ಕಲ್ಪ ಮೀಡಿಯಾ ಹೌಸ್
ಹಾಸನ: ರಾಜ್ಯದ ಜಿಲ್ಲಾಧಿಕಾರಿಗಳೊಂದಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ನಿನ್ನೆ ವೀಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದ ನಂತರ ಕೊರೋನಾ ಸೋಂಕು ನಿಯಂತ್ರಿಸಲು ಹಲವು ಜಿಲ್ಲೆಗಳ ಜಿಲ್ಲಾಧಿಕಾರಿಗಳು ವಾರದಲ್ಲಿ ನಾಲ್ಕು ದಿನ ಸಂಪೂರ್ಣ ಲಾಕ್‌ಡೌನ್ ಮಾಡಲು ನಿರ್ಧರಿಸಿದ್ದಾರೆ.
ಚಾಮರಾಜನಗರ ಮತ್ತು ಶಿವಮೊಗ್ಗ ಜಿಲ್ಲಾಡಳಿತ ಈಗಾಗಲೇ ಈ ಕ್ರಮ ಕೈಗೊಂಡಿದ್ದು, ಹಾಸನದಲ್ಲಿ ಭಾನುವಾರ, ಮಂಗಳವಾರ, ಗುರುವಾರ ಮತ್ತು ಶನಿವಾರ ಸಂಪೂರ್ಣ ಲಾಕ್ ಡೌನ್ ಮಾಡಲಾಗುವುದು ಎಂದು ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಹೇಳಿದ್ದಾರೆ.
ಸೋಮವಾರ, ಬುಧವಾರ ಮತ್ತು ಶುಕ್ರವಾರ ಮಾತ್ರ ಬೆಳಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ದಿನಸಿ, ತರಕಾರಿ ಮತ್ತು ಇತರ ಅಗತ್ಯ ವಸ್ತುಗಳನ್ನು ಮಾರುವ ಅಂಗಡಿಗಳು ತೆರೆದಿರುತ್ತದೆ. ಆಸ್ಪತ್ರೆಗಳು, ನರ್ಸಿಂಗ್ ಹೋಂಗಳು, ವೈದ್ಯಕೀಯ ಮಳಿಗೆಗಳು, ಹಾಲಿನ ಕೇಂದ್ರಗಳು ಮತ್ತು ಪೆಟ್ರೋಲ್ ಪಂಪ್‌ಗಳು ಸೇರಿದಂತೆ ಇತರ ಅಗತ್ಯ ಸೇವೆಗಳು ಎಂದಿನಂತೆ ಕಾರ್ಯನಿರ್ವಹಿಸುತ್ತವೆ. ಮೇ ೨೪ರವರೆಗೆ ಲಾಕ್‌ಡೌನ್ ಜಾರಿಯಲಿರಲಿದ್ದು, ರಾಜ್ಯ ಸರ್ಕಾರದ ನಿರ್ದೇಶನದ ಆಧಾರದ ಮೇಲೆ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಚಿವ ಗೋಪಾಲಯ್ಯ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post