ಕಲ್ಪ ಮೀಡಿಯಾ ಹೌಸ್ | ಹಾಸನ |
ಖಚಿತ ಮಾಹಿತಿ ಆಧರಿಸಿ ಪೊಲೀಸರು ನಡೆಸಿದ ದಾಳಿ ವೇಳೆ ಅಕ್ರಮ ಗೋಮಾಂಸ ಜಾಲವನ್ನು ಪತ್ತೆ ಮಾಡಿದ್ದು, ಬರೋಬ್ಬರಿ 10 ಸಾವಿರ ಕೆಜಿ ಗೋಮಾಂಸವನ್ನು ವಶಕ್ಕೆ ಪಡೆಯಲಾಗಿದೆ.
ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಬಾಗೂರು ರಸ್ತೆ ಬಳಿಯಲ್ಲಿ ಘಟನೆ ನಡೆದಿದ್ದು, ಅಕ್ರಮವಾಗಿ ಸುಮಾರು 60ಕ್ಕೂ ಅಧಿಕ ಗೋವುಗಳನ್ನು ವಧೆ ಮಾಡುವುದರೆ ಜೊತೆಗೆ 10 ಸಾವಿರ ಕೆಜಿಯಷ್ಟು ಗೋಮಾಂಸವನ್ನು ಸಂಗ್ರಹ ಮಾಡಲಾಗಿತ್ತು ಎಂದು ವರದಿಯಾಗಿದೆ.

Also read: ಜಗದ್ಗುರು ಶ್ರೀ ಸಚ್ಚಿದಾನಂದ ಶಿವಾಭಿನವ ನೃಸಿಂಹ ಭಾರತೀ ಸ್ವಾಮೀಜಿ ನೆಲೆ | ಅಭಿನವ ಶಂಕರಾಲಯ 100 ವರುಷದ ಸಾರ್ಥಕ ಸೇವೆ
ಪೊಲೀಸರು ದಾಳಿ ನಡೆಸುತ್ತಿದ್ದಂತೆಯೇ ಆರೋಪಿಗಳು ಪರಾರಿಯಾಗಿದ್ದು, ಅಬ್ದುಲ್ ಹಕ್ ಎನ್ನುವವರೇ ಈ ಕೃತ್ಯ ಎಸಗಿದ್ದಾನೆ ಎಂದು ಹೇಳಲಾಗಿದ್ದರೂ, ಖಚಿತ ಮಾಹಿತಿ ದೊರೆಕಿಲ್ಲ. ಚನ್ನರಾಯಪಟ್ಟಣ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post