ಕಲ್ಪ ಮೀಡಿಯಾ ಹೌಸ್ | ಹಾವೇರಿ (ಶಿಗ್ಗಾವಿ) |
ಕಾಂಗ್ರೆಸ್ ನ ದುರಾಡಳಿತದಿಂದ ನಮ್ಮ ಜನರನ್ನು ರಕ್ಷಣೆ ಮಾಡಲು ಈ ಚುನಾವಣೆಯಲ್ಲಿ ಅತಿ ಹೆಚ್ಚು ಮತಗಳಿಂದ ಭರತ್ ಬೊಮ್ಮಾಯಿಯವರನ್ನು ಗೆಲ್ಲಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ #MP Basavaraja Bommai ಹೇಳಿದ್ದಾರೆ.
ಶಿಗ್ಗಾವಿಯಲ್ಲಿ ಇಂದು ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿಯವರ #Bharath Bommai ನಾಮಪತ್ರ ಸಲ್ಲಿಕೆಗೂ ಮುನ್ನ ಶಿಗ್ಗಾವಿ ಪಟ್ಟಣದಲ್ಲಿ ನಡೆದ ಬೃಹತ್ ರೋಡ್ ಶೋ ನಲ್ಲಿ ಪಾಲ್ಗೊಂಡು ನಂತರ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು. ಭರತ್ ಬೊಮ್ಮಾಯಿವರಿಗೆ ಇಷ್ಟು ದೊಡ್ಡ ಶಕ್ತಿ ನೀಡಿದ್ದೀರಿ ನಿಮ್ಮ ಅಭೂತಪೂರ್ವ ಬೆಂಬಲಕ್ಕೆ ನಾನು ಚಿರ ಋಣಿ ಯಾಗಿದ್ದೇನೆ. ಮಾಜಿ ಮುಖ್ಯಮಂತ್ರಿ ಹಾಗೂ ನಮ್ಮೆಲ್ಲರ ನೆಚ್ಚಿನ ನಾಯಕರಾದ ಬಿ.ಎಸ್. ಯಡಿಯೂರಪ್ಪ ಅವರು ನನ್ನ ಚುನಾವಣೆಗೆ ನಾಲ್ಕು ಬಾರಿ ಶಿಗ್ಗಾವಿಗೆ ಬಂದಿದ್ದಾರೆ. ಅವರು ಶಿಗ್ಗಾವಿಗೆ ಕಾಲಿಟ್ಟಾಗಲೆಲ್ಲಾ ಬಿಜೆಪಿ ಇಲ್ಲಿ ಗೆದ್ದಿದೆ. ಯಡಿಯೂರಪ್ಪ ಅವರ ಆಶಿರ್ವಾದ ಎಷ್ಟಿದೆ ಎಂದರೆ ನನಗಿಂತ ಹೆಚ್ಚಿನ ಅಂತರದಿಂದ ಭರತ್ನ ಬೊಮ್ಮಾಯಿಯನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

Also read: ಕರ್ನಾಟಕ ರಾಜ್ಯ ಬೀಜ ನಿಗಮದ ವತಿಯಿಂದ ಶೇರುದಾರರಿಗೆ ಬಿಗ್ ಗುಡ್ ನ್ಯೂಸ್
ಇದೇ ಸಂದರ್ಭದಲ್ಲಿ ಭರತ್ ಬೊಮ್ಮಾಯಿ ನಮ್ಮ ಕಾಲದ ಅಭಿವೃದ್ಧಿ ಮುಂದುವರೆಯಬೇಕು. ರೈತರು, ಹಿಂದುಳಿದವರು, ಮಹಿಳೆಯರು, ಯುವಕರ ಸಮಗ್ರ ಅಭಿವೃದ್ಧಿ ಮಾಡಬೇಕೆಂದು ಭರತ್ ಗೆ ಆದೇಶ ಮಾಡುತ್ತೇನೆ. ನಾನು ನಿಮ್ಮ ಜೊತೆಗೆ ಇರುತ್ತೇನೆ. ಚುನಾವಣೆಯಲ್ಲಿ ಯಾರೂ ಮೈಮರೆಯಬಾರದು, ಹತ್ತು ದಿನ ಎಲ್ಲರೂ ಬೂತ್ ಮಟ್ಟದಲ್ಲಿ ಸಕ್ರೀಯರಾಗಿ ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post