ಕಲ್ಪ ಮೀಡಿಯಾ ಹೌಸ್
ಹಾಸನ: ಅಕ್ರಮವಾಗಿ ಕರುಗಳನ್ನು ಸಾಗಾಟ ಮಾಡುತ್ತಿದ್ದ ವೇಳೆ ವಾಹನ ಅಪಘಾತ ಸಂಭವಿಸಿ 18 ಕ್ಕೂ ಹೆಚ್ಚು ಕರುಗಳು ಮೃತಟ್ಟಿದ್ದು, ಜಿಲ್ಲಾಧಿಕಾರಿ ಆರ್.ಗಿರೀಶ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಕೊಳ್ಳುವಂತೆ ಸೂಚಿಸಿದ್ದಾರೆ.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಬೇಲೂರು ತಾಲೂಕಿನ ದ್ಯಾವಪ್ಪನಹಳ್ಳಿ ಬಳಿಯಿಂದ ಗೂಡ್ಸ್ ವಾಹನದಲ್ಲಿ 41 ಕ್ಕೂ ಹೆಚ್ಚು ಕರುಗಳನ್ನ ಸಾಗಿಸಲಾಗುತ್ತಿತ್ತು. ಗೋಹತ್ಯೆ ನಿಷೇಧ ಕಾಯಿದೆ ಇರುವ ಹಿನ್ನೆಲೆ ರಾತ್ರೋರಾತ್ರಿ ಕರುಗಳಿಗೆ ಬಾಯಿ, ಕಾಲುಗಳಿಗೆ ಹಗ್ಗ ಕಟ್ಟಿ ಅಮಾನವೀಯವಾಗಿ ಸಾಗಾಟ ಮಾಡುತ್ತಿದ್ದ, ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ . 23 ಕರುಗಳು ಬದುಕುಳಿದಿದ್ದು ಅವುಗಳನ್ನು ರಕ್ಷಣೆ ಮಾಡಲಾಗಿದೆ.
ಶಾಸಕರಾದ ಕೆ.ಎಸ್ ಲಿಂಗೇಶ್ ,ಜಿಲ್ಲಾಧಿಕಾರಿ ಆರ್. ಗಿರೀಶ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಆರ್ .ಶ್ರೀನಿವಾಸ್ ಗೌಡ, ಪಶುಪಾಲನೆ ಅಧಿಕಾರಿಗಳು ಅಪಘಾತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಈ ವೇಳೆ ಕರುಗಳನ್ನು ಅಮಾನವೀಯವಾಗಿ ಕಸದ ರೀತಿಯಲ್ಲಿ ಸಾಗಾಟ ಮಾಡುತಿದ್ದ ಬಗ್ಗೆ ಆತಂಕ , ಅಸಮಾಧಾನ ವ್ಯಕ್ತಪಡಿಸಿದ ಶಾಸಕರು ತಪ್ಪಿತಸ್ಥರ ವಿರುದ್ದ ಕಠಿಣ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ ಗೌಡ ಅವರು ಮಾತನಾಡಿ ಘಟನೆ ಬಗ್ಗೆ ಪ್ರಕರಣ ದಾಖಲಿಸಲಾಗಿದ್ದು , ತನಿಖೆ ಕೈಗೊಳ್ಳಲಾಗುತ್ತಿದೆ ,ಶೀಘ್ರವೇ ತಪ್ಪಿತಸ್ಥರನ್ನು ಬಂಧಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು
ಪಶುಸಂಗೋಪನೆ ಇಲಾಖೆಯ ಉಪ ನಿರ್ದೇಶಕರಾದ ಡಾ. ರಮೇಶ್, ಬೇಲೂರು ತಾಲ್ಲೂಕು ತಹಸೀಲ್ದಾರ್ ಹಾಗೂ ಮತ್ತಿತರ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post