ಕಲ್ಪ ಮೀಡಿಯಾ ಹೌಸ್ | ಹಾಸನ |
ಸಂವಿಧಾನದ ಆಶಯಗಳು ಮತ್ತು ಪತ್ರಿಕೋದ್ಯಮದ ಆಶಯಗಳು ಒಂದೇ ಆಗಿವೆ. ಹಾಗೆಯೇ ಸಂವಿಧಾನದ ಮತ್ತು ಪತ್ರಿಕೋದ್ಯಮದ ಆಶಯಗಳೇ ಸಿದ್ದರಾಮಯ್ಯ ಅವರ ಆಶಯಗಳಾಗಿವೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ. ಪ್ರಭಾಕರ್ ಅಭಿಪ್ರಾಯಪಟ್ಟರು.
ಹಾಸನ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಮ್ಮಿಕೊಂಡಿದ್ದ ಮಾಧ್ಯಮ ದಿನಾಚರಣೆಯಲ್ಲಿ ಪ್ರಧಾನ ಉಪನ್ಯಾಸ ನೀಡಿ ಅವರು ಮಾತನಾಡಿದರು.

ನೈಜ ಪತ್ರಕರ್ತರು ಸಮಾಜವನ್ನೇ ತಮ್ಮ ಕುಟುಂಬದಂತೆ ಭಾವಿಸುತ್ತಾರೆ. ಹೀಗಾಗಿ ಸಮಾಜ ಪತ್ರಕರ್ತ ಸಮೂಹದ ಪರವಾಗಿ ಇರಬೇಕು. ಜಿಲ್ಲಾ ಮತ್ತು ತಾಲ್ಲೂಕು , ಗ್ರಾಮೀಣ ಮಟ್ಟದಲ್ಲಿ ಪತ್ರಕರ್ತ ಸಮೂಹ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದು ಈ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರದ ನೆರವು ಒದಗಿಸಿಕೊಡಲು ಶ್ರಮಿಸುತ್ತೇನೆ. ರಾಜ್ಯ ಬಹಳ ಆರ್ಥಿಕ ಸಂಕಷ್ಟದಲ್ಲಿದ್ದಾಗಲೂ ಪತ್ರಕರ್ತರ ಮಾಸಾಶನ ಮತ್ತಿತರ ಬೇಡಿಕೆಗಳನ್ನು ಮುಖ್ಯಮಂತ್ರಿಗಳು ಈ ಬಜೆಟ್ ನಲ್ಲಿ ಈಡೇರಿಸಿದ್ದಾರೆ. ಮುಂದಿನ ಬಜೆಟ್ ಗಳಲ್ಲಿ ಇನ್ನಷ್ಟು ನೆರವು ನಮ್ಮ ಸಮೂಹಕ್ಕೆ ಒದಗಿಸಲು ಶ್ರಮಿಸುವುದಾಗಿ ಭರವಸೆ ನೀಡಿದರು.

ಶಾಸಕ ಶಿವಲಿಂಗೇಗೌಡರು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು, ಪತ್ರಕರ್ತರ ಸಂಘದ ಜಿಲ್ಲಾ ಮತ್ತು ತಾಲ್ಲೂಕು ಪದಾಧಿಕಾರಿಗಳು ವೇದಿಕೆಯಲ್ಲಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post