ಕಲ್ಪ ಮೀಡಿಯಾ ಹೌಸ್ | ಹಾಸನ |
ಈ ಬಾರಿಯ ಹಾಸನಾಂಬ ಜಾತ್ರಾ ಮಹೋತ್ಸವ ಅ.28ರಿಂದ ಆರಂಭವಾಗಲಿದ್ದು, ಈ ಹಿನ್ನೆಲೆ ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಯಿತು.
ಅಂದು ಮಧ್ಯಾಹ್ನ 12ಗಂಟೆಗೆ ದೇವಾಲಯದ ಗರ್ಭಗುಡಿ ಬಾಗಿಲು ತೆರೆಯಲಿದ್ದು, ಸಿಎಂ ಬಸವರಾಜ ಬೊಮ್ಮಾಯಿ, ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಡಾ. ಶ್ರೀ ನಿರ್ಮಲಾನಂದ ನಾಥ ಸ್ವಾಮೀಜಿ ಅವರನ್ನು ಉದ್ಘಾಟನಾ ಸಮಾರಂಭಕ್ಕೆ ಆಹ್ವಾನಿಸಲು ತೀರ್ಮಾನಿಸಲಾಗಿದೆ.
10 ದಿನ ನಡೆಯುವ ಜಾತ್ರಾ ಮಹೋತ್ಸವ, ನ.6ರ ಮಧ್ಯಾಹ್ನ ದೇವಾಲಯದ ಬಾಗಿಲು ಮುಚ್ಚಲಾಗುವುದು. ಕೊರೋನಾ ಮೂರನೇ ಅಲೆ ಹರಡುವ ಭೀತಿಯಿರುವ ಕಾರಣ ಸಾರ್ವಜನಿಕ ದರ್ಶನ ನಿಷೇಧಿಸಲಾಗಿದೆ. ಕಳೆದ ವರ್ಷದಂತೆ ಆನ್ ಲೈನ್, ಎಲ್ ಇ ಡಿ ಪರದೆ ಮೂಲಕ ವೀಕ್ಷಣೆಗೆ ಮಾತ್ರ ಅವಕಾಶ ನೀಡಲಾಗಿದೆ.
ಸಭೆಯಲ್ಲಿ ಶಾಸಕರು ಹಾಗೂ ಅಧಿಕಾರಿಗಳು ಇನ್ನಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post