No Result
View All Result
Prayagraj - Yesvantpur Special Weekly Express Trains
English Articles

Special Weekly Express Trains Between Prayagraj and Yesvantpur Announced

by kalpa News
July 23, 2026
0

Kalpa Media House  |  Bengaluru | To clear the extra rush of passengers, North Central Railway has announced the operation...

Read moreDetails
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
  • Advertise With Us
  • Grievances
  • About Us
  • Contact Us
Thursday, July 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಹಾಸನ

ಸೆ.26ರಿಂದ ಅ.5ರವರೆಗೆ ಬೇಲೂರಿನಲ್ಲಿ ರಂಭಾಪುರಿ ಪೀಠದ ದಸರಾ ಧರ್ಮ ಸಮ್ಮೇಳನ

10 ದಿನಗಳ ಕಾಲ ವಿಜೃಂಭಣೆಯ ಮಹೋತ್ಸವ | ಪೂರ್ವಭಾವಿ ಸಭೆಯಲ್ಲಿ ವಿವಿಧ ರಂಗದ ಗಣ್ಯರು ಭಾಗಿ

kalpa News by kalpa News
August 3, 2022
in ಹಾಸನ
0
ಸೆ.26ರಿಂದ ಅ.5ರವರೆಗೆ ಬೇಲೂರಿನಲ್ಲಿ ರಂಭಾಪುರಿ ಪೀಠದ ದಸರಾ ಧರ್ಮ ಸಮ್ಮೇಳನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೇಲೂರು  |  

ಐತಿಹಾಸಿಕ ಬೇಲೂರು ಪಟ್ಟಣದಲ್ಲಿ ಸೆ. 26 ರಿಂದ ಅ. 5ರವರೆಗೆ 10 ದಿನಗಳ ಕಾಲ ನಡೆಯಲಿರುವ ಶರನ್ನವರಾತ್ರಿ ದಸರಾ ಧರ್ಮ ಸಮ್ಮೇಳನ ಹೊಸ ಇತಿಹಾಸ ನಿರ್ಮಾಣಮಾಡಲು ಅಣಿಯಾಗಿದೆ ಎಂದು ರಂಭಾಪುರಿ ಮಹಾಸಂಸ್ಥಾನದ ಶ್ರೀ ವೀರಸೋಮೇಶ್ವರ ಜಗದ್ಗುರುಗಳು ಹೇಳಿದರು.

ಸಮ್ಮೇಳನದ ಅಂಗವಾಗಿ ಪಟ್ಟಣದ ಶ್ರೀ ಶಿವಕುಮಾರ ಸ್ವಾಮೀಜಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆ ಉದ್ಘಾಟಿಸಿ ಅವರು ಮಾತನಾಡಿದರು. ಈ ಹಿಂದೆ ತಾಲೂಕಿನಲ್ಲಿ ಅನೇಕ ಧಾರ್ಮಿಕ ಸಭೆ, ಸಮಾರಂಭ, ಸಮ್ಮೇಳನ ನಡೆದಿವೆ. ಆದರೆ ರಂಭಾಪುರಿ ಪೀಠದ ಶರನ್ನವರಾತ್ರಿ ದಸರಾ ಧರ್ಮ ಸಮ್ಮೇಳನ ಹಿಂದಿನ ಎಲ್ಲ ದಾಖಲೆಗಳನ್ನೂ ಮುರಿಯಲಿದೆ. ಈ ಹಿಂದೆ ಹಳೇಬೀಡಿನಲ್ಲೂ ನಮ್ಮ ಪೀಠದ ಸಮ್ಮೇಳನ ಆಗಿತ್ತು ಎಂದವರು ವಿವರಿಸಿದರು.ಭಕ್ತರ ನಿಷ್ಠೆ ಕಾರಣ
ಇತಿಹಾಸ ಮತ್ತು ಪರಂಪರೆ ಇರುವ ಬೇಲೂರಿನಲ್ಲಿ ಧರ್ಮ ಸಮ್ಮೇಳನ ನಡೆಯುತ್ತಿರುವುದಕ್ಕೆ ಇಲ್ಲಿನ ಭಕ್ತರ ನಿಷ್ಠೆ ಕಾರಣವಾಗಿದೆ. ರಂಭಾಪುರಿ ಪೀಠದ ಪರಂಪರೆ ಮತ್ತು ಮಹತ್ವ ಎಲ್ಲರಿಗೂ ತಿಳಿದಿದೆ. ಪೀಠಕ್ಕೆ ಮೈಸೂರು ಒಡೆಯರು ರಾಜ ಮರ್ಯಾದೆ ನೀಡಿದ್ದರು. ಅದರಂತೆ ಪೀಠವು ಶರನ್ನವರಾತ್ರಿ ದಸರಾ ಧರ್ಮ ಸಮ್ಮೇಳನವನ್ನು ರಾಜ್ಯದ ವಿವಿಧ ಪ್ರಾಂತ್ಯಗಳಲ್ಲಿ ಆಯೋಜಿಸುತ್ತದೆ. ಈ ಬಾರಿ ಅವಕಾಶ ಬೇಲೂರಿಗೆ ಲಭಿಸಿದೆ ಎಂದು ಜಗದ್ಗುರುಗಳು ನುಡಿದರು.

ನಿರಂತರ ಜಾಗೃತಿ ಕಾರ್ಯ
ಪಂಚಪೀಠಗಳಲ್ಲಿ ಒಂದಾದ ರಂಭಾಪುರಿ ಪೀಠದಲ್ಲಿ ನಿರಂತರವಾಗಿ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಮತ್ತು ಪ್ರಗತಿಪರ ಚಟುವಟಿಕೆಗಳು ನಡೆಯುತ್ತಿವೆ. ಸಮಾಜಕ್ಕೆ ಯಾವ ಕಾಲಘಟ್ಟಕ್ಕೆ ಏನೇನು ಬೇಕೋ ಅದನ್ನು ನೀಡುವ ಮಹತ್ತರ ಕಾರ್ಯ ನಡೆಯುತ್ತಿದೆ ಎಂದು ಮಹಾಸ್ವಾಮೀಜಿ ತಿಳಿಸಿದರು.

ಸಮಾಜದಲ್ಲಿ ಇಂದು ಧರ್ಮ, ಜಾತಿ, ಸಮುದಾಯಗಳ ನಡುವೆ ಬಿರುಕು ಹೆಚ್ಚಾಗಿದೆ. ಒಟ್ಟಾರೆ ಸಮಾಜದ ಸ್ಥಿತಿ ಅತಂತ್ರವಾಗಿದೆ. ವಿವಿಧ ರೀತಿಯ ಮನಸ್ಸುಗಳನ್ನು ಧರ್ಮ ಮತ್ತು ಭಕ್ತಿಯಲ್ಲಿ ಒಂದುಮಾಡುವಲ್ಲಿ ಈ ಬಾರಿಯ ಸಮ್ಮೇಳನ ಹೆಚ್ಚಿನ ಒತ್ತು ನೀಡಲಿದೆ. ನುರಿತ ಕಲಾವಿದರು ಮತ್ತು ತಜ್ಞರಿಂದ ಸಂಗೀತ, ಸಾಹಿತ್ಯ ಮತ್ತು ವಿಚಾರ ಪ್ರಬೋಧವಾದ ಗೋಷ್ಠಿಗಳು, ಉಪನ್ಯಾಸ ಹಮ್ಮಿಕೊಳ್ಳಲಾಗಿದೆ. ನಾಡಿನ, ಹೊರ ನಾಡಿನ ಸಾವಿರಾರು ಭಕ್ತರು 10 ದಿನಗಳ ಸಮ್ಮೇಳನಕ್ಕೆ ಸಾಕ್ಷಿಯಾಗಲಿದ್ದಾರೆ. ಮಾನವ ಧರ್ಮಕ್ಕೆ ಜಯವಾಗಲಿ ಎಂಬುದೇ ನಮ್ಮ ಸಂದೇಶ.
| ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು

ಸಾವಿರಾರು ವರ್ಷ ಇತಿಹಾಸವಿರುವ ಈ ಪೀಠ ಭಕ್ತರಿಗೆ ಸಂಸ್ಕಾರ ನೀಡುವಲ್ಲಿ ಅಗ್ರಗಣ್ಯವಾಗಿದೆ. ಆ ಮೂಲಕ ವೀರಶೈವ ಧರ್ಮದ ಸೈದ್ಧಾಂತಿಕ ತತ್ವಗಳನ್ನು ಆಚರಣೆಗೆ ತರುವುದು ಧ್ಯೇಯವಾಗಿದೆ ಎಂದು ಜಗದ್ಗುರುಗಳು ಹೇಳಿದರು.

ಶರನ್ನವರಾತ್ರಿ ದಸರಾ ಧರ್ಮ ಸಮ್ಮೇಳನ ಕೇವಲ ಜಿಲ್ಲೆಗೆ ಸೀಮಿತವಲ್ಲ. ವಿವಿಧ ರಾಜ್ಯದ ಭಕ್ತರೂ ಬರಲಿದ್ದಾರೆ. ಸ್ಥಳೀಯ ಮುಖಂಡರು ಸಮ್ಮೇಳನದ ಯಶಸ್ಸಿಗೆ ಈಗಾಗಲೇ ಸಕಲ ಸಿದ್ಧತೆ ನಡೆಸಿದ್ದಾರೆ ಎಂದರು.

ಸಭೆಯಲ್ಲಿ ಹುಲಿಕೆರೆ ದೊಡ್ಡಮಠದ ಶ್ರೀ ವಿರೂಪಾಕ್ಷ ಸ್ವಾಮೀಜಿ, ಕಾರ್ಜುವಳ್ಳಿ ಮಠದ ಶ್ರೀ ಸದಾಶಿವ ಶಿವಾಚಾರ್ಯ ಸ್ವಾಮೀಜಿ, ಚಿಕ್ಕಮಗಳೂರು ಬೇರಗುಂಡ ಮಠದ ಶ್ರೀ ರೇಣುಕಾ ಮಹಾಂತ ಸ್ವಾಮೀಜಿ, ಹೀರೆಮಠದ ಶ್ರೀ ರೇವಣ್ಣ ಸಿದ್ದೇಶ್ವರ ಸ್ವಾಮೀಜಿ, ಶಾಸಕ ಕೆ.ಎಸ್.ಲಿಂಗೇಶ್, ಸಮ್ಮೇಳನದ ಕಾರ್ಯಾಧ್ಯಕ್ಷ ಕೊರಟಿಕೆರೆ ಪ್ರಕಾಶ್, ತಾಲೂಕು ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷ ರವಿಕುಮಾರ್, ಮುಖಂಡರಾದ ರಾಜಶೇಖರ, ನಾಗೇಂದ್ರ ಪ್ರತಿಷ್ಠಾನದ ಅಧ್ಯಕ್ಷ ಸಿದ್ದೇಶ್ ನಾಗೇಂದ್ರ, ಮುಖಂಡರಾದ ಐಸಾಮಿಗೌಡ, ದೊಡ್ಡವೀರೇಗೌಡ, ಬಿ.ಕೆ. ಚಂದ್ರಕಲಾ, ನಟರಾಜ್ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BelurDasaraHassanKannada News WebsiteLatest News KannadaRambhapuri MuttSharannavaratriಬೇಲೂರುರಂಭಾಪುರಿ ಪೀಠರಂಭಾಪುರಿ ಮಹಾಸಂಸ್ಥಾನವೀರಶೈವ ಧರ್ಮಶರನ್ನವರಾತ್ರಿ ದಸರಾ ಧರ್ಮ ಸಮ್ಮೇಳನ
Share221Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅತ್ಯಾಧುನಿಕ ವ್ಯವಸ್ಥೆಯೊಂದಿಗೆ ಮೀಡಿಯಾ ಹೌಸ್ ನಿಮ್ಮ ಮುಂದೆ…

Next Post

ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ ಬಗ್ಗೆ ಅರಿವು ಮುಖ್ಯ: ಡಾ. ಬಿ. ಸುರೇಶ್

kalpa News

kalpa News

Next Post
ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ ಬಗ್ಗೆ ಅರಿವು ಮುಖ್ಯ: ಡಾ. ಬಿ. ಸುರೇಶ್

ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ ಬಗ್ಗೆ ಅರಿವು ಮುಖ್ಯ: ಡಾ. ಬಿ. ಸುರೇಶ್

Leave a Reply Cancel reply

Your email address will not be published. Required fields are marked *

No Result
View All Result
Prayagraj - Yesvantpur Special Weekly Express Trains
English Articles

Special Weekly Express Trains Between Prayagraj and Yesvantpur Announced

by kalpa News
July 23, 2026
0

Kalpa Media House  |  Bengaluru | To clear the extra rush of passengers, North Central Railway has announced the operation...

Read moreDetails
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL