ಕಲ್ಪ ಮೀಡಿಯಾ ಹೌಸ್
ಹಾಸನ: ಅಬಕಾರಿ ಸಚಿವರು ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಗೋಪಾಲಯ್ಯ ಅವರು ಇಂದು ಜಿಲ್ಲೆಯ ಶಾಂತಿಗ್ರಾಮ ಪದವಿ ಪೂರ್ವ ಕಾಲೇಜಿಗೆ ಭೇಟಿ ನೀಡಿ ಕೋವಿಡ್ ಸುರಕ್ಷತಾ ಕ್ರಮಗಳು ಮತ್ತು ಬೋಧನಾ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳೊಂದಿಗೆ ಮಾತನಾಡಿದ ಅವರು, ಧೈರ್ಯವಾಗಿ ಕಾಲೇಜಿಗೆ ಆಗಮಿಸಿ ಕಲಿಕೆ ಬಗ್ಗೆ ಗಮನ ಹರಿಸಿ, ಜಿಲ್ಲಾಡಳಿತ ಹಾಗೂ ಸರ್ಕಾರ ವಿದ್ಯಾರ್ಥಿಗಳ ಆರೋಗ್ಯ ಸುರಕ್ಷತೆ ಬಗ್ಗೆ ಕಾಳಜಿ ವಹಿಸಲಿದೆ. ಜ್ವರ ಅಥವಾ ಆರೋಗ್ಯ ಸಮಸ್ಯೆ ಕಂಡು ಬಂದಲ್ಲಿ ತಕ್ಷಣ ಉಪನ್ಯಾಸಕರ ಗಮನಕ್ಕೆ ತರುವಂತೆ ಅವರು ಹೇಳಿದರು.
ಕಾಲೇಜಿನಲ್ಲಿ ಪ್ರತಿ ದಿನ ಎಲ್ಲಾ ವಿದ್ಯಾರ್ಥಿಗಳಿಗೆ ಕೋವಿಡ್ ಸ್ಕ್ರೀನಿಂಗ್ ಮಾಡಿ, ಸೋಂಕು ಹಾಗೂ ಸುರಕ್ಷತಾ ಕ್ರಮಗಳ ಬಗ್ಗೆ ತಿಳುವಳಿಕೆ ನೀಡಿ, ಅನಾರೋಗ್ಯ ಲಕ್ಷಣ ಕಂಡು ಬಂದರೆ ತಕ್ಷಣ ವೈದ್ಯಕೀಯ ತಪಾಸಣೆಗೆ ಒಳಪಡಿಸಿ ಎಂದು ಪ್ರಾಂಶುಪಾಲರು ಮತ್ತು ಉಪನ್ಯಾಸಕರಿಗೆ ಸೂಚನೆ ನೀಡಿದರು.
ಶಾಸಕರಾದ ಸಿ.ಎನ್. ಬಾಲಕೃಷ್ಣ, ವಿಧಾನ ಪರಿಷತ್ ಸದಸ್ಯರಾದ ಎಂ.ಎ. ಗೋಪಾಲಸ್ವಾಮಿ ಸಚಿವರ ಆಪ್ತ ಕಾರ್ಯದರ್ಶಿ ಕಾಂತರಾಜ್ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಜರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post