ಕಲ್ಪ ಮೀಡಿಯಾ ಹೌಸ್ | ಹಾಸನ |
ನಗರಸಭೆಯಿಂದ ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೇರಿರುವ ಹಾಸನ ನಗರ ವ್ಯಾಪ್ತಿಯ 30 ಪ್ರಮುಖ ರಸ್ತೆಗಳನ್ನು ಮೇಲ್ದರ್ಜೆಗೇರಿಸಲು 30 ಕೋಟಿ ರೂ. ಹೆಚ್ಚುವರಿ ಅನುದಾನ ಬಿಡುಗಡೆಗೆ ಕ್ರಮ ವಹಿಸುವುದಾಗಿ ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಸಚಿವ ನಿತಿನ್ ಗಡ್ಕರಿ #Minister Nitin Gadkari ಭರವಸೆ ನೀಡಿದ್ದಾಎ.
ಈ ಕುರಿತಂತೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು #H D Devegowda ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಪತ್ರ ಬರೆದಿದ್ದರು. ಇದಕ್ಕೆ ಸ್ಪಂದಿಸಿರುವ ಸಚಿವರು, ಹೆಚ್ಚುವರಿ ಅನುದಾನ ಬಿಡುಗಡೆಗೆ ಕ್ರಮ ವಹಿಸುವುದಾಗಿ ಭವರಸೆ ನೀಡಿದ್ದಾರೆ.

ಈ ಪತ್ರಕ್ಕೆ ಪೂರಕವಾಗಿ ಸ್ಪಂದಿಸಿರುವ ಕೇಂದ್ರ ಸಚಿವರು, ತಮ್ಮ ಪತ್ರ ವಿಷಯ ಗಮನಕ್ಕೆ ಬಂದಿದ್ದು, ನಿಮ್ಮ ಕಾಳಜಿ, ಸದುz್ದೆÃಶಕ್ಕೆ ಧನ್ಯವಾದಗಳು, ನಿಮ್ಮ ಕೋರಿಕೆ ಪರಿಗಣಿಸಲಾಗುವುದು. ಅನುದಾನ ಬಿಡುಗಡೆಗೆ ಅನುಮತಿ ನೀಡುವ ಭರವಸೆ ನೀಡಿ ಕಳೆದ ಜೂ.6 ರಂದು ದೇವೇಗೌಡರಿಗೆ ಸಚಿವರು ಮರುಪತ್ರದ ಮೂಲಕ ಪ್ರತಿಕ್ರಿಯಿಸಿದ್ದಾರೆ ಎಂದು ವರದಿಯಾಗಿದೆ.

ಪ್ರಸ್ತಾವನೆ ಸಲ್ಲಿಸಲು ಸೂಚನೆ
ಇದೇ ವೇಳೆ, ಶಾಸಕರು ಹಾಗೂ ರಾಜ್ಯ ಸಭೆ ಸದಸ್ಯರು ವಿಶೇಷ ಅನುದಾನ ಕೋರಿ ಪತ್ರ ಬರೆದ ನಂತರ ಸದರಿಯವರ ಪ್ರಸ್ತಾವನೆಗೆ ನಿಯಮಾನುಸಾರ ಪರಿಶೀಲಿಸಿ ಸ್ಪಷ್ಟ ಅಭಿಪ್ರಾಯದೊಂದಿಗೆ ಪ್ರಸ್ತಾವನೆ ಸಲ್ಲಿಸುವಂತೆ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ, ಪೌರಾಡಳಿತ ನಿರ್ದೇಶನಾಲಯಕ್ಕೆ ಸೂಚನೆ ನೀಡಿದ್ದರು. ಅದಾದ ಬಳಿಕ ಪೌರಾಡಳಿತ ನಿರ್ದೇಶಕರು ಹಿಂದಿನ ಜಿಲ್ಲಾಧಿಕಾರಿ ಅವರಿಗೆ ಕಳೆದ ಫೆಬ್ರವರಿಯಲ್ಲಿ ಪತ್ರ ಬರೆದಿದ್ದರು. ತರುವಾಯ ಹಣ ಮಂಜೂರಾತಿ ಬಗ್ಗೆ ಅವಶ್ಯಕ ಪ್ರಸ್ತಾವನೆ ಸಲ್ಲಿಸಲು ಡಿಸಿ, ಪೌರಾಯುಕ್ತರಿಗೆ ಸೂಚಿಸಿದ್ದಾರೆ.

ರಾಜ್ಯ ಸರ್ಕಾರಕ್ಕೂ ಪತ್ರ
ಇದಕ್ಕೂ ಮುನ್ನ ಇದೇ ದೇವೇಗೌಡರ ಮೂಲಕ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದ ಸ್ವರೂಪ್, ನಗರಸಭೆಯನ್ನು ಮೇಲ್ದರ್ಜೆಗೇರಿಸಿ ಸುತ್ತಲಿನ 25 ಗ್ರಾಮಗಳನ್ನು ಮಹಾನಗರ ಪಾಲಿಕೆಗೆ ಸೇರ್ಪಡೆ ಮಾಡಿರುವುದರಿಂದ ಸದರಿ ಗ್ರಾಮಗಳಿಗೆ ಮೂಲಸೌಕರ್ಯ ಕಲ್ಪಿಸಲು ವಿಶೇಷ ಅನುದಾನ ಬಿಡುಗಡೆ ಮಾಡಿಸಿಕೊಡಬೇಕೆಂದು ಕೋರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post