ಕಲ್ಪ ಮೀಡಿಯಾ ಹೌಸ್ | ಹಾಸನ |
ರಾಜ್ಯದಲ್ಲೇ ತಮ್ಮ ಸೌಮ್ಯ ಹಾಗೂ ಗಾಂಭೀರ್ಯದಿಂದ ಗಮನ ಸೆಳೆದಿರುವ ‘ಭೀಮ’ ಎಂಬ ಕಾಡಾನೆ #’Bhima’ elephant ವಿಚಾರದಲ್ಲಿ ಅರಣ್ಯ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದ್ದು, ಈ ಆನೆಯ ಫೋಟೋ ಹಾಗೂ ವಿಡಿಯೋ ಚಿತ್ರೀಕರಣ ಮಾಡುವುದನ್ನು ನಿಷೇಧಿಸಲಾಗಿದೆ.
ಈ ಕುರಿತಂತೆ ಅರಣ್ಯ ಇಲಾಖೆ ಕಟ್ಟುನಿಟ್ಟಿನ ನಿರ್ಬಂಧ ಹೇರಿದ್ದು, ಭೀಮ ಕಾಡಾನೆಯ ಸುರಕ್ಷತೆ ಹಾಗೂ ಸಾರ್ವಜನಿಕರ ಹಿತದೃಷ್ಠಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಲಾಗಿದೆ.
ಭೀಮ ಆನೆಯನ್ನು ನೋಡಲು ಇತ್ತೀಚೆಗೆ ದಿನಗಳಲ್ಲಿ ಹೆಚ್ಚಿನ ಜನರು ಆಗಮಿಸುತ್ತಿದ್ದಾರೆ. ಅಲ್ಲದೇ, ಆನೆಯೊಟ್ಟಿಗೆ ಸೆಲ್ಫಿ ಪಡೆಯಲು ಹತ್ತಿರ ಹೋಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಭೀಮನ ಚಲನವಲನಗಳನ್ನು ಚಿತ್ರೀಕರಿಸುವುದನ್ನು ತಕ್ಷಣದಿಂದಲೇ ನಿಲ್ಲಿಸಬೇಕು ಎಂದು ಆದೇಶಿಸಲಾಗಿದೆ.
ಆನೆ ಕಾರ್ಯಪಡೆ ಸಿಬ್ಬಂದಿ ದಿನದ 24 ಗಂಟೆಯೂ ಭೀಮನ ಮೇಲೆ ಕಣ್ಣಿಟ್ಟಿದ್ದಾರೆ. ಆನೆ ಸಂಚರಿಸುವ ಹಾದಿಯಲ್ಲಿ ಅಡ್ಡಿಪಡಿಸಬಾರದು ಎಂದು ವಿನಂತಿಸಲಾಗಿದೆ.
ವನ್ಯಜೀವಿ (ರಕ್ಷಣೆ) ಕಾಯ್ದೆ 1972ರ ಅಡಿಯಲ್ಲಿ ಕಾಡುಪ್ರಾಣಿಗಳಿಗೆ ತೊಂದರೆ ನೀಡುವುದು ಶಿಕ್ಷಾರ್ಹ ಅಪರಾಧ. ನಿಯಮ ಮೀರಿ ಫೋಟೊ, ವಿಡಿಯೊ ಅಥವಾ ಸೆಲ್ಫಿ ತೆಗೆದುಕೊಂಡರೆ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು.
ಕಾಡುಪ್ರಾಣಿಗಳ ವರ್ತನೆಯನ್ನು ಊಹಿಸಲು ಸಾಧ್ಯವಿಲ್ಲ. ಸಾರ್ವಜನಿಕರು ಪ್ರಾಣಾಪಾಯ ಮೈಮೇಲೆ ಎಳೆದುಕೊಳ್ಳಬಾರದು ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















