ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಉತ್ತರ ಪ್ರದೇಶದ ಹತ್ರಾಸ್’ನಲ್ಲಿ ನಡೆದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣವನ್ನು ಖಂಡಿಸಿ, ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ಅಂಡರ್ ಬ್ರಿಡ್ಜ್ ಬಳಿಯ ಅಂಬೇಡ್ಕರ್ ಪ್ರತಿಮೆ ಮುಂಭಾಗದಲ್ಲಿ ಒಕ್ಕೂಟದ ಸದಸ್ಯರು ಪ್ರತಿಭಟನೆ ನಡೆಸಿ, ಮಾನವ ಸರಪಳಿ ನಡೆಸಿ, ಘಟನೆಯನ್ನು ತೀವ್ರವಾಗಿ ಖಂಡಿಸಿದರು.
ಈ ವೇಳೆ ಮಾತನಾಡಿದ ಪ್ರಮುಖರು, ಇದೊಂದು ಮನುಕುಲ ತಲೆ ತಗ್ಗಿಸುವಂತೆ ಕಾರ್ಯವಾಗಿದ್ದು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಪ್ರತಿಕೃತಿಯನ್ನು ದಹಿಸಲಾಯಿತು.
ಪ್ರಗತಿಪರ ಸಂಘಟನೆಗಳ ಮುಖಂಡರಾದ ಮಾಯಣ್ಣ, ಡಿಎಸ್’ಎಸ್’ನ ಚಿನ್ನಯ್ಯ, ಪಳನಿ, ರಾಜೇಂದ್ರ, ಎಎಪಿ ಜಿಲ್ಲಾಧ್ಯಕ್ಷ ರವಿಕುಮಾರ್, ಬಿ.ಎನ್. ಚಂದ್ರಪ್ಪ, ಸುರೇಶ್, ಪರಮೇಶ್ವರಾಚಾರ್, ಡಿಎಸ್’ಎಸ್ ರಂಗನಾಥ್, ವೆಲ್’ಫೇರ್ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post