ಕಲ್ಪ ಮೀಡಿಯಾ ಹೌಸ್ | ಹಾಸನ |
ಆಲೂರು ತಾಲ್ಲೂಕಿನ ಪಾಳ್ಯ ಗ್ರಾಮದಲ್ಲಿ ಪತ್ನಿಯೊಬ್ಬಳು ತನ್ನ ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಕೊಲ್ಲಲು ಯತ್ನಿಸಿದ್ದ ಘಟನೆ ಬೆಳಕಿಗೆ ಬಂದಿದೆ.
ದ್ರಾಕ್ಷಾಯಿಣಿ ಎಂಬಾಕೆ ಪ್ರತಾಪ್‌ರೊಂದಿಗೆ ಮದುವೆಯಾಗಿದ್ದು, ಇತ್ತೀಚಿನ ದಿನಗಳಲ್ಲಿ ಪ್ರವೀಣ್ ಎಂಬ ವ್ಯಕ್ತಿಯೊಂದಿಗೆ ಅಕ್ರಮ ಸಂಬಂಧ ಬೆಳೆದಿದ್ದು ತಿಳಿದುಬಂದಿದೆ. ಈ ಸಂಬಂಧಕ್ಕೆ ಪತಿ ಪ್ರತಾಪ್ ಅಡ್ಡಿಯಾದ ಹಿನ್ನೆಲೆಯಲ್ಲಿ, ಪತಿಯನ್ನು ಕೊಲ್ಲುಲು ದ್ರಾಕ್ಷಾಯಿಣಿ ಹಾಗೂ ಪ್ರವೀಣ್ ತಂತ್ರ ರೂಪಿಸಿದ್ದರು.

ಈ ಸಂಬಂಧವಾಗಿ ಪ್ರತಾಪ್ ತನ್ನ ಪತ್ನಿಯ ಮೇಲೆ ಅನುಮಾನ ಹೊಂದಿ, ಒಂದು ತಿಂಗಳ ಕಾಲ ಮನೆಯಲ್ಲೇ ವಾಯ್ಸ್ ರೆಕಾರ್ಡರ್ ಇಟ್ಟು ಪತ್ನಿಯ ಮಾತುಕತೆಗಳನ್ನು ರೆಕಾರ್ಡ್ ಮಾಡುತ್ತಿದ್ದ. ಇದರಿಂದಾಗಿ ಪತ್ನಿಯ ದುಷ್ಕೃತ್ಯ ಹಾಗೂ ಪ್ರವೀಣ್‌ನ ಸಹಕಾರದ ವಿಷಯಗಳು ಬಯಲಾಗಿವೆ. ಪ್ರತಾಪ್ ತನ್ನದೇ ದೂರು ಆಧಾರವಾಗಿ ಪೊಲೀಸರು ತನಿಖೆ ಪ್ರಾರಂಭಿಸಿದ್ದು, ದ್ರಾಕ್ಷಾಯಿಣಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಆದರೆ ಈ ನಡುವೆ ಪ್ರವೀಣ್ ಎಸ್ಕೇಪ್ ಆಗಿರುವ ಕುರಿತು ವರದಿಯಾಗಿದೆ.
ಆಲೂರು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post