ಕಲ್ಪ ಮೀಡಿಯಾ ಹೌಸ್ | ಹಾಸನ |
ಇಲ್ಲಿನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಆವರಣದಲ್ಲಿಯೇ ಪೊಲೀಸ್ ಕಾನ್‌ಸ್ಟೇಬಲ್ ಓರ್ವ ತನ್ನ ಪತ್ನಿಗೆ ಚಾಕು ಇರಿದಿರುವ ದಾರುಣ ಘಟನೆ ನಡೆದಿದ್ದು, ಇದಕ್ಕೆ ಕೌಟುಂಬಿಕ ಕಲಹವೇ ಕಾರಣ ಎಂದು ಹೇಳಲಾಗಿದೆ.
ಹಾಸನ ನಗರ ಪೊಲೀಸ್ ಠಾಣೆಯ ಕಾನ್‌ಸ್ಟೇಬಲ್ ಲೋಕನಾಥ್ ಮತ್ತು ಮಮತಾ ಮಧ್ಯೆ 4-5 ದಿನಗಳಿಂದ ಜಗಳ ನಡೆದಿತ್ತು. ಘಟನೆ ಹಿನ್ನೆಲೆಯಲ್ಲಿ ಇಂದು ಪತಿ ವಿರುದ್ಧ ದೂರು ನೀಡಲು ಎಸ್’ಪಿ ಕಚೇರಿಗೆ ಪತ್ನಿ ಬಂದಿದ್ದಾರೆ. ಇದನ್ನು ಗಮನಿಸಿದ ಲೋಕನಾಥ್ ಕಚೇರಿ ಆವರಣದಲ್ಲೇ ಮಮತಾ ಎದೆಗೆ ಚೂರಿ ಇರಿದಿದ್ದಾನೆ. ಇದರಿಂದ ಮಹಿಳೆ ಕುಸಿದು ಬಿದ್ದಿದ್ದಾರೆ.
Also read: ಭಾರತೀಯ ನ್ಯಾಯ ಸಂಹಿತೆ ಜಾರಿ | ದೇಶದ ಮೊದಲ ಕೇಸ್ ದಾಖಲಾಗಿದ್ದು ಎಲ್ಲಿ? ಯಾರು ಮೊದಲ ಅಪರಾಧಿ?
ಕೂಡಲೇ ಅಲ್ಲಿದ್ದ ಮಂದಿ ಮಮತಾ ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದರೂ ಸಹ ಚಿಕಿತ್ಸೆ ಫಲಕಾರಿಯಾಗದೇ ಮಮತಾ ಮೃತಪಟ್ಟಿದ್ದಾರೆ.
ಪತ್ನಿಯನ್ನು ಹತ್ಯೆ ಮಾಡಿದ ನಂತರ ಪರಾರಿಯಾಗಿದ್ದ ಲೋಕನಾಥ್’ನನ್ನು ಬಂಧಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post