ಕಲ್ಪ ಮೀಡಿಯಾ ಹೌಸ್ | ಹಾವೇರಿ |
ನಿಂತಿದ್ದ ಕಾರಿಗೆ ಹಿಂದಿನಿಂದ ಮತ್ತೊಂದು ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಂಭೀರವಾಗಿ ಗಾಯಗೊಂಡು, ಆರು ಜನರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಬ್ಯಾಡಗಿ ತಾಲೂಕಿನ ಛತ್ರ ಗ್ರಾಮದ ಬಳಿ ನಡೆದಿದೆ.
ಹೊಸ ವರ್ಷಾಚರಣೆ ಪಾರ್ಟಿ ಮಾಡಲೆಂದು ಗೋವಾಗೆ ತೆರಳುತ್ತಿದ್ದ ಆಂಧ್ರ ಮೂಲದ ಯುವಕರಿದ್ದ ಕಾರು ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.
Also read: ಬೈಕ್ ಅಪಘಾತ | ಓರ್ವ ಸಾವು | ಮತ್ತೋರ್ವನಿಗೆ ಗಂಭೀರ ಗಾಯ
ದಾವಣಗೆರೆ ಮೂಲದ ತೇಜಸ್ (25), ಸಂದೇಶ್ (25), ದೀಪಕ್ (25) ಮತ್ತು ವೆಂಕಟೇಶ್ (26) ಗಂಭೀರವಾಗಿ ಗಾಯಗೊಂಡಿದ್ದು, ವೀರೇಶ್ (23), ಲಕ್ಷ್ಮಣ (23), ಅಶೋಕ್ (24), ಗೌಡನಬಿ (24), ಸಾರ್ಗ (26) ಮತ್ತು ಸಂಕೇತ್ (36)ಗೆ ಸಣ್ಣಪುಣ್ಣ ಗಾಯಗಳಾಗಿವೆ ಎನ್ನಲಾಗಿದೆ.
ಗಂಭೀರವಾಗಿ ಗಾಯಗೊಂಡಿದ್ದ ನಾಲ್ವರನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ಹಾಗೂ ಸಣ್ಣಪುಟ್ಟ ಗಾಯಗೊಂಡವರನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಬ್ಯಾಡಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post