ಕಲ್ಪ ಮೀಡಿಯಾ ಹೌಸ್ | ಹಾವೇರಿ |
ಜೂನ್ 4ರ ನಂತರ ರಾಜ್ಯ ಸರ್ಕಾರ ದಿನ ಎಣಿಸಬೇಕು. ಈ ಸರ್ಕಾರದ ಆಯುಷ್ಯ ಕಡಿಮೆ ಇದೆ. ರಾಜ್ಯದಲ್ಲಿ ಶೀಘ್ರವೇ ಮತ್ತೆ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ #Basavaraja Bommai ಹೇಳಿದ್ದಾರೆ.
ಇಂದು ಹಿರೆಕೆರೂರು ಕ್ಷೇತ್ರದ ಮೇದೂರು, ಮಾಸೂರು, ರಟ್ಟಿಹಳ್ಳಿಯಲ್ಲಿ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಬಡವರು ಸಂಕಷ್ಟದಲ್ಲಿದ್ದಾರೆ. ಬರಗಾಲ ಬಂದಿದೆ. ಬಿತ್ತಿದ ಬೆಳೆ ಬಾರದೇ ರೈತರ ಪಾಡು ಸಂಕಷ್ಟದಲ್ಲಿದೆ. ದನಗಳಿಗೆ ಕುಡಿಯಲು ನೀರಿಲ್ಲ. ಮೇವಿಲ್ಲ. ಸಾಲ ತೀರಿಸಲು ರೈತರು ಪರದಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯ ಸರ್ಕಾರ ರೈತರ ನೆರವಿಗೆ ಬರಬೇಕಿತ್ತು. ನಮ್ಮ ಅವಧಿಯಲ್ಲಿ ಪ್ರವಾಹ ಬಂದಾಗ ಮನೆಗಳಿಗೆ ನೀರು ನುಗ್ಗಿದರೆ ತಕ್ಷಣ ಹತ್ತು ಸಾವಿರ ರೂ. ನೀಡಿದೆವು. ಮನೆ ಬಿದ್ದರೆ 5 ಲಕ್ಷ ರೂಪಾಯಿ ನೀಡಿದೆವು. ಬಡವರು ಉತ್ತಮ ಮನೆ ಕಟ್ಟಿಕೊಂಡಿದ್ದಾರೆ. ಸರ್ಕಾರ ಜೀವಂತ ಇದ್ದಾಗ ಮಾತ್ರ ಆ ರೀತಿಯ ಕೆಲಸ ಮಾಡಲು ಸಾಧ್ಯ. ಅಧಿಕಾರಿಗಳು ವಿರೋಧ ಮಾಡಿದರೂ ಯಡಿಯೂರಪ್ಪ ಅವರು ಈ ತೀರ್ಮಾನ ಮಾಡಿದರು ಎಂದು ಹೇಳಿದರು.

Also read: ಈ ಕಾರಣಕ್ಕೆ ಅಮಿತ್ ಶಾ, ಈಶ್ವರಪ್ಪ ಅವರನ್ನು ಭೇಟಿಯಾಗಿಲ್ಲ: ರಾಘವೇಂದ್ರ ಅಭಿಪ್ರಾಯ
ಸಿದ್ದರಾಮಯ್ಯ #Siddaramaiah ಅವರು ಈ ರಾಜ್ಯವನ್ನು ದಿವಾಳಿ ಮಾಡಿದ್ದಾರೆ ಬರುವ ದಿನಗಳಲ್ಲಿ ಇನ್ನಷ್ಟು ಸಂಕಷ್ಟ ಎದುರಾಗಲಿದೆ. ಎಲ್ಲೆಡೆ ಭ್ರಷ್ಟಾಚಾರ ತಾಂಡವ ಆಡುತ್ತಿದೆ. ಪೊಲೀಸರು ಸಿಕ್ಕವರನ್ನು ಬಂಧಿಸಿ ಹಣ ವಸೂಲಿ ಮಾಡುತ್ತಿದ್ದಾರೆ. ಪೊಲೀಸರೆ ಇಸ್ಪೀಟ್, ಮಟ್ಕಾ ದಂಧೆ ಶುರು ಮಾಡಿಸಿದ್ದಾರೆ. ಕಾಂಗ್ರೆಸ್ ಅವಧಿಯಲ್ಲಿ ಭ್ರಷ್ಟಾಚಾರ ಗ್ಯಾರೆಂಟಿ ಎಂದು ಹೇಳಿದರು.

ಕಾಂಗ್ರೆಸ್‌ನವರು ಸಾಮಾಜಿಕ ನ್ಯಾಯ ಎಂದು ಹೇಳುತ್ತಾರೆ. ಎಸಿ ಎಸ್ಪಿ ಸಮುದಾಯಗಳ ಮೀಸಲಾತಿಯನ್ನು ನಾನು ಹೆಚ್ಚಳ ಮಾಡಿದೆ. ಇದರಿಂದ 3200 ಎಂಜನೀಯರಿಂಗ್ ಸೀಟು ಹೆಚ್ಚಳವಾಗಿದೆ. 4013 ಎಸ್ಪಿ ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟು ಸಿಕ್ಕಿವೆ. ‘ಎಸ್ಸಿ ಎಸ್ಟಿ ನೌಕರರ ಭಡ್ತಿಗೆ ಕಡತ ಸಿದ್ದವಿದೆ. ಆದರೆ, ಸರ್ಕಾರ ಅದನ್ನು ಇಟ್ಟುಕೊಂಡು ಕುಳಿತಿದೆ. ಎಸ್ಪಿ ಎಸ್ಸಿ ಸಮುದಾಯದ ಶಾಸಕರು ಅಧಿಕಾರಕ್ಕಾಗಿ ಸುಮ್ಮನೆ ಕುಳಿತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ನಾನು ಸಿಎಂ ಆಗಿ ಮೊದಲು ರೈತರ ಮಕ್ಕಳಿಗೆ ವಿದ್ಯಾನಿಧಿ ಯೋಜನೆ ಜಾರಿಗೆ ತಂದೆ. ವೃದ್ದಾಪ್ಯ ವೇತನ, ಅಂಗವಿಕಲರ ವೇತನ, ವಿಧವಾ ವೇತನ ಹೆಚ್ಚಳ ಮಾಡಿದೆ. ಎಸ್ಪಿ ಸಮುದಾಯಕ್ಕೆ ಪ್ರತ್ಯೇಕ ಖಾತೆ ಆರಂಭಿಸಿದೆ ಎಂದು ಹೇಳಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post