ಕಲ್ಪ ಮೀಡಿಯಾ ಹೌಸ್ | ಹಾವೇರಿ |
ಬೆಂಗಳೂರಿನಿಂದ ಗದಗಕ್ಕೆ ತೆರಳುತ್ತಿದ್ದ ಕೆಎಸ್’ಆರ್’ಟಿಸಿ ಪಲ್ಲಕ್ಕಿ ಬಸ್’ನಲ್ಲಿ ಏಕಾಏಕಿ ಬೆಂಕಿ KSRTC bus catches fire ಕಾಣಿಸಿಕೊಂಡಿದ್ದು, ಚಾಲಕನ ಸಮಯಪ್ರಜ್ಞೆಯಿಂದ ಪ್ರಯಾಣಿಕರ ಜೀವ ಉಳಿದಿರುವ ಘಟನೆ ಇಂದು ಮುಂಜಾನೆ ನಡೆದಿದೆ.
ಬೆಂಗಳೂರಿನಿಂದ ಹೊರಟಿದ್ದ ಸಾರಿಗೆ ಬಸ್’ನಲ್ಲಿ, ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ದೇವರಗುಡ್ಡ ಗ್ರಾಮದ ಬಳಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ.
ಇದರಿಂದ ತಕ್ಷಣವೇ ಎಚ್ಚೆತ್ತ ಚಾಲಕ ಫಕೀರಪ್ಪ, ಬಸ್ಸನ್ನು ರಸ್ತೆ ಬದಿಗೆ ನಿಲ್ಲಿಸಿ, ಪ್ರಯಾಣಿಕರು ತುರ್ತಾಗಿ ಕೆಳಕ್ಕೆ ಇಳಿಯುವಂತೆ ಸೂಚಿಸಿದ್ದಾರೆ. ತಕ್ಷಣವೇ ಪ್ರಯಾಣಿಕರು ಕೆಳಕ್ಕೆ ಇಳಿದಿದ್ದಾರೆ.
ಬೆಂಕಿ ಕಾಣಿಸಿಕೊಂಡ ಕೆಲವೇ ನಿಮಿಷಗಳಲ್ಲಿ ಇಡೀ ಬಸ್ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಧಗಧಗನೆ ಉರಿದಿದೆ. ಸಾರಿಗೆ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟರಾದರೂ ಪ್ರಯೋಜನವಾಗಲಿಲ್ಲ.
ಬಸ್’ನಲ್ಲಿ 17 ಪ್ರಯಾಣಿಕರಿದ್ದರು. ಚಾಲಕ ಫಕೀರಪ್ಪ ಅವರ ಸಮಯಪ್ರಜ್ಞೆಯಿಂದ ಇವರೆಲ್ಲರ ಪ್ರಾಣ ಉಳಿದಿದೆ.
ಸ್ಥಳಕ್ಕೆ ರಾಣೇಬೆನ್ನೂರು ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 













Comments 1