ಕಲ್ಪ ಮೀಡಿಯಾ ಹೌಸ್ | ಹಾಸನ |
ಜಿಲ್ಲೆಯಲ್ಲಿ ಕೇವಲ 42 ದಿನಗಳಲ್ಲೇ 26 ಮಂದಿ ಹೃದಯಾಘಾತಕ್ಕೆ #Heart Attack ಬಲಿಯಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರಚಿಸಿದ್ದ ತಜ್ಞರ ಸಮಿತಿ, ತನ್ನ ಪ್ರಾಥಮಿಕ ಸಮಿತಿ ಸಿದ್ದಪಡಿಸಿದೆ ಎಂದು ವರದಿಯಾಗಿದೆ.
ಈ ಕುರಿತಂತೆ ಮೂಲಗಳಿಂದ ಮಾಹಿತಿ ತಿಳಿದುಬಂದಿದ್ದರೂ, ಅಧಿಕೃತ ವರದಿ ಇನ್ನೂ ಪ್ರಕಟಗೊಳ್ಳಬೇಕಿದೆ. ದೊರೆತಿರುವ ಮಾಹಿತಿಯಂತೆ, ಅತಿಯಾದ ಬೊಜ್ಜು, ಮಾಂಸ ಸೇವನೆ, ಧೂಮಪಾನ, ಮದ್ಯಪಾನ ಮತ್ತು ಫಾಸ್ಟ್ ಫುಡ್ ಸೇವನೆಯಿಂದ ಸಾವು ಸಂಭವಿಸಿರುವ ಬಗ್ಗೆ ತಜ್ಞರು ಅನುಮಾನ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗಿದೆ.
ರೆಡ್ ಮೀಟ್ ಸೇವನೆಯಿಂದ ಕೂಡ ಕೊಲೆಸ್ಟ್ರಾಲ್ #Cholestrol ಹೆಚ್ಚಾಗಿರುವ ಸಾಧ್ಯತೆ ಇದ್ದು, ಈ ಬಗ್ಗೆ ಆಳವಾದ ಅಧ್ಯಯನ ಮಾಡಲು ತಾಂತ್ರಿಕ ಸಮಿತಿ ನಿರ್ಧರಿಸಿದೆ. ಇನ್ನು ವರದಿ ಸಲ್ಲಿಸಲು ಕೇವಲ ಒಂದು ವಾರ ಬಾಕಿ ಇದ್ದು, ಅಷ್ಟರ ಒಳಗಾಗಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕಿದೆ.
ಈ ಸರಣಿ ಸಾವುಗಳಿಂದ ಸರ್ಕಾರ ಕೂಡ ಆತಂಕಗೊಂಡಿದ್ದು, ಸಾವಿಗೆ ಕಾರಣ ಏನು ಎನ್ನುವುದನ್ನು ತಿಳಿಯಲು ಬೆಂಗಳೂರಿನ ಜಯದೇವ ಆಸ್ಪತ್ರೆ ಮುಖ್ಯಸ್ಥರ ನೇತೃತ್ವದಲ್ಲಿ ತಜ್ಞರ ಸಮಿತಿ ರಚಿಸಲಾಗಿದೆ. 10 ದಿನದಲ್ಲೇ ವರದಿ ನೀಡುವಂತೆ 12 ಜನ ತಜ್ಞರ ಸಮಿತಿಗೆ ಸರ್ಕಾರ ಸೂಚಿಸಿತ್ತು. ಇದರ ಬೆನ್ನಲ್ಲೇ ಇದೀಗ ಪ್ರಾಥಮಿಕ ವರದಿಯನ್ನು ತಜ್ಞರು ಸಿದ್ಧ ಪಡಿಸಿದ್ದಾರೆ ಎಂದು ವರದಿಯಾಗಿದೆ.
ಕಳೆದ ಎರಡು ತಿಂಗಳಿಂದೀಚೆ ಜಿಲ್ಲೆಯಲ್ಲಿ 26 ಮಂದಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ನಿನ್ನೆ ಓರ್ವ ಬಾಣಂತಿ, ಯುವಕ ಹಾಗೂ ಸರ್ಕಾರಿ ಆಸ್ಪತ್ರೆ ವೈದ್ಯನೇ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post