No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Saturday, April 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಹಾಸನ

ಕೇಂದ್ರ ಬಿಜೆಪಿ ನಾಯಕರ ಜತೆ ಕಾಂಗ್ರೆಸ್ ಪ್ರಭಾವೀ ಸಚಿವರಿಂದ ಚೌಕಾಸಿ: ಹೆಚ್‌ಡಿಕೆ ಬಾಂಬ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 11, 2023
in ಹಾಸನ, ರಾಜಕೀಯ
0
ರಾಜ್ಯದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದೇ ನನ್ನ ಗುರಿ: ಹೆಚ್.ಡಿ. ಕುಮಾರಸ್ವಾಮಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಹಾಸನ |

ತಮ್ಮ ಅಕ್ರಮಗಳಿಂದ ಪಾರಾಗಲು ಬಿಜೆಪಿ ಕೇಂದ್ರ ನಾಯಕರ BJP Highcomand ಜತೆ ಚೌಕಾಸಿ ಮಾಡುತ್ತಿರುವ ರಾಜ್ಯ ಕಾಂಗ್ರೆಸ್ ಸರಕಾರದ ಪ್ರಭಾವೀ ಮಂತ್ರಿಯೊಬ್ಬರು ಐವತ್ತು-ಅರವತ್ತು ಶಾಸಕರನ್ನು ಕರೆದುಕೊಂಡು ಹೋಗಲು ಸಿದ್ಧವಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ HDKumaraswamy ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಹಾಸನದಲ್ಲಿ ಇಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು; ನೊಣವಿನಕೆರೆ ಸ್ವಾಮೀಜಿಗಳು ಡಿಕೆ ಶೀವಕುಮಾರ್ ಅವರು ಮುಖ್ಯಮಂತ್ರಿ ಆಗುತ್ತಾರೆ ಎಂದು ಹೇಳಿದ್ದಾರೆ. ಆದರೆ, ಕಾಂಗ್ರೆಸ್ ನಲ್ಲಿ ಬಿಕೆ ಹರಿಪ್ರಸಾದ್ BKHariprasad ಸೇರಿ ಅನೇಕ ಬಂಡೆದ್ದಿದ್ದಾರಲ್ಲ ಎನ್ನುವ ಪ್ರಶ್ನೆಗೆ ಮೇಲಿನಂತೆ ಉತ್ತರಿಸಿದರು.
ಕಾಂಗ್ರೆಸ್ ಸರಕಾರದಲ್ಲಿ ಎಲ್ಲವೂ ಸರಿ ಇಲ್ಲ. ಈ ಸರಕಾರ ಯಾವಾಗ ಹೋಗುತ್ತೋ ಗೊತ್ತಿಲ್ಲ. ಪ್ರಭಾವೀ ಮಂತ್ರಿಯೊಬ್ಬರು ತಮ್ಮ ಮೇಲಿರುವ ಅಕ್ರಮಗಳಿಂದ ಪಾರಾಗಲು ಹರಸಾಹಸ ಮಾಡುತ್ತಿದ್ದಾರೆ. ಕೇಂದ್ರ ಬಿಜೆಪಿ ನಾಯಕರ ಕೈಕಾಲು ಕಟ್ಟುತ್ತಿದ್ದಾರೆ. ಸುಮಾರು ಐವತ್ತು-ಅರವತ್ತು ಶಾಸಕರನ್ನು ಕರೆದುಕೊಂಡು ಬೇಲಿ ಹಾರಲು ತಯಾರಿ ನಡೆಸುತ್ತಿದ್ದಾರೆ ಎಂದು ಯಾರೋ ಮೊನ್ನೆ ನನಗೆ ಮಾಹಿತಿ ನೀಡಿದರು ಎಂದರು.

ಇಷ್ಟಕ್ಕೂ ಅವರು ಯಾರು? ಎಂದು ಮಾಧ್ಯಮ ಪ್ರತಿನಿಧಿಗಳು ಪದೇಪದೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಮಾಜಿ ಮುಖ್ಯಮಂತ್ರಿಗಳು; ಸಣ್ಣಪುಟ್ಟವರು ಹೋಗಲು ಆಗುತ್ತದೆಯೇ? ದೊಡ್ಡವರು, ಅದರಲ್ಲೂ ಪ್ರಭಾವೀಗಳೇ ಈ ಸಾಹಸ ಮಾಡಲು ಸಾಧ್ಯ? ಅಯ್ಯೋ ದಯವಿಟ್ಟು ನಿಮ್ಮ ಜೊತೆ ಬಂದುಬಿಡ್ತಿನಿ. ಅಲ್ಲಿಯವರೆಗೂ ಐದಾರು ತಿಂಗಳು ರಿಲೀಫ್ ಕೊಡಿ ಅಂತ ಬೇಡಿಕೊಂಡು ಹೋಗಿದ್ದು ಗೊತ್ತು ಎಂದು ಉತ್ತರಿಸಿದರು.
ಮಹಾರಾಷ್ಟ್ರದಲ್ಲಿ ನಡೆದಂತೆ ಇಲ್ಲಿ ಯಾರು ಹುಟ್ಟಿಕೊಳ್ಳುತ್ತಾರೋ ಗೊತ್ತಿಲ್ಲ. ಈ ದೇಶದಲ್ಲಿ ಇವತ್ತಿನ ರಾಜಕಾರಣದಲ್ಲಿ ನೋಡಿದಾಗ ಏನು ಬೇಕಾದರೂ ನಡೆಯಬಹುದು. ಇಲ್ಲಿ ಯಾರಿಗೂ ಪ್ರಮಾಣಿಕತೆ, ನಿಷ್ಠೆ ಅನ್ನುವುದು ಉಳಿದಿಲ್ಲ. ಅವರವರ ಸ್ವಾರ್ಥಕ್ಕೆ ಏನೇನು ಆಗಬೇಕು ಮಾಡಿಕೊಂಡು ಹೋಗುತ್ತಿದ್ದಾರೆ ಅಷ್ಟೇ. ಇವತ್ತು ಇಲ್ಲಿ ಇರುತ್ತಾರೆ, ಅನುಕೂಲ ಆಗಬೇಕಾದರೆ ಇನ್ನೊಂದು ಕಡೆ ಹೋಗುತ್ತಾರೆ. ಇದು ಇವತ್ತಿನ ರಾಜಕಾರಣ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಮುಖ್ಯಮಂತ್ರಿ ವಿರುದ್ದ ಬಿ.ಕೆ. ಹರಿಪ್ರಸಾದ್ ವಾಗ್ದಾಳಿ ನಡೆಸಿರುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬರೀ ಹರಿಪ್ರಸಾದ್ ಅಲ್ಲ. ಇನ್ನೂ ಸಾಕಷ್ಟು ಜನ ಇದ್ದಾರೆ. ಒಂದೊಂದೇ ಧ್ವನಿ ಹೊರ ಬರುತ್ತದೆ ಎಂದರು ಅವರು. ಪಾಪ.. ಹರಿಪ್ರಸಾದ್‌ ಅವರ ಹೆಸರನ್ನಷ್ಟೇ ಏಕೆ ಹೇಳುತ್ತೀರಿ? ಅಧಿಕಾರದಲ್ಲಿ ಉಳಿದುಕೊಳ್ಳಲು ವ್ಯಾಪಾರ ಮಾಡಲು ಹೋಗಿದ್ದಾರೆ. ಮಾಡಿರುವ ಅಕ್ರಮಗಳನ್ನು ಸರಿಪಡಿಸಿಕೊಳ್ಳಲು ಹೋಗಿರುವ ಮಾಹಿತಿಯೂ ಇದೆ ನನಗೆ. ಹರಿಪ್ರಸಾದ್ ಒಬ್ಬರ ಹೆಸರು ಯಾಕೆ ಹೇಳ್ತೀರಾ? ಅವರು ಕಾಂಗ್ರೆಸ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತರು

Also read: ಶರಾವತಿ ಸಂತ್ರಸ್ತರಿಗೆ ಭೂ ಹಕ್ಕು ಕೊಡಿ: ಸಮುದಾಯದ ಪರವಾಗಿ ಸಚಿವ ಮಧು ಬಂಗಾರಪ್ಪ ಕೈ ಮುಗಿದು ಮನವಿ

ಸಾರಿಗೆ ಸಂಸ್ಥೆ ಶಕ್ತಿ ಕಳೆದುಕೊಂಡಿದೆ:
ಶಕ್ತಿ ಯೋಜನೆಯಿಂದ ಹೆಣ್ಣುಮಕ್ಕಳಿಗೆ ಅನುಕೂವಾಗಿದೆ, ನಿಜ. ಆದರೆ ಸಾರಿಗೆ ಸಂಸ್ಥೆಯ ಪರಿಸ್ಥಿತಿ ಏನಾಗಿದೆ? ಸಾರಿಗೆ ಸಚಿವರೇ ಸಾಲ‌ ಇರುವ ಬಗ್ಗೆ ಹೇಳಿದ್ದಾರೆ. ದಿ‌‌ನಗೂಲಿ ಆಧಾರದಲ್ಲಿ 9500 ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದಿದ್ದಾರೆ. ಐದು ಸಾವಿರ ಹೊಸ ಬಸ್ ಖರೀದಿ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಇದಕ್ಕೆಲ್ಲ ಹಣವನ್ನು ಎಲ್ಲಿಂದ ತರುತ್ತಾರೆ? ಎಂದು ಕುಮಾರಸ್ವಾಮಿ ಅವರು ಸರಕಾರವನ್ನು ಪ್ರಶ್ನೆ ಮಾಡಿದ್ದಾರೆ.
ಮುಸ್ಲೀಮರಿಗೆ ಕೊಡುತ್ತೀರಿ ಸರಿ, ರೈತರಿಗೇನು ಕೊಡುತ್ತೀರಿ?
ಮುಸ್ಲಿಂ ಸಮುದಾಯಕ್ಕೆ ಹತ್ತು ಸಾವಿರ ಕೋಟಿ ನೀಡುತ್ತೇನೆ ಎಂದಿರುವ ಸಿಎಂ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಕಿಡಿಕಿಡಿಯಾದ ಮಾಜಿ ಮುಖ್ಯಮಂತ್ರಿಗಳು; ಅವರು ಎರಡನೇ ಬಾರಿ ಕಷ್ಟಪಟ್ಟು ಮುಖ್ಯಮಂತ್ರಿ ಆಗಿದ್ದಾರೆ. ಜನರಲ್ಲಿ ಕೆಟ್ಟ ಭಾವನೆ ಮೂಡಿಸುವ ಪರಿಸ್ಥಿತಿಯನ್ನು ಅವರೇ ನಿರ್ಮಾಣ ಮಾಡಿಕೊಳ್ಳುತ್ತಿದ್ದಾರೆ. ಇವರಿಗೆ ಜಾತಿಗಣತಿ ಯಾಕೆ ಬೇಕು? ಈ ರಾಜ್ಯ-ದೇಶ ಉದ್ಧಾರ ಆಗಬೇಕಾದರೆ ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ಮಾಡಲಿ. ಜಾತಿಗಣತಿ ಮಾಡಿ ಜಾತಿ ಜಾತಿಗಳ ನಡುವೆ ವಿಷ ಬೀಜ ಬಿತ್ತುತ್ತಿದ್ದಾರೆ. ಈಗ ಮುಸ್ಲೀಮರಿಗೆ ಹಣ ಕೊಡುತ್ತೇವೆ ಎಂದು ಹೇಳಿ ಅವರ ಹೆಸರಿನಲ್ಲಿಯೂ ಅಲ್ಲೂ ಕಮಿಷನ್ ಹೊಡೆಯುತ್ತಾರೆ ಅಷ್ಟೇ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಮುಸ್ಲಿಮರಿಗೇನೋ ಹತ್ತು ಸಾವಿರ ಕೋಟಿ ಕೋಡುತ್ತೀರಿ. ಉಳಿದವರ ಪಾಡೇನು? ರೈತರಿಗೆ ಏನು ಕೊಡುತ್ತೀರಿ? ರೈತರ ಮನೆ ಬಳಿ ಬ್ಯಾಂಕ್ʼ‌ನವರು, ಖಾಸಗಿ ಲೇವಾದೇವಿಗಾರರು ಬಂದು ನಿಲ್ಲುತ್ತಿದ್ದಾರೆ. ಅವರ ಕಡೆ ನಿಮ್ಮ ಕೊಡುಗೆ ಏನು? ಮತಕ್ಕಾಗಿ ಓಲೈಕೆ ಮಾಡಿಕೊಳ್ಳುತ್ತಿದ್ದೀರಿ. ಹತ್ತು ಸಾವಿರ ಕೋಟಿ ಕೊಟ್ಟು ಅವರಿಗೇನು ಚಿನ್ನದ ತಗಡು ಹೊರುಸ್ತಿರಾ, ನೀವು ಲೂಟಿ ಹೊಡೆಯಲು ಹೀಗೆ ಮಾಡುತ್ತಿದ್ದೀರಿ. ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು, ಈ ಸರಕಾರದಲ್ಕೂ ಭ್ರಷ್ಟಾಚಾರ ಇದೆ ಅಂದಿದ್ದಾರೆ. ಈ ಸರಕಾರದ ಯೋಗ್ಯತೆ ಏನು ಎನ್ನುವುದು ಲೋಕಸಭೆ ಚುನಾವಣೆಯಲ್ಲಿ ಗೊತ್ತಾಗುತ್ತದೆ ಎಂದು ಅವರು ಟೀಕಾಪ್ರಹಾರ ನಡೆಸಿದರು.

ಎತ್ತಿನಹೊಳೆಯಿಂದ ಪ್ರವಾಹ ಬರುತ್ತದೆ!
ಎತ್ತಿನಹೊಳೆ ಟ್ರಯಲ್ ರನ್ ವೇಳೆ ಪೈಪ್ ಹೊಡೆದು ನೀರು ಹರಿದ ವಿಚಾರದ ಬಗ್ಗೆ ವ್ಯಂಗ್ಯವಾಡಿದ ಮಾಜಿ ಮುಖ್ಯಮಂತ್ರಿಗಳು; ಕೆಲ ದಿನಗಳ ಹಿಂದೆ ಎತ್ತಿನಹೊಳೆ ಯೋಜನೆ ಟ್ರಯಲ್ ರನ್ ಆಗಿದೆ. ಹಾಗೆ ಮಾಡುವಾಗ ಪೈಪ್‌ ಒಡೆದು ನೀರು ಹೊರಬಂದದಿದೆ. ಮುಂದಿನ ದಿನಗಳಲ್ಲಿ ಎತ್ತಿನಹೊಳೆಯಿಂದ ಕೋಲಾರ, ಚಿಕ್ಕಬಳ್ಳಾಪುರಕ್ಕೆ ಪ್ರವಾಹವೇ ಬರಬಹುದು ಎಂದು ಸರಕಾರಕ್ಕೆ ಟಾಂಗ್‌ ಕೊಟ್ಟರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು
Kalahamsa Infotech private limited
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BJP HighcomanBKHariprasadHassanKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬಿಕೆ ಹರಿಪ್ರಸಾದ್ಬಿಜೆಪಿ ಕೇಂದ್ರ ನಾಯಕರುಹಾಸನ
Share201Tweet123Send
Previous Post

ಶರಾವತಿ ಸಂತ್ರಸ್ತರಿಗೆ ಭೂ ಹಕ್ಕು ಕೊಡಿ: ಸಮುದಾಯದ ಪರವಾಗಿ ಸಚಿವ ಮಧು ಬಂಗಾರಪ್ಪ ಕೈ ಮುಗಿದು ಮನವಿ

Next Post

ಬದುಕಿನ ವಿವಿಧ ಸ್ತರಗಳ ಅನುಭವವಿರುವ ಕ್ರಿಯಾಶೀಲ ವ್ಯಕ್ತಿ ಟಿ.ಎನ್. ಸೀತಾರಾಂ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬದುಕಿನ ವಿವಿಧ ಸ್ತರಗಳ ಅನುಭವವಿರುವ ಕ್ರಿಯಾಶೀಲ ವ್ಯಕ್ತಿ ಟಿ.ಎನ್. ಸೀತಾರಾಂ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬದುಕಿನ ವಿವಿಧ ಸ್ತರಗಳ ಅನುಭವವಿರುವ ಕ್ರಿಯಾಶೀಲ ವ್ಯಕ್ತಿ ಟಿ.ಎನ್. ಸೀತಾರಾಂ: ಮುಖ್ಯಮಂತ್ರಿ ಸಿದ್ದರಾಮಯ್ಯ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

April 11, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

April 11, 2026
ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

April 11, 2026
ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

April 11, 2026
ಕೃತಕ ಬುದ್ಧಿಮತ್ತೆ ಪ್ರಯೋಜನ ಪಡೆಯುವಾಗ ಎಚ್ಚರಿಕೆ ಅಗತ್ಯ: ಪ್ರೊ. ಶರತ್  ಅನಂತಮೂರ್ತಿ

ಕೃತಕ ಬುದ್ಧಿಮತ್ತೆ ಪ್ರಯೋಜನ ಪಡೆಯುವಾಗ ಎಚ್ಚರಿಕೆ ಅಗತ್ಯ: ಪ್ರೊ. ಶರತ್  ಅನಂತಮೂರ್ತಿ

April 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL