ಕಲ್ಪ ಮೀಡಿಯಾ ಹೌಸ್ | ಹಾಸನ |
ರೇವಣ್ಣ ಅವರ ಕುಟುಂಬಸ್ಥರು ನನ್ನ ಪರವಾಗಿ ಪ್ರಚಾರಕ್ಕೆ ಬರುತ್ತಾರೆ ಎಂದು ಮಾಜಿ ಪ್ರಧಾನಿ ದೇವೇಗೌಡರ ಸೊಸೆ ಭವಾನಿ ಅವರ ಕೈತಪ್ಪಿದ ಹಾಸನ ಟಿಕೇಟ್ ಪಡೆದ ಎಚ್.ಪಿ. ಸ್ವರೂಪ್ ಹೇಳಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ಭವಾನಿ ರೇವಣ್ಣ ಅವರು ಹಾಸನ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಆಗಿದ್ದರು. ಆದರೆ ಹೈಕಮಾಂಡ್ ನನಗೆ ಟಿಕೆಟ್ ನೀಡಿರುವುದು ಸಂತಸ ತಂದಿದ್ದು, ರೇವಣ್ಣ ಕುಟುಂಬ ನನ್ನ ಪರ ಪ್ರಚಾರಕ್ಕೆ ಬರುತ್ತಾರೆ ಎಂದಿದ್ದಾರೆ.
Also read: ಜವರಾಯನ ಅಟ್ಟಹಾಸ: ಕಂದಕಕ್ಕೆ ಬಸ್ ಉರುಳಿ 12 ಮಂದಿ ದುರ್ಮರಣ
ಟಿಕೆಟ್ ನೀಡಿದ್ದಕ್ಕಾಗಿ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರಿಗೆ ಧನ್ಯವಾದ ಅರ್ಪಿಸುತ್ತೇನೆ. ಶೀಘ್ರದ¯್ಲÉÃ ರೇವಣ್ಣ ಅವರನ್ನು ಭೇಟಿಯಾಗುತ್ತೇನೆ. ಎಲ್ಲರೂ ಒಗ್ಗಟ್ಟಾಗಿ ಚುನಾವಣೆ ಎದುರಿಸುತ್ತೇವೆ ಎಂದಿz್ದÁರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post