ಕಲ್ಪ ಮೀಡಿಯಾ ಹೌಸ್ | ಹಾವೇರಿ |
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಬಸ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಕಾರಿನಲ್ಲಿದ್ದ ಇಬ್ಬರು ಮೃತಪಟ್ಟು ನಾಲ್ವರು ಗಾಯಗೊಂಡಿರುವ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಬೆಳಗಲಪೇಟೆ ಬಳಿ ನಡೆದಿದೆ.
ಕೇರಳದ ಕಾಸರಗೋಡು ಜಿಲ್ಲೆಯ ತಳಂಗರೆ ನುಸ್ರತ್ ನಗರದ ಮಹಮ್ಮದ್ ಕುಂಞ (65) ಹಾಗೂ ಅವರ ಪತ್ನಿ ಆಯಿಷಾ ಮಹಮ್ಮದ್ ಕುಂಞ ( (62) ಮೃತಪಟ್ಟವರಾಗಿದ್ದು, ಮೃತರ ಪುತ್ರ ಝಯಾರ್, ಸೊಸೆ ಇಶಾನ್ ಹಾಗೂ ಇಬ್ಬರು ಮೊಮ್ಮಕ್ಕಳು ಗಾಯಗೊಂಡಿದ್ದು ಅವರನ್ನು ಅಸ್ಪತ್ರೆಗೆ ದಾಖಲಿಸಲಾಗಿದೆ.
ಹುಬ್ಬಳ್ಳಿಯಿಂದ ಹಾನಗಲ್ ಕಡೆ ಹೊರಟಿದ್ದ ಕಾರು ಎದುರಿನಿಂದ ಬಂದ ಸಾರಿಗೆ ಬಸ್ ನಡುವೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಬೆಳಗಲಪೇಟೆ ಬಳಿ ಅಪಘಾತ ಸಂಭವಿಸಿದೆ. ವಿಷಯ ತಿಳಿಯುತ್ತಿದ್ದಂತೆ ಹಾನಗಲ್ ಪೊಲೀಸರು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಘಟನೆ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Also read: ಭಾರತ ದೇಶಕ್ಕೆ ಕಾಂಗ್ರೆಸ್ ಅನಿವಾರ್ಯ ಮತ್ತು ಅಗತ್ಯ: ಹೆಚ್.ಎಸ್. ಸುಂದರೇಶ್
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post