ಕಲ್ಪ ಮೀಡಿಯಾ ಹೌಸ್ | ಹಾವೇರಿ |
ಪದ್ಮಶ್ರೀ ಡಾ. ದೊಡ್ಡರಂಗೇಗೌಡ ಅವರ ಅಧ್ಯಕ್ಷತೆಯಲ್ಲಿ ಹಾವೇರಿಯಲ್ಲಿ ನಡೆಯುತ್ತಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು (ಕೆಐಎಬಿ) Kempegowda International Airport ಗೌರವಿಸಲಾಯಿತು.
ಈ ಸಮಾರಂಭದಲ್ಲಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ವಾಹಕ ಸಂಸ್ಥೆಯಾದ ಬೆಂಗಳೂರು ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್ (ಬಿಐಎಎಲ್) ಎಂಡಿ ಮತ್ತು ಸಿಇಒ ಹರಿ ಕೆ ಮರಾರ್ ಅವರು ಪಾಲ್ಗೊಂಡು, ಗೌರವ ಸ್ವೀಕರಿಸಿದರು.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದೆಲ್ಲೆಡೆ ಕನ್ನಡ ಫಲಕಗಳನ್ನು ಹಾಕುವಲ್ಲಿ, ಕನ್ನಡದಲ್ಲಿ ಘೋಷಣೆಗಳನ್ನು ಮಾಡುವಲ್ಲಿ ಮತ್ತು ದೇಶೀಯ, ವಿದೇಶಿ ಪ್ರಯಾಣಿಕರಲ್ಲಿ ಕನ್ನಡ ಹಾಗೂ ಸಂಸ್ಕೃತಿಯನ್ನು ಪೋಷಿಸುವ ಮತ್ತು ಉತ್ತೇಜಿಸುವ ಬಗ್ಗೆ ಬಿಎಲ್‌ಆರ್ ಸಾಕಷ್ಟು ಕೆಲಸ ಮಾಡುತ್ತಾ ಬಂದಿದೆ. ಅಷ್ಟೇ ಅಲ್ಲದೆ, ಕಳೆದ ವರ್ಷ ಕರ್ನಾಟಕ ರಾಜ್ಯೋತ್ಸವ ಹಾಗೂ ನಾಡಹಬ್ಬ ದಸರಾ ಉತ್ಸವವನ್ನು ಅದ್ಧೂರಿಯಿಂದ ಆಚರಿಸುವ ಮೂಲಕ ನಮ್ಮ ಸಾಂಸ್ಕೃತಿಕ ಪರಂಪರೆಯನ್ನು ಉದ್ಯೋಗಿಗಳು, ದೇಶಿಯ ಹಾಗೂ ವಿದೇಶಿಯ ಪ್ರಯಾಣಿಕರಿಗೆ ಪಸರಿಸಲಾಗಿತ್ತು.

ಕನ್ನಡ ಸಾಹಿತ್ಯ ಪರಿಷತ್ತು, ಕರ್ನಾಟಕ ಸರ್ಕಾರ ಮತ್ತು ಹಾವೇರಿ ಜಿಲ್ಲಾಡಳಿತದ ಸಹಯೋಗದಲ್ಲಿ ಈ ಸಾಹಿತ್ಯೋತ್ಸವವನ್ನು ಆಯೋಜಿಸಿದೆ. ಈ ವಾರ್ಷಿಕ ಸಮಾರಂಭದಲ್ಲಿ ಕರ್ನಾಟಕ ಮತ್ತು ಭಾರತದ ಪ್ರಸಿದ್ಧ ಬರಹಗಾರರು, ಶಿಕ್ಷಣ ತಜ್ಞರು, ಸ್ಥಳೀಯ ಭಾಷಿಕರು ಮತ್ತು ಕವಿಗಳು ಪಾಲ್ಗೊಂಡಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post