಿ ಇತ್ತು. ಇಲ್ಲಿ, ಕಾಂಗ್ರೆಸ್ ಪಡೆದ ಮತಗಳ ವಿಭಜನೆಯಿಂದ ಜೆಡಿಎಸ್ ಗೆಲುವು ಸಾಧಿಸಿದೆ ಎಂದಿದ್ದಾರೆ.
Also read: 4ನೆಯ ಸುತ್ತಿನಲ್ಲೂ ಭದ್ರಾವತಿಯಲ್ಲಿ ಸಂಗಮೇಶ್ವರ್ ಭಾರೀ ಮುನ್ನಡೆ
ಸ್ವರೂಪ್ ಅವರಿಗೆ ಶುಭ ಕೋರುತ್ತೇನೆ. ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಅವರು ಕೆಲಸ ಮಾಡಲಿ. ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಎಲ್ಲ ರೀತಿಯಲ್ಲೂ ಅವರಿಗೆ ಸಹಕಾರ ನೀಡುತ್ತೇನೆ ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post