ಕಲ್ಪ ಮೀಡಿಯಾ ಹೌಸ್ | ಹಾವೇರಿ(ಶಿಗ್ಗಾವಿ) |
ನಮ್ಮ ಪಕ್ಷದ ನಾಯಕರ ಆಸೆಯಂತೆ ತಂದೆಯ ಅಭಿವೃದ್ಧಿ ಕನಸು ನನಸು ಮಾಡುತ್ತೇನೆ ಎಂದು ಶಿಗ್ಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ #Bharath Bommai ಹೇಳಿದ್ದಾರೆ.
ನಾಮಪತ್ರ ಸಲ್ಲಿಕೆಗೂ ಮೊದಲು ಶಿಗ್ಗಾವಿಯಲ್ಲಿ ಪಟ್ಟಣದಲ್ಲಿ ನಡೆದ ಬೃಹತ್ ರೋಡ್ ಶೋ ನಲ್ಲಿ ಪಾಲ್ಗೊಂಡು ಜನರನ್ನು ಉದ್ದೇಶಿಸಿ ಮಾತನಾಡಿದರು.
Also read: ವಿದ್ಯಾವಂತರು ಮಾನವೀಯತೆಯ ಗುಣವನ್ನು ರೂಢಿಸಿಕೊಳ್ಳಿ: ವಿದ್ಯಾರ್ಥಿಗಳಿಗೆ ಸಿಎಂ ಕರೆ
ಇಷ್ಟು ದೊಡ್ಡ ಸಂಖ್ಯೆಯಲ್ಲಿ ಬಂದಿದ್ದೀರಿ ನಿಮ್ಮ ಪ್ರೀತಿ ವಿಶ್ವಾಸ ಎಂದಿಗೂ ಮರೆಯಲ್ಲ. ಶಿಗ್ಗಾವಿ ಕ್ಷೇತ್ರದಲ್ಲಿ ನಮ್ಮ ತಂದೆಯವರು ಬಹಳಷ್ಟು ಅಭಿವೃದ್ಧಿ ಮಾಡಿದ್ದಾರೆ. ಕೆರೆ ತುಂಬಿಸಿದ್ದಾರೆ, ಆಸ್ಪತ್ರೆ ತಂದಿದ್ದಾರೆ. ಸಾಕಷ್ಟು ಅಭಿವೃದ್ಧಿ ಮಾಡಿದ್ದಾರೆ. ನಮ್ಮ ನಾಯಕರ ಮಾರ್ಗದರ್ಶನದಲ್ಲಿ ದೀನ ದಲಿತರು, ಎಸ್ಸಿ ಎಸ್ಟಿ, ರೈತರು, ಮಹಿಳೆಯರು, ಯುವಕರ ಪರವಾಗಿ ಕೆಲಸ ಮಾಡುತ್ತೇನೆ. ನಿಮ್ಮ ತಮ್ಮನಾಗಿ ನಿಮ್ಮೆಲ್ಲರ ರಕ್ಷಣೆ ಮಾಡುತ್ತೇನೆ. ಇಷ್ಟೆಲ್ಲ ದೊಡ್ಡ ಸಂಖ್ಯೆಯಲ್ಲಿ ಆಗಮಿರುವುದಕ್ಕೆ ನಿಮಗೆ ಕೋಟಿ ಕೋಟಿ ನಮನ ಸಲ್ಲಿಸುತ್ತೇನೆ ಎಂದು ಹೇಳಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post