ಕಲ್ಪ ಮೀಡಿಯಾ ಹೌಸ್ | ಹಾವೇರಿ |
ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲೂಕಿನ ಮಾಸೂರು ಗ್ರಾಮದ ಸ್ವಾತಿ ಬ್ಯಾಡಗಿ ಎಂಬ ಯುವತಿಯನ್ನು ವಂಚಿಸಿ ಹತ್ಯೆ #Swathi Murder in Haveri ಮಾಡಿರುವ ಘಟನೆ ಖಂಡನೀಯವಾಗಿದ್ದು, ರಾಜ್ಯದಲ್ಲಿ ಪ್ರೀತಿಯ ಹೆಸರಿನಲ್ಲಿ ಲವ್ ಜಿಹಾದ್ #Love Jihad ಜಾಲ ಸಕ್ರೀಯವಾಗಿದ್ದು ಪೊಲೀಸರ ಭಯ ಇಲ್ಲದಿರುವುದೇ ಇಂತ ಪ್ರಕರಣ ಹೆಚ್ಚಾಗಲು ಕಾರಣ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ #Basavaraja Bommai ಆರೋಪಿಸಿದ್ದಾರೆ.
ಈ ಕುರಿತು ಎಕ್ಸ್ ಮಾಡಿರುವ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಹೆಣ್ಣುಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದ್ದು, ವಿಶೇಷವಾಗಿ ಪ್ರೀತಿ ಹೆಸರಿನಲ್ಲಿ ಯುವತಿಯರನ್ನು ವಂಚಿಸಿ ಹತ್ಯೆ ಮಾಡುವ ಹೇಯ ಕೃತ್ಯಗಳು ಹೆಚ್ಚಾಗಿರುವುದು ಅತ್ಯಂತ ಆಘಾತಕಾರಿ ಎಂದು ಹೇಳಿದ್ದಾರೆ.

Also read: ನೋಟರಿ ನೇಮಕಾತಿಯಲ್ಲಿ ಮೀಸಲಾತಿ | ಸದನದಲ್ಲಿ ಎಂ ಎಲ್ ಸಿ ಬಲ್ಕೀಶ್ ಬಾನು ಪ್ರಶ್ನೆ
ಈ ಘಟನೆ ನಡೆದು ಒಂದು ವಾರ ಕಳೆದರೂ ಈ ಪ್ರಕರಣದಲ್ಲಿ ಬಂಧಿತನಾಗಿರುವ ನಯಾಜ್ ಎನ್ನುವ ಪ್ರಮುಖ ಆರೋಪಿಯ ರಕ್ಷಣೆಗೆ ದೊಡ್ಡ ಮಟ್ಟದ ಕಸರತ್ತು ನಡೆದಂತೆ ಕಾಣಿಸುತ್ತದೆ. ಸ್ವಾತಿಯನ್ನು ಪ್ರೀತಿಸುವ ನಾಟಕವಾಡಿ ಅನ್ಯ ಧರ್ಮದವಳೆಂದು ತಿರಸ್ಕರಿಸಿ ತನ್ನ ಧರ್ಮದ ಬೇರೆ ಯುವತಿಯ ಜೊತೆ ಮದುವೆ ಮಾಡಿಕೊಳ್ಳಲು ತೀರ್ಮಾನಿಸಿದ್ದನ್ನು ಪ್ರಶ್ನಿಸಿರುವುದಕ್ಕೆ ಸ್ವಾತಿಯ ಕೊಲೆ ಮಾಡಿದ್ದಾನೆ ಎಂಬ ಮಾಹಿತಿ ಇದೆ.

ಹೆಣ್ಣು ಮಕ್ಕಳ ಕುಟುಂಬ, ಬಂಧುಗಳು ಮತ್ತು ಸಮಾಜ ಅತ್ಯಂತ ನೋವು ಪಡುವ ಈ ಘಟನೆಯಲ್ಲಿ ಮೃತ ಕುಟುಂಬಕ್ಕೆ ರಾಜ್ಯ ಸರ್ಕಾರ ಸೂಕ್ತ ಪರಿಹಾರ ಕೊಡಬೇಕು ಮತ್ತು ನ್ಯಾಯ ದೊರಕಿಸಿ ಕೊಡಬೇಕು ಎಂದು ಆಗ್ರಹಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post