ಕಲ್ಪ ಮೀಡಿಯಾ ಹೌಸ್ | ಹಾವೇರಿ |
ಮುಂದಿನ ದಿನಗಳಲ್ಲಿ ರಾಜಕೀಯದಲ್ಲಿ ಅವಘಡಗಳು ಸಂಭವಿಸಲಿದ್ದು, ಇನ್ನೂ, ಮಳೆಯಾಗುವ ಲಕ್ಷಣವಿದೆ ಎಂದು ಹಾರನಹಳ್ಳಿ ಕೋಡಿಮಠದ ಡಾ. ಶಿವಾನಂದ ಶಿವಯೋಗೀಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.
ರಾಣೆಬೆನ್ನೂರಿನಲ್ಲಿ ಮಾತನಾಡಿದ ಅವರು, ಇನ್ನೂ ಹೆಚ್ಚಿನ ಅನಾಹುತಗಳಾಗುವ ಸಾಧ್ಯತೆ ಇದ್ದು, ಸಂಶಯ, ಅಸಹನೆ, ದ್ವೇಷ, ರಾಜಕೀಯ ಕಲಹ ಹೆಚ್ಚಾಗುತ್ತದೆ ಹಾಗೂ ಕೊರೋನಾ ರೂಪಾಂತರ ಆಗುವ ಲಕ್ಷಣಗಳು ಬಹಳ ಇವೆ ಎಂದು ತಿಳಿಸಿದರು.
ತಾವು ಈ ಹಿಂದೆಯೇ ದೊಡ್ಡಮಟ್ಟದ ಅವಘಡ ಸಂಭವಿಸುವ ಕುರಿತು ಹೇಳಿದ್ದೆ. ಅದರಂತೆ ಭಾರತೀಯ ಸೇನೆಯ ಮುಖ್ಯಸ್ಥರ ಹೆಲಿಕಾಪ್ಟರ್ ದುರಂತ ಪ್ರಕರಣ ನಡೆದು ಹೋಯಿತು. ಮೊನ್ನೆ ನಡೆದ ಭಾರತೀಯ ಸೇನೆಯ ಮುಖ್ಯಸ್ಥರ ಅವಘಡದಂತೆ ಮತ್ತೆ ಅಂಥದ್ದೇ ದುರಂತ ಸಂಭವಿಸುವ ಲಕ್ಷಣವಿದೆ ಎಂದರು.
ಸಂಕ್ರಾತಿಯೊಳಗೆ ಮತ್ತೊಂದು ರಾಜಕೀಯ ಅವಘಡ ಸಂಭವಿಸುವ ಲಕ್ಷಣವಿದ್ದು, ಇದರಿಂದ ಜಗತ್ತು ತಲ್ಲಣಗೊಳ್ಳಲಿದೆ ಎಂದು ಹೇಳಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news













Discussion about this post