ಕಲ್ಪ ಮೀಡಿಯಾ ಹೌಸ್ | ಹಾಸನ |
ಜಾತಿಗಣತಿ ಸಮೀಕ್ಷೆಗೆ #Caste Census ಹೋಗಿದ್ದ ಶಿಕ್ಷಕಿ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ ಘಟನೆ ಬೇಲೂರಿನ ಹೊಯ್ಸಳ ನಗರದ ಬಡಾವಣೆಯಲ್ಲಿ ನಡೆದಿದೆ.
ನೆಹರೂ ನಗರ ಜಿಎಸ್‌ಇಎಸ್ ಶಾಲೆಯ ಚಿಕ್ಕಮ್ಮ ನಾಯಿ ದಾಳಿಗೆ ಒಳಗಾದ ಶಿಕ್ಷಕಿ. ಚಿಕ್ಕಮ್ಮ ಅವರು ಭಾನುವಾರ ಸಮೀಕ್ಷೆಗೆ ಹೋದ ಸಂದರ್ಭದಲ್ಲಿ ಬೀದಿ ನಾಯಿ ಕೆನ್ನೆ, ಕಿವಿ, ತೊಡೆ ಹಾಗೂ ಹೊಟ್ಟೆ ಭಾಗದಲ್ಲಿ ಕಚ್ಚಿ ತೀವ್ರವಾಗಿ ಗಾಯಗೊಳಿಸಿದೆ. ಪತಿ ಶಿವಕುಮಾರ್, ಪತ್ನಿಯನ್ನು ಬಿಡಿಸಲು ಹೋದ ಸಮಯದಲ್ಲಿ ಅವರಿಗೂ ನಾಯಿ ಕಚ್ಚಿದ್ದು, ಅವರಿಗೆ ಚಿಕ್ಕ ಪುಟ್ಟ ಗಾಯಗಳಾಗಿವೆ. ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post