ಕಲ್ಪ ಮೀಡಿಯಾ ಹೌಸ್
ಹಾವೇರಿ: ರಾಜ್ಯದಲ್ಲಿ ಮಹಾಮಾರಿ ಕೊರೋನ ಸೋಂಕಿನ ಮಧ್ಯೆ ಬ್ಲ್ಯಾಕ್ ಫಂಗಸ್ ಆತಂಕ ಶುರುವಾಗಿದೆ. ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಈ ಬ್ಲ್ಯಾಕ್ ಫಂಗಸ್ ಸೋಂಕು ಕಂಡುಬಂದಿದ್ದು, ಹಿರೇಕೆರೂರಿನಲ್ಲಿ ಎರಡು ಬ್ಲ್ಯಾಕ್ ಫಂಗಸ್ ಪ್ರಕರಣಗಳು ಪತ್ತೆಯಾಗಿದೆ.
ಬ್ಲ್ಯಾಕ್ ಫಂಗಸ್ ಪತ್ತೆಯಾದ ಹಿನ್ನೆಲೆಯಲ್ಲಿ ಕ್ಷೇತ್ರದ ಜನರು ಕೋವಿಡ್‌ನಿಂದ ಸುರಕ್ಷಿತವಾಗಿರಲು ಸಾಮಾಜಿಕ ಅಂತರ ಹಾಗೂ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಹಿರೇಕೆರೂರು ಶಾಸಕ ಹಾಗೂ ಕೃಷಿ ಸಚಿವ ಬಿ.ಸಿ. ಪಾಟೀಲ್ ಮನವಿ ಮಾಡಿದ್ದಾರೆ.
ಜನರು ಕೋವಿಡ್‌ನಿಂದ ಜಾಗೃತವಾಗಿರಬೇಕೇ ಹೊರತು ಆತಂಕಕ್ಕೊಳಗಾಗಬಾರದು. ಸೋಂಕಿನ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು. ವೈದ್ಯರ ಮಾರ್ಗದರ್ಶನ ಪಡೆಯಬೇಕು. ಅಗತ್ಯಬಿದ್ದಲ್ಲಿ ವೈದ್ಯರು ಸೂಚಿಸಿದರೆ ಕೋವಿಡ್ ಕೇರ್ ಸೆಂಟರ್‌ಗೆ ದಾಖಲಾಗಬೇಕು ಎಂದು ಮನವಿ ಮಾಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post