ಕಲ್ಪ ಮೀಡಿಯಾ ಹೌಸ್ | ಹಾಸನ |
ಲೋಕಸಭಾ ಕ್ಷೇತ್ರದ ಫಲಿತಾಂಶ #Loksabha Result ಪ್ರಕಟಗೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ವಿಜಯಮಾಲೆ ಧರಿಸಿದ್ದು, ಪ್ರಜ್ವಲ್ ರೇವಣ್ಣಗೆ #Prajwal Revanna ತೀವ್ರ ಮುಖಭಂಗವಾಗಿದೆ.
ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ 41187 ಮತಗಳ ಅಂತರದಿಂದ ಪ್ರಜ್ವಲ್ ಅವರನ್ನು ಸೋಲಿಸಿ, ಗೆದ್ದು ಬೀಗಿದ್ದಾರೆ.
Also read: ದಾಖಲೆ ಅಂತರದಲ್ಲಿ ತೇಜಸ್ವಿ ಸೂರ್ಯ ಗೆಲುವು | ಮತ್ತೆ ಹೀನಾಯವಾಗಿ ಸೋತ ಸೌಮ್ಯ ರೆಡ್ಡಿ
ಇದಕ್ಕೂ ವಿಶೇಷವೆಂದರೆ ಪ್ರಜ್ವಲ್ ರೇವಣ್ಣ ಅವರಿಗೆ ತಮ್ಮ ಸ್ವಕ್ಷೇತ್ರ ಹೊಳೆನರಸೀಪುರದಲ್ಲಿಯೇ ಮುನ್ನಡೆ ಸಾಧಿಸಲು ಸಾಧ್ಯವಾಗಿಲ್ಲ. ಹೊಳೆನರಸೀಪುರದಲ್ಲಿ ಪ್ರಜ್ವಲ್’ಗಿಂತಲೂ ಶ್ರೇಯಸ್ ಪಟೇಲ್ ಹೆಚ್ಚಿನ ಮತಗಳನ್ನು ಗಳಿಸುವ ಮೂಲಕ ಟಕ್ಕರ್ ನೀಡಿದ್ದಾರೆ.
ಪೆನ್ ಡ್ರೈವ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣಗೆ ಈ ಸೋಲು ಮತ್ತೊಂದು ಭಾರೀ ಹೊಡೆತ ನೀಡಿದ್ದು, ಅವರ ಮುಂದಿನ ರಾಜಕೀಯ ಭವಿಷ್ಯ ಎತ್ತ ಸಾಗುತ್ತದೆ ಎಂಬ ಕುರಿತಾಗಿ ಕ್ಷೇತ್ರದಲ್ಲಿ ಚರ್ಚೆಯಾಗುತ್ತಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post