ಕಲ್ಪ ಮೀಡಿಯಾ ಹೌಸ್ | ಹಾಸನ |
ರೌಡಿಶೀಟರ್‌ನನ್ನು ಜೊತೆಯಲ್ಲಿದ್ದ ಸ್ನೇಹಿತರೇ ಬರ್ಬರವಾಗಿ ಹತ್ಯೆ ಮಾಡಿ ಗುಂಡಿ ತೆಗೆದು ಹೂತು ಹಾಕಿರುವ ಘಟನೆ ಹಾಸನ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಸಂತೋಷ್ (36) ಅಲಿಯಾಸ್ ಪುಲ್ಲಿ ಕೊಲೆಯಾದ ರೌಡಿಶೀಟರ್. ಪುಲ್ಲಿಯ ರೈಟ್ ಹ್ಯಾಂಡ್ ಆಗಿದ್ದ ಪ್ರೀತಮ್‍ಗೌಡ (25) ಹಾಗೂ ಸ್ನೇಹಿತ ಕೀರ್ತಿ ಕೊಲೆ ಆರೋಪಿಗಳಾಗಿದ್ದಾರೆ.
ಘಟನೆ ಹಿನ್ನೆಲೆ
ಪ್ರೀತಮ್‌ಗೌಡ ಹಾಗೂ ಕೀರ್ತಿ, ಸಂತೋಷ್ (ಪುಲ್ಲಿ)ನನ್ನು ಚಿಕ್ಕಮಗಳೂರಿಗೆ ಪ್ರವಾಸಕ್ಕೆಂದು ಕರೆದೊಯ್ದು ದಟ್ಟ ಅರಣ್ಯ ಪ್ರದೇಶದಲ್ಲಿ ಮೂವರು ಎಣ್ಣೆ, ಗಾಂಜಾ ಸೇವಿಸಿ ಮತ್ತಿನಲ್ಲಿದ್ದ ವೇಳೆ ಪುಲ್ಲಿಯನ್ನು ಮಚ್ಚಿನಿಂದ ಹೊಡೆದು ಕೊಲೆ ಮಾಡಿದ್ದಾರೆ. ನಂತರ ಕುರುವಂಗಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಗುಂಡಿ ತೆಗೆದು ಹೂತು ಹಾಕಿ ವಾಪಸ್ ಮನೆಗೆ ಬಂದಿದ್ದರು ಎನ್ನಲಾಗಿದೆ.
Also read: ಶೂಟಿಂಗ್ ವೇಳೆ ಅಮಿತಾಬ್ ಬಚ್ಚನ್’ಗೆ ಗಂಭೀರ ಗಾಯ: ವಿಶ್ರಾಂತಿಗೆ ಬಾಲಿವುಡ್ ನಟ
ಪುಲ್ಲಿ ಕಾಣೆಯಾಗಿ ಹದಿನೈದು ದಿನಗಳ ನಂತರ ಆತನ ಪೋಷಕರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ತನಿಖೆ ವೇಳೆ ಆರೋಪಿಗಳು ಕೊಲೆ ರಹಸ್ಯ ಬಾಯ್ಬಿಟ್ಟಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post