ಕಲ್ಪ ಮೀಡಿಯಾ ಹೌಸ್ | ಹಾಸನ |
ಮಹಾನಗರ ಪಾಲಿಕೆ #Corporation ವ್ಯಾಪ್ತಿಯಲ್ಲಿ ಪಾದಚಾರಿಗಳಿಗೆ ತೊಂದರೆಯಾಗುವಂತೆ ಫುಟ್ ಪಾತ್ ಹಾಗೂ ವಾಹನ ಸವಾರರಿಗೆ ತೊಂದರೆಯಾಗುವಂತೆ ಬೀದಿ ಬದಿ ವ್ಯಾಪಾರ #Street Trading ಮಾಡುವುದನ್ನು ತಕ್ಷಣ ನಿಲ್ಲಿಸಬೇಕು ಎಂದು ಮಹಾನಗರ ಪಾಲಿಕೆ ಎಚ್ಚರಿಕೆ ನೀಡಿದೆ.
ಈ ಕುರಿತಂತೆ ಪಾಲಿಕೆ ಆಯುಕ್ತರು ಸಾರ್ವಜನಿಕ ಪ್ರಕಟಣೆ ಹೊರಡಿಸಿದ್ದಾರೆ.
ಹಾಸನ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕರು ತ್ಯಾಜ್ಯವಸ್ತುಗಳ ನಿರ್ವಹಣೆ ನಿಯಮ-2016ರಂತೆ ಮನೆಗಳಲ್ಲಿ ಮತ್ತು ವಾಣಿಜ್ಯ ಕೇಂದ್ರಗಳಲ್ಲಿ ಉತ್ಪತ್ತಿಯಾಗುತ್ತಿರುವ ಹಸಿ ಕಸ ಮತ್ತು ಒಣ ಕಸ ತ್ಯಾಜ್ಯವಸ್ತುಗಳನ್ನು ನಗರದ ಸುತ್ತ ಮುತ್ತ ರಸ್ತೆ ಬದಿ/ಖಾಲಿ ನಿವೇಶನಗಳಲ್ಲಿ ಎಸೆಯುತ್ತಿರುವುದು ಕಂಡುಬಂದಿರುತ್ತದೆ. ಇದು ಘನ ತ್ಯಾಜ್ಯವಸ್ತುಗಳ ನಿರ್ವಹಣೆ ನಿಯಮ-2016 ರಂತೆ ವಿರುದ್ದವಾಗಿರುವುದರಿಂದ ಸಾರ್ವಜನಿಕ ಪ್ರದೇಶಗಳಲ್ಲಿ ನೈರ್ಮಲ್ಯ ಕಾಪಾಡಲು ತೊಂದರೆಯಾಗುತ್ತಿರುವುದು ಗಮನಿಸಲಾಗಿದೆ ಎಂದಿದ್ದಾರೆ.
ಸಾರ್ವಜನಿಕ ಪ್ರದೇಶಗಳಲ್ಲಿ ತ್ಯಾಜ್ಯವನ್ನು ಬಿಸಾಡುವುದು ಅಥವಾ ಸುರಿಯುವುದು ಕಂಡುಬAದಲ್ಲಿ ಮಹಾನಗರ ಪಾಲಿಕೆಗಳ ನಿಯಮಗಳನ್ವಯ ಸದರಿರವರ ವಿರುದ್ದ ಕಾನೂನು ರಿತ್ಯಾ ಕ್ರಮವಹಿಸಲಾಗುವುದು ಎಂದು ತಿಳಿಸಿದ್ದಾರೆ.
ಮಹಾನಗರ ಪಾಲಿಕೆ ವ್ಯಾಪ್ತಿಯ ಬೀದಿ ಬದಿ ವ್ಯಾಪಾರಿಗಳು ರಸ್ತೆಗಳ ಸಾರ್ವಜನಿಕರ ಸುಗಮ ಸಂಚಾರದ ಪಾದಾಚಾರಿ ಮಾರ್ಗಗಳಲ್ಲಿ ಅಡ್ಡಲಾಗಿ ವ್ಯಾಪಾರ ನಡೆಸುತ್ತಿದ್ದಾರೆ. ಇದರಿಂದ ಸಾರ್ವಜನಿಕರಿಗೆ ಮತ್ತು ವಾಹನ ಸಂಚಾರಕ್ಕೆ ತೊಂದರೆ ಉಂಟಾಗುತ್ತಿರುವುದರಿAದ ಮುಂದಿನ ದಿನಗಳಲ್ಲಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ತೊಂದರೆ ಉಂಟುಮಾಡುತ್ತಿರುವವರ ವಿರುದ್ದ ಕರ್ನಾಟಕ ಮಹಾನಗರ ಪಾಲಿಕೆಗಳ ನಿಯಮ 1976 ರಿತ್ಯಾ ಸೂಕ್ತ ಕ್ರಮ ಕೈಗೊಳ್ಳಲು ಕ್ರಮವಹಿಸಲಾಗುವುದು. ಆದುದರಿಂದ ಈ ಕೂಡಲೇ ಸಾರ್ವಜನಿಕರ ಪಾದಚಾರಿಗಳ ಮಾರ್ಗದಲ್ಲಿ ವ್ಯಾಪಾರ ನಡೆಸದಂತೆ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post