No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Friday, September 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಹಾಸನ

ಸಿ.ಟಿ. ರವಿ ಪ್ರಕರಣ | ಪೊಲೀಸ್ ವ್ಯವಸ್ಥೆ ಗೌರವ ಮಣ್ಣುಪಾಲು | ಹೆಚ್.ಡಿ. ಕುಮಾರಸ್ವಾಮಿ ಕಿಡಿ

kalpa News by kalpa News
December 23, 2024
in ಹಾಸನ
0
5 ತಿಂಗಳಲ್ಲಿ 45 ಸಾವಿರ ಕೋಟಿ ರೂ. ಸಾಲಮನ್ನಾ: ಕುಮಾರಸ್ವಾಮಿ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಹಾಸನ  |

ಸಿ.ಟಿ.ರವಿ ಪ್ರಕರಣದಲ್ಲಿ #C T Ravi Case ಬೆಳಗಾವಿ ಪೊಲೀಸರು ನಡೆದುಕೊಂಡ ರೀತಿಯ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ #H D Kumaraswamy ಅವರು; ಬಿಜೆಪಿ ಸ್ನೇಹಿತರು ಸರಿಯಾದ ರೀತಿಯಲ್ಲಿ ಕಾನೂನು ಹೋರಾಟ ಮಾಡಿದರೆ ಪ್ರಕರಣಕ್ಕೆ ಸಂಬಂಧಪಟ್ಟ ಎಲ್ಲಾ ಪೊಲೀಸ್ ಅಧಿಕಾರಿಗಳೆಲ್ಲಾ ಸಸ್ಪೆಂಡ್ ಆಗುತ್ತಾರೆ ಎಂದರು.

ಹೊಳೆನರಸೀಪುರ ತಾಲೂಕಿನ ಹರದನಹಳ್ಳಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಕೇಂದ್ರ ಸಚಿವರು; ರಾಜ್ಯಸಭೆಯಲ್ಲಿನ ಅಮಿತ್ ಶಾ ಅವರ ಹೇಳಿಕೆ ಬಗ್ಗೆ ಇವರು ವಿಧಾನಸಭೆಯಲ್ಲಿ ಚರ್ಚೆ ಮಾಡಿದ್ದಾರೆ. ಇದು ರಾಜ್ಯಸಭೆಯಲ್ಲಿ ಪ್ರಾರಂಭವಾದದ್ದು. ಈ ವಿಷಯ ಆ ಸದನಕ್ಕೆ ಸಂಬಂಧಪಟ್ಟ ವಿಷಯ. ಅಮಿತ್ ಶಾ ಅವರು ವಿಧಾನ ಪರಿಷತ್ ಸದಸ್ಯರಾ? ಎಂದು ಅವರು ಖಾರವಾಗಿ ಪ್ರಶ್ನಿಸಿದರು.
ಉತ್ತರ ಕರ್ನಾಟಕದ ಸಮಸ್ಯೆ ಬಗ್ಗೆ ಚರ್ಚೆಗೆ ವಿಶೇಷವಾದ ಅವಕಾಶ ಕೊಡುತ್ತೇವೆ ಎಂದು ಡಂಗೂರ ಹೊಡೆದರು. ನಿನ್ನೆಯೂ ಒಬ್ಬ ಹೆಣ್ಣುಮಗಳು ಬಳ್ಳಾರಿಯಲ್ಲಿ ಮಗುವಿಗೆ ಜನ್ಮ ಕೊಡುವಾಗ ತೀರಿಕೊಂಡಿದ್ದಾಳೆ. ಪ್ರತಿನಿತ್ಯ ಈ ಸಾವುಗಳು ಸಂಭವಿಸುತ್ತಿವೆ. ಇದ್ಯಾವುದರ ಬಗ್ಗೆ ರಾಜ್ಯ ಸರಕಾರಕ್ಕೆ ಕಿಂಚಿತ್ತೂ ಚಿಂತೆ ಇಲ್ಲ ಎಂದು ಕೇಂದ್ರ ಸಚಿವರು ಕಟುವಾಗಿ ಟೀಕಿಸಿದರು.

ಈ ಸರಕಾರಕ್ಕೆ ನಾಡಿನ ಭವಿಷ್ಯದ ಬಗ್ಗೆ ಚಿಂತೆ ಇಲ್ಲ. ಕೆಲವು ಪೊಲೀಸ್ ಅಧಿಕಾರಿಗಳನ್ನು ಇಟ್ಟುಕೊಂಡು ರಾಜಕೀಯ ವಿರೋಧಿಗಳನ್ನು ದಮನ ಮಾಡಲು ಹೊರಟಿದ್ದಾರೆ. ಸಿ.ಟಿ.ರವಿ ಅವರನ್ನು ರಾತ್ರಿಯೆಲ್ಲಾ ಸುತ್ತಿಸಬೇಕಿತ್ತಾ? ಅವರು ಒಬ್ಬ ಜನಪ್ರತಿನಿಧಿ ಇದ್ದಾರೆ. ಬಂಧಿಸುವುದಿದ್ದರೆ ನೇರವಾಗಿ ಬೆಂಗಳೂರಿನ ಜನಪ್ರತಿನಿಧಿ ಕೋರ್ಟ್‌ಗೆ ಕರೆದುಕೊಂಡು ಬರಬಹುದಿತ್ತು. ರಾತ್ರಿಯೆಲ್ಲಾ ಸುತ್ತಿಸಬೇಕಾದ ಅವಶ್ಯಕತೆ ಏನಿತ್ತು? ಇದಕ್ಕೆಲ್ಲ ಯಾರು ಡೈರೆಕ್ಷನ್ ಕೊಟ್ಟವರು? ಬಿಜೆಪಿ ಸ್ನೇಹಿತರು ಸರಿಯಾದ ರೀತಿ ಕಾನೂನು ವ್ಯಾಪ್ತಿಯಲ್ಲಿ ಹೋರಾಟ ಮಾಡಿದರೆ  ಅಧಿಕಾರಿಗಳೆಲ್ಲಾ ಸಸ್ಪೆಂಡ್ ಆಗುತ್ತಾರೆ. ಮಂತ್ರಿಯೊಬ್ಬರ ಚಿತಾವಣೆಯಿಂದ ಯಾವ ಅಧಿಕಾರಿಗಳು ಸಿ.ಟಿ.ರವಿಗೆ ಮಾನಸಿಕವಾಗಿ ಹಿಂಸೆ ಕೊಟ್ಟಿದ್ದಾರೆ ಅವರು ಅದರ ಪ್ರತಿಫಲ ಎದುರಿಸಬೇಕಾಗುತ್ತದೆ ಎಂದು ಅವರು ಹೇಳಿದರು.

Also read: ಶಿವಮೊಗ್ಗ | ಡಿ.25-31 | ವೀಣಾನಾದ ಯಜ್ಞ | ರಾಷ್ಟ್ರೀಯ ವೀಣಾ ಮಹೋತ್ಸವ ಸಪ್ತಾಹ

ಸೇಡಿನ ರಾಜಕೀಯ; ರಾಜ್ಯಕ್ಕೆ ಕೆಟ್ಟ ದಿನಗಳು ಕಾದಿವೆ!

ಸಚಿವ ಸತೀಶ್ ಜಾರಕಿಹೋಳಿ ಅವರು ಸಿ.ಟಿ.ರವಿ ಅವರನ್ನು ಕೋರ್ಟ್ ಮುಂದೆ ಹಾಜರುಪಡಿಸಿ ಎಂದು ಹೇಳಿದ್ದಾರೆ. ಇನ್ನೊಬ್ಬರು ಇನ್ನೊಂದು ಕಥೆ ಹೇಳುತ್ತಾರೆ. ಈ ರಾಜ್ಯದಲ್ಲಿ ಗೃಹ ಸಚಿವರು ಎನ್ನುವವರು ಇದ್ದಾರಾ? ಕಳೆದ ಆರೇಳು ತಿಂಗಳಿನಿಂದ ಹಲವಾರು ಪ್ರಕರಣಗಳು ಈ ರಾಜ್ಯದಲ್ಲಿ ನಡೆಯುತ್ತಿವೆ. ಕರ್ನಾಟಕಕ್ಕೆ ಭವಿಷ್ಯದಲ್ಲಿ ಅತ್ಯಂತ ಕೆಟ್ಟ ದಿನಗಳು ಕಾದಿವೆ. ರಾಜಕಾರಣದಲ್ಲಿ ವೈಷಮ್ಯ, ದ್ವೇಷ ಬೆಳೆಯಲು ಇವರು ಬೀಜ ಬಿತ್ತನೆ ಮಾಡಿದ್ದಾರೆ. ಮುಂದೆಯೂ ಸಹ ಇಂತಹುದೇ ಕೆಟ್ಟ ಪರಿಸ್ಥಿತಿ ಮುಂದುವರಿಯುತ್ತದೆ ಎನ್ನುವುದರಲ್ಲಿ ಯಾವುದೇ ಅನುಮಾನ ಬೇಡ ಎಂದು ಕುಮಾರಸ್ವಾಮಿ ಅವರು ಕಳವಳ ವ್ಯಕ್ತಪಡಿಸಿದರು.

ರಾಜ್ಯದ ಪೊಲೀಸ್ ವ್ಯವಸ್ಥೆ ಇಡೀ ದೇಶಕ್ಕೆ ಮಾದರಿ ಆಗಿತ್ತು. ನಮ್ಮ ಪೂರ್ವಿಕರು ರಾಜ್ಯದಲ್ಲಿ ಉತ್ತಮ ವಾತಾವರಣ, ವ್ಯವಸ್ಥೆಯನ್ನು ರೂಪಿಸಿದ್ದರು. ಕರ್ನಾಟಕ ಪೊಲೀಸ್ ಎಂದರೆ ದೇಶದಲ್ಲಿಯೇ ಗೌರವ ಇತ್ತು. ದುರದೃಷ್ಟ ಎಂದರೆ, ಅದೆಲ್ಲವನ್ನೂ ಸರ್ವನಾಶ ಮಾಡಲು ಈ ಸರಕಾರ ಹೊರಟಿದೆ. ಪೊಲೀಸರ ಗೌರವವನ್ನು ಮಣ್ಣುಪಾಲು ಮಾಡುವ ನಿಟ್ಟಿನಲ್ಲಿ ಇವರು ಕೆಲಸ ಮಾಡುತ್ತಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಪ್ರಕರಣವನ್ನು ಏನು ಮಾಡಿದಿರಿ? ಕಾಂಗ್ರೆಸ್ ನಾಯಕ ಗುರಪ್ಪ ನಾಯ್ಡ ಮೇಲೆ ಶಿಕ್ಷಕರೊಬ್ಬರು ದೂರು ಕೊಟ್ಟರಲ್ಲ, ಆ ದೂರು ಏನಾಯಿತು? ರಾಜ್ಯದಲ್ಲಿ ಏನೇನು ನಡೆಯುತ್ತಿದೆ ಎಂಬುದನ್ನು ಗಮನಿಸುತ್ತಿದ್ದೇನೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ರಾಜಕೀಯ ವಿರೋಧಿಗಳಿಗೆ ಹೇಗೆಲ್ಲಾ ಕಿರುಕುಳ ನೀಡಲಾಗುತ್ತಿದೆ ಎಂಬುದನ್ನು ನಾನು ಬಲ್ಲೆ. ಕರ್ನಾಟಕದಲ್ಲಿ ಮುಂದಿನ ದಿನಗಳಲ್ಲಿ ರಾಜಕಾರಣ ಯಾವ ರೀತಿ ಹೋಗಬಹುದು ಎನ್ನುವುದಕ್ಕೆ ಕಾಂಗ್ರೆಸ್ ನವರು ವೇದಿಕೆ ಸಿದ್ಧ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವರು ಬೇಸರ ವ್ಯಕ್ತಪಡಿಸಿದರು.

ನಾನು ಸಂಪೂರ್ಣವಾಗಿ ಪೊಲೀಸ್ ಇಲಾಖೆಗೆ ದೋಷ ಕೊಡಲು ಹೋಗುವುದಿಲ್ಲ. ಇವತ್ತು ಸರಕಾರದಲ್ಲಿರುವ ಮಂತ್ರಿಗಳು ಕೆಲವು ಆಯ್ದ  ಪೊಲೀಸ್ ಅಧಿಕಾರಿಗಳಿಗೆ ಡೈರೆಕ್ಷನ್ ಕೊಡುವ ಮೂಲಕ ಇಲಾಖೆಯಲ್ಲಿ ಕಾನೂನು ಬಾಹಿರ ತೀರ್ಮಾನಗಳಾಗುತ್ತಿವೆ. ತಮಗೆ ಬೇಕಾದಂತೆ ಕೇಸ್‌ಗಳನ್ನು ಬುಕ್ ಮಾಡುತ್ತಿದ್ದಾರೆ. ಯಾವ ರೀತಿ ಅವರ ವಿರೋಧಿಗಳನ್ನು ಸದೆಬಡೆಯಬೇಕೆಂದು ಅಧಿಕಾರ ದುರುಪಯೋಗ, ಕಾನೂನಿನ ಉಲ್ಲಂಘನೆ ಎಂಬುದು ಸರಕಾರದಿಂದಲೇ ಆಗುತ್ತಿದೆ. ನಾನು ಈಗಷ್ಟೇ ದೇವಸ್ಥಾನದಲ್ಲಿ ಪೂಜೆ ಮಾಡಿ ಬಂದು ನಿಂತು ಹೇಳುತ್ತಿದ್ದೇನೆ, ಕಾಲವೇ ಇದಕ್ಕೆಲ್ಲ ಉತ್ತರ ಕೊಡುತ್ತದೆ ಎಂದು ಅವರು ಎಚ್ಚರಿಕೆ ನೀಡಿದರು.

ಇದು ಅನಾಗರಿಕ ಸರಕಾರ

ಕಲ್ಬುರ್ಗಿಯಲ್ಲಿ ಸಿಎಂ ಅವರು ಜಯದೇಶ ಆಸ್ಪತ್ರೆ ಉದ್ಘಾಟನೆ ಮಾಡಿದ್ದಾರೆ, ಆ ಆಸ್ಪತ್ರೆಗೆ ಏನಿದೆ ಅವರ ಕೊಡುಗೆ? ನಾನು ಸಿಎಂ ಆಗಿದ್ದಾಗ ಅದಕ್ಕೆ ಚಾಲನೆ ಕೊಟ್ಟಿದ್ದೆ. ನಂತರ ಬಂದ ಬಿಜೆಪಿ ಸರಕಾರ ₹128 ಕೋಟಿ ಹಣ ಬಿಡುಗಡೆ ಮಾಡಿತ್ತು. ಜಯದೇವ ಆಸ್ಪತ್ರೆಯಿಂದ ಡಾ.ಸಿ.ಎನ್.ಮಂಜುನಾಥ್ ಅವರು ₹40 ಕೋಟಿ ಸಂಗ್ರಹಿಸಿ ಹೂಡಿಕೆ ಮಾಡಿದ್ದರು. ಹಿಂದೆ ಕೆಲಸ ಮಾಡಿರುವವರನ್ನು ನೆನಪಿಸಿಕೊಳ್ಳುವಂತಹ ಕೃತಜ್ಞತೆ ಇಲ್ಲದಂತಹ ಅನಾಗರೀಕ ಸರಕಾರ ಇದು. ಇವರ ಕೊಡುಗೆ ಏನೂ ಇಲ್ಲ. ಈಗ ನೋಡಿದರೆ ನಿಮ್ಹಾನ್ಸ್  ಮಾಡ್ತಾರಂತೆ ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದರು.

ಸದ್ಯಕ್ಕೆ ಇರುವ ಆಸ್ಪತ್ರೆಗಳನ್ನೇ ನೆಟ್ಟಗೆ ಇಟ್ಟುಕೊಂಡಿಲ್ಲ. ಉತ್ತರ ಕರ್ನಾಟಕದಲ್ಲಿ ಪ್ರತಿನಿತ್ಯ ಬಾಣಂತಿಯರು, ಮಕ್ಕಳ ಸರಣಿ ಸಾವು ಮುಂದುವರಿದೆ. ಬಹಳ ನೋವಾಗುತ್ತದೆ. ಇದನ್ನೆಲ್ಲಾ ತಡೆಯಲು ಏನು ಕ್ರಮ ತೆಗೆದುಕೊಂಡಿದ್ದೀರಿ. ಆಸ್ಪತ್ರೆಗಳಲ್ಲಿ ವೈದ್ಯರು, ಸಿಬ್ಬಂದಿ ಕೊರತೆ ಇದೆ. ನೀವು ರಾಜ್ಯ ಕಟ್ಟುತ್ತೀರಾ? ಎಂದು ಅವರು ಅವರು ಹೇಳಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4
Tags: C T Ravi CaseH D KumaraswamyHassanKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿಸಿ.ಟಿ.ರವಿ ಪ್ರಕರಣಹಾಸನ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ | ಡಿ.25-31 | ವೀಣಾನಾದ ಯಜ್ಞ | ರಾಷ್ಟ್ರೀಯ ವೀಣಾ ಮಹೋತ್ಸವ ಸಪ್ತಾಹ

Next Post

ಭೂ ಸ್ವಾಧೀನ ಕೈಬಿಡುವಂತೆ ಚನ್ನರಾಯಪಟ್ಟಣ ರೈತ ನಿಯೋಗ ಸಿಎಂಗೆ ಮನವಿ

kalpa News

kalpa News

Next Post
ಭೂ ಸ್ವಾಧೀನ ಕೈಬಿಡುವಂತೆ ಚನ್ನರಾಯಪಟ್ಟಣ ರೈತ ನಿಯೋಗ ಸಿಎಂಗೆ ಮನವಿ

ಭೂ ಸ್ವಾಧೀನ ಕೈಬಿಡುವಂತೆ ಚನ್ನರಾಯಪಟ್ಟಣ ರೈತ ನಿಯೋಗ ಸಿಎಂಗೆ ಮನವಿ

Leave a Reply Cancel reply

Your email address will not be published. Required fields are marked *

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL