ಕಲ್ಪ ಮೀಡಿಯಾ ಹೌಸ್ | ಹಾಸನ |
ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೃದಯಾಘಾತಕ್ಕೆ #Heart Attack ಬಲಿಯಾಗುತ್ತಿರುವ ಸಂಖ್ಯೆ ಹೆಚ್ಚಾಗುತ್ತಿದ್ದು, ಇಂದು ಬಾಣಂತಿ ಸಾವನ್ನಪ್ಪಿದ್ದಾರೆ.
ಮೃತ ಮಹಿಳೆಯನ್ನು ಶಿವಮೊಗ್ಗ ಜಿಲ್ಲೆಯ ಐನೂರು ಗ್ರಾಮಕ್ಕೆ ಬಾಣಂತನಕ್ಕೆ ಬಂದಿದ್ದ ಅಕ್ಷಿತಾ(22) ಎಂದು ಗುರುತಿಸಲಾಗಿದೆ.
ಹಾಸನದ ಕೊಮ್ಮೇನಹಳ್ಳಿ ನಿವಾಸಿಯಾಗಿದ್ದ ಅಕ್ಷಿತಾ, ತವರು ಮನೆಗೆ ಹೆರಿಗೆ ಹಾಗೂ ಬಾಣಂತನಕ್ಕಾಗಿ ತೆರಳಿದ್ದರು.

ಆರೋಗ್ಯ ಸಚಿವರು ಏನು ಹೇಳುತ್ತಾರೆ?
ಜಿಲ್ಲೆಯಲ್ಲಿ ಹೃದಯಾಘಾತದಿಂದ ಮೃತಪಡುವವರು ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಧ್ಯಯನ ನಡೆಸಿ ವರದಿ ನೀಡುವಂತೆ ಜಯದೇವ ಸಂಸ್ಥೆಯ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಹಠಾತ್ ಹೃದಯಾಘಾತಗಳನ್ನು ತಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಪುನೀತ್ ರಾಜಕುಮಾರ್ #Puneeth Rajkumar ಹೃದಯ ಜ್ಯೋತಿ ಯೋಜನೆಯನ್ನು ಜಾರಿಗೆ ತಂದಿದೆ. ಆದರೆ ಇತ್ತಿಚೆಗೆ ಯುವಕರು ಹೃದಯಾಘಾತಕ್ಕೆ ಒಳಗಾಗುತ್ತಿರುವುದರ ಬಗ್ಗೆ ಸಮಗ್ರ ಸಂಶೋಧನೆಯ ಅಗತ್ಯತೆ ಇದೆ. ಬದಲಾದ ಜೀವನ ಶೈಲಿ, ಆಹಾರ, ಅಸಾಂಕ್ರಾಮಿಕ ರೋಗಗಳು ಹೃದಯಾಘಾತಗಳು ಹೆಚ್ಚಾಗಲು ಕಾರಣ ಎಂಬುದು ಮೇಲ್ನೋಟಕ್ಕೆ ಕಂಡುಬಂದರೂ, ಹಾಸನದ ಪ್ರಕರಣ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಇದಕ್ಕೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ತಜ್ಞರ ತಂಡದಿಂದ ಅಧ್ಯಯನ ನಡೆಸಿ 10 ದಿನಗಳ ಒಳಗಾಗಿ ವರದಿ ಪಡೆಯಲು ಸೂಚಿಸಲಾಗಿದೆ ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post