ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಹಾವೇರಿ: ಹಿರೇಕೆರೂರು ಕ್ಷೇತ್ರದಲ್ಲಿ ಕೊರೋನಾ ಮಹಾಮಾರಿ ಲಗೆಯಿಟ್ಟಿದ್ದು, ನಗರವನ್ನು ಸೀಲ್’ಡೌನ್ ಮಾಡುವಂತೆ ಕೃಷಿ ಸಚಿವರೂ ಆಗಿರುವ ಹಿರೇಕೆರೂರು ಶಾಸಕ ಬಿ.ಸಿ. ಪಾಟೀಲ್ ಮನವಿ ಮಾಡಿದ್ದಾರೆ.
ಕೊರೋನಾದಿಂದ ಬಚಾವ್ ಆಗಲು ಸಾಮಾಜಿಕ ಅಂತರ ಕಡ್ಡಾಯವಾಗಿದ್ದು, ಮಾಸ್ಕ್ ಧರಿಸುವಂತೆ ಜನತೆಗೆ ಸೂಚಿಸಿದ್ದಾರೆ. ತಮ್ಮ ಮತ ಕ್ಷೇತ್ರದಲ್ಲಿ ಕೊರೋನಾ ಸಮುದಾಯಕ್ಕೆ ಹರಡುತ್ತಿದ್ದು, ಇದನ್ನು ನಿಯಂತ್ರಸಲು ಸೀಲ್ ಡೌನ್ ಅನಿವಾರ್ಯ ಎಂದು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಕ್ಷೇತ್ರದ ಗ್ರಾಮೀಣ ಭಾಗಗಳಾದ ಗುಡ್ಡದಮಾದಾಪುರ, ಕೋಡ, ಸುತ್ಕೋಟೆ, ಎಮ್ಮಿಗನೂರು ಸೇರಿದಂತೆ ವಿವಿಧ ಭಾಗಗಳಿಗೂ ವ್ಯಾಪಿಸಿದೆ. ಪ್ರತಿಯೊಬ್ಬರ ಜೀವ ಅವರವರ ಕೈಯಲ್ಲಿಯಿದೆ. ಜನತೆ ಆದಷ್ಟು ಎಚ್ಚೆತ್ತುಕೊಂಡಿರಬೇಕು. ಯಾರಿಗಾದರೂ ಸೋಂಕು ತಗುಲಿದ ಶಂಕೆ ವ್ಯಕ್ತವಾದಲ್ಲಿ ಅಥವಾ ಶೀತ, ಜ್ವರ, ಕೆಮ್ಮಿನಂತಹ ಲಕ್ಷಣ ಕಂಡುಬಂದಲ್ಲಿ ಆಸ್ಪತ್ರೆಗಳಿಗೆ ಭೇಟಿ ನೀಡಿ ತಪಾಸಣೆಗೊಳಪಡಬೇಕು. ಅಗತ್ಯವಿದ್ದಲ್ಲಿ ಮಾತ್ರ ಮನೆಯಿಂದ ಹೊರಬರಬೇಕು. ನಮ್ಮ ಜೀವಕ್ಕೆ ನಾವೇ ಹೊಣೆ. ಆದಷ್ಟು ಸುರಕ್ಷತಾ ಕ್ರಮ ಮುನ್ನೆಚ್ಚರಿಕೆ ಕೈಗೊಳ್ಳುವಂತೆ ಸಚಿವರು ಮನವಿ ಮಾಡಿದ್ದಾರೆ.
Get In Touch With Us info@kalpa.news Whatsapp: 9481252093
Discussion about this post