ಕಲ್ಪ ಮೀಡಿಯಾ ಹೌಸ್ | ಹಾಸನ |
ರಾಜ್ಯದಲ್ಲೇ ಖ್ಯಾತಿ ಪಡೆದಿರುವ ಹಾಸನಾಂಬೆ ದೇವಾಲಯದ ಬಾಗಿಲು ಈ ಬಾರಿ ಅಕ್ಟೋಬರ್ 13ರಿಂದ, 15 ದಿನಗಳ ಕಾಲ ತೆರೆಯಲಿದೆ.
ಈ ಕುರಿತಂತೆ ಮಾಹಿತಿ ನೀಡಿರುವ ಶಾಸಕ ಪ್ರೀತಂ ಗೌಡ, ಆಶ್ವೀಜ ಮಾಸದ ಶುಕ್ಲ ಪಕ್ಷದ ಮೊದಲ ಗುರುವಾರದಂದು ದೇವಾಲಯದ ಬಾಗಿಲು ತೆರೆಯಲಿದ್ದು, ಬಲಿಪಾಡ್ಯಮಿಯ ಮಾರನೆಯ ದಿನ ಶಾಸ್ತ್ರೋಕ್ತವಾಗಿ ಬಾಗಿಲು ಹಾಕಲಾಗುತ್ತದೆ ಎಂದರು.
ಅಕ್ಟೋಬರ್ 13ರಂದು ಬಾಗಿಲು ತೆರೆಯಲಿದ್ದು, 27ರಂದು ಬಾಗಿಲು ಮುಚ್ಚಲಾಗುತ್ತದೆ. ಅ.25ರಂದು ಸೂರ್ಯಗ್ರಹಣ ಹಾಗೂ 27ರ ಕೊನೆಯ ದಿನ ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶ ಇರುವುದಿಲ್ಲ. ಒಟ್ಟು 12 ದಿನ ಭಕ್ತರು ದರ್ಶನ ಪಡೆಯಬಹುದು ಎಂದು ತಿಳಿಸಿದ್ದಾರೆ.ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post