No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Sunday, July 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಹಾವೇರಿ

ಶಿಗ್ಗಾವಿ ಕ್ಷೇತ್ರಕ್ಕೆ ರಾಜ್ಯ ಸರ್ಕಾರದಿಂದ ನೂರು ಕೋಟಿ ಅನುದಾನ ಬಿಡುಗಡೆ ಹಸಿ ಸುಳ್ಳು: ಬಸವರಾಜ ಬೊಮ್ಮಾಯಿ

kalpa News by kalpa News
October 30, 2024
in ಹಾವೇರಿ
0
ಉತ್ತಮ ಆಡಳಿತದ ಫಲ ಗುಜರಾತ್ ಚುನಾವಣಾ ಫಲಿತಾಂಶ : ಸಿಎಂ ಬೊಮ್ಮಾಯಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಹಾವೇರಿ(ಶಿಗ್ಗಾವಿ)  |

ರಾಜ್ಯ ಕಾಂಗ್ರೆಸ್ ಸರ್ಕಾರ ಶಿಗ್ಗಾವಿಗೆ ನೂರು ಕೋಟಿ ರೂ. ಹಣ ಬಿಡುಗಡೆ ಮಾಡಿದ್ದೇವೆ ಎಂದು ಹಸಿ ಸುಳ್ಳು ಹೇಳಿ ಜನರಿಗೆ ಮೋಸ ಮಾಡಿದೆ. ನೂರು ಕೋಟಿ ರೂ. ಬಿಡುಗಡೆ ಮಾಡಿರುವ ದಾಖಲೆ ಇದ್ದರೆ ತೋರಿಸಲಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ #Basavaraja Bommai ಆಗ್ರಹಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ #Bhart Bommai ಪರ ಶಿಗ್ಗಾವಿ ತಾಲೂಕಿನ ಹೋತನಹಳ್ಳಿ, ಚಂದಾಪುರ ಗ್ರಾಮಗಳಲ್ಲಿ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದರು. ರಾಜ್ಯ ಕಾಂಗ್ರೆಸ್ ಸರ್ಕಾರ ಜನರ ಮೇಲೆ ದಬ್ಬಾಳಿಕೆ ಮಾಡುತ್ತಿದೆ. ಸಣ್ಣ ಪುಟ್ಟ ವಿಷಯಗಳಿಗೂ ಜನರ ಮೇಲೆ ಕೇಸ್ ಹಾಕಿ ಪೊಲಿಸ್ ಸ್ಟೇಷನ್ ಗೆ ಅಲೆದಾಡುವಂತೆ ಮಾಡುತ್ತಿದ್ದಾರೆ. ಪಿಎಸ್ ಐ ಗಳು ಕೊಬ್ಬಿದ್ದಾರೆ. ದಬ್ಬಾಳಿಕೆ ಮಾಡುವ ಸರ್ಕಾರದ ವಿರುದ್ದ ಎಲ್ಲರೂ ನಿಲ್ಲಬೇಕು. ನಾನು ಸದಾ ನಿಮ್ಮ ಜೊತೆಗೆ ಇರುತ್ತೇನೆ. ನಿಮ್ಮ ಕೂದಲಿಗೆ ಕೊಂಕಾಗದ ಹಾಗೆ ನೋಡಿಕೊಳ್ಳುತ್ತೇನೆ ಎಂದು ಭರವಸೆ ನೀಡಿದರು.
ಶಿಗ್ಗಾವಿ ಕ್ಷೇತ್ರದಲ್ಲಿ ಯಾವುದೇ ರೀತಿಯ ಗಲಭೆಗಳು ಆಗಿರಲಿಲ್ಲ. ನಮ್ಮ ನಮ್ಮ ನಡುವೆಯೇ ಮಾತುಕತೆ ಮಾಡಿಕೊಂಡು ಸಮಸ್ಯೆ ಬಗೆಹರಿಸಿಕೊಂಡು ಬರುತ್ತಿದ್ದೇವು. ಈಗ ಪ್ರತಿಯೊಂದಕ್ಕೂ ಪೊಲಿಸ್ ಸ್ಟೇಷನ್ ಗೆ ಹೋಗಬೇಕು. ಅಲ್ಲಿ ಇಬ್ಬರೂ ದುಡ್ಡು ಕಳೆದುಕೊಳ್ಳುವಂತಾಗಿದೆ‌. ಈ ಕ್ಷೇತ್ರದಲ್ಲಿ ಗುಂಡಾ ಸಂಸ್ಕೃತಿ ಪೊಲಿಸ್ ಸ್ಟೇಷನ್ ರಾಜಕೀಯಕ್ಕೆ ಅವಕಾಶ ನೀಡದೇ ಭರತ್ ಬೊಮ್ಮಾಯಿಯನ್ನು ಗೆಲ್ಲಿಸಿಕೊಂಡು ಬರಬೇಕು ಎಂದರು.

Also read: ಎಲ್ಲ ಸಂಸ್ಕೃತಿಯನ್ನು ಗೌರವಿಸಿ, ಆದರೆ ನಮ್ಮ ಸಂಸ್ಕೃತಿಯಲ್ಲಿ ಜೀವಿಸಿ | ಡಾ. ಕೆ.ಪಿ. ಪುತ್ತೂರಾಯ ಕರೆ

ಅಭಿವೃದ್ದಿ ನಿರಂತರ

ಕಳೆದ ಹದಿನೈದು ವರ್ಷದಲ್ಲಿ ಅತಿ ಹಿಂದುಳಿದ ತಾಲೂಕು ಆಗಿದ್ದ ಶಿಗ್ಗಾವಿಯನ್ನು ಒಂದು ಹಳಿಗೆ ತಂದಿದ್ದೇವೆ. ಅಭಿವೃದ್ಧಿ ಪಥ ನಿರಂತರವಾಗಿ ಮುಂದುವರೆಯಬೇಕು. ಇಲ್ಲದಿದ್ದರೆ ಮತ್ತೆ ಹಿಂದುಳಿಯುತ್ತೇವೆ. ಅಭಿವೃದ್ಧಿ ನಿರಂತರವಾಗಬೇಕೆಂದರೆ ಅಭಿವೃದ್ಧಿ ಮಾಡುವ ಪಕ್ಷಕ್ಕೆ ಬೆಂಬಲ ಕೊಡಬೇಕು. ನಾನು ಏನಾದರೂ ಅಭಿವೃದ್ಧಿ ಮಾಡಿದರೆ ಅದರ ಶ್ರೆಯಸ್ಸು ನಿಮಗೆ ಸಲ್ಲುತ್ತದೆ. ನಾನು ಸಿಎಂ ಆಗಿದ್ದಾಗ ನಿಮ್ಮ ಮತಕ್ಕೆ ಚ್ಯುತಿ ಬಾರದಂತೆ ನಡೆದುಕೊಂಡಿದ್ದೇನೆ ಎಂದರು.
ನಾನು ಸಿಎಂ ಆಗಿದ್ದಾಗ ರೈತರ ಮಕ್ಕಳು ವಿದ್ಯಾವಂತರಾಗಲಿ ಎಂದು ರೈತರ ಮಕ್ಕಳಿಗೆ ವಿದ್ಯಾನಿಧಿ ಯೋಜನೆ ಜಾರಿ ಮಾಡಿದ್ದೆ ಈ ಸರ್ಕಾರ ಅದನ್ನು ನಿಲ್ಲಿಸಿದೆ‌. ಬರ ಪ್ರವಾಹ ಬಂದಾಗ ನೆರವಿಗೆ ಸರ್ಕಾರ ಬರಬೇಕು. ಮಳೆ ಹೆಚ್ಚಾಗಿ ಮುಂಗಾರು ಹಿಂಗಾರು ಎರಡೂ ಹಾನಿಯಾಗಿದೆ. ಆದರೆ ಈ ಸರ್ಕಾರ ರೈತರ ನೆರವಿಗೆ ಬರುತ್ತಿಲ್ಲ. ಸಂಕಷ್ಟದ ಸಂದರ್ಭದಲ್ಲಿ ನೆರವಿಗೆ ಬಾರದ ಸರ್ಕಾರ ಇದ್ದೂ ಸತ್ತಂತೆ ಎಂದು ಹೇಳಿದರು.

ನಾನು ಸಿಎಂ ಆಗಿದ್ದಾಗ ಪ್ರವಾಹ ಬಂದಾಗ ಎರಡು ಪಟ್ಟು ಪರಿಹಾರ ಕೊಟ್ಟಿದ್ದೇನೆ. ಸಂಪೂರ್ಣ ಮನೆಗಳು ಬಿದ್ದರೆ ಐದು ಲಕ್ಷ ಪರಿಹಾರ ಕೊಟ್ಟಿದ್ದೆ, ಇವರು ತೊಂಭತ್ತಾರು ಸಾವಿರ ಕೊಡುವುದಾಗಿ ಹೇಳುತ್ತಿದ್ದಾರೆ‌ ಅದನ್ನೂ ಇನ್ನೂ ಕೊಡುತ್ತಿಲ್ಲ. ನನಗೆ ನಿಮ್ಮೊಡನೆಯ ಒಡನಾಟದಿಂದ ನಿಮ್ಮ ಕಷ್ಟ ಅರಿವಿದೆ. ದೇಶಕ್ಕೆ ರಾಜ್ಯಕ್ಕೆ ಅಂತಕರಣ ಇರುವ ನಾಯಕ ಬೇಕಾಗಿದೆ. ಕೇಂದ್ರ ಸರ್ಕಾರ ಕಳೆದ ಏಳೆಂಟು ವರ್ಷದಲ್ಲಿ ಕಿಸಾನ್ ಸಮ್ಮಾನ್ ಯೋಜನೆ ನಿರಂತರವಾಗಿ ನಡೆಯುತ್ತಿದೆ ಎಂದು ಹೇಳಿದರು.

http://kalpa.news/wp-content/uploads/2024/04/VID-20240426-WA0008.mp4

ನನ್ನ ಕೆಲಸಗಳ ಬಗ್ಗೆ ನಾನೇ ಹೇಳುವುದಿಲ್ಲ. ಅವುಗಳನ್ನು ನೀವು ಅನುಭವಿಸಿ ಹೇಳಬೇಕು. ನಾನು ಎಂಪಿ ಆದ ಮೇಲೆ ಈ ಕ್ಷೇತ್ರವನ್ನು ಕಳೆದುಕೊಳ್ಳುತ್ತೇನಾ ಎಂಬ ಆತಂಕ ಇತ್ತು. ಪಕ್ಷದ ಮುಖಂಡರು ಭರತ್ ಬೊಮ್ಮಾಯಿಗೆ ಅವಕಾಶ ಕೊಟ್ಟಿದ್ದಾರೆ. ನಿಮ್ಮ ಆಸೆಯಂತೆ ಭರತ್ ಬೊಮ್ಮಾಯಿ ಅಭ್ಯರ್ಥಿಯಾಗಿದ್ದಾರೆ. ಅವರು ಅಭಿವೃದ್ಧಿಯ ಗಾಡಿ ಮುಂಡುವರೆಸಿಕೊಂಡು ಹೋಗಬೇಕು. ನಾನು ಈ ಕ್ಷೇತ್ರದ ಶಾಸಕನಾಗಲಿ ಆಗದಿರಲಿ ಸದಾ ನಿಮ್ಮ ಸೇವೆ ಮಾಡಲು ನಿಮ್ಮ ಜೊತೆಗೆ ಇರುತ್ತೆನೆ. ಬಹುತೇಕ ಗ್ರಾಮಗಳಲ್ಲಿ ಮನೆಗಳ ಬೇಡಿಕೆ ಇದೆ‌. ನಾವಿದ್ದಾಗ ಮನೆ ನಿರ್ನಾಣಕ್ಕೆ ಐದು ಲಕ್ಷ ರೂ. ನೀಡುತ್ತಿದ್ದೇವು. ಈಗ ಈ ಸರ್ಕಾರ ಕಡಿಮೆ ಕೊಡುತ್ತಿದೆ ಎಂದರು.

ನಾನು ಎಂಪಿ ಆದ ಮೇಲೆ ಚಂದಾಪುರಕ್ಕೆ ಬ್ಯಾಂಕ್ ಮಾಡಲು ಸೂಚನೆ ನೀಡಿದ್ದೇನೆ. ಅವರು ಈಗಾಗಲೇ ಸಮೀಕ್ಷೆ ಮಾಡಿಕೊಂಡು ಹೋಗಿದ್ದಾರೆ‌. ಎರಡು ಮೂರು ತಿಂಗಳಲ್ಲಿ ಚಂದಾಪುರಕ್ಕೆ ಬ್ಯಾಂಕ್ ಆರಂಭಿಸಲಾಗುವುದು. ಮುಂದಿನ ಶೈಕ್ಷಣಿಕ ವರ್ಷದಿಂದ ಕಾಲೇಜು ಆರಂಭಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: Basavaraja BommaiBhart BommaiHaveri (Shiggavi)Kannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಬಸವರಾಜ ಬೊಮ್ಮಾಯಿಭರತ್ ಬೊಮ್ಮಾಯಿಹಾವೇರಿ(ಶಿಗ್ಗಾವಿ)
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಎಲ್ಲ ಸಂಸ್ಕೃತಿಯನ್ನು ಗೌರವಿಸಿ, ಆದರೆ ನಮ್ಮ ಸಂಸ್ಕೃತಿಯಲ್ಲಿ ಜೀವಿಸಿ | ಡಾ. ಕೆ.ಪಿ. ಪುತ್ತೂರಾಯ ಕರೆ

Next Post

900 ದಿನಗಳದರೂ ಕರುಣೆ ತೋರಿಸದ ಕೇಂದ್ರ ಸರಕಾರ | ಏನಿದು ವಿಚಾರ? ಯಾವ ಜಿಲ್ಲೆಗೆ ಸಂಬಂಧಿಸಿದ್ದು?

kalpa News

kalpa News

Next Post
INR 100 Crore Allocated by SDMF to Enhance Storage Capacity of 93 Lakes: Minister Bose Raju

900 ದಿನಗಳದರೂ ಕರುಣೆ ತೋರಿಸದ ಕೇಂದ್ರ ಸರಕಾರ | ಏನಿದು ವಿಚಾರ? ಯಾವ ಜಿಲ್ಲೆಗೆ ಸಂಬಂಧಿಸಿದ್ದು?

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL