No Result
View All Result
Sparsh Hospital Sarjapur Bengaluru 1st Anniversary
English Articles

SPARSH Hospital Sarjapur Celebrates 1st Anniversary, Expands Advanced Healthcare Access

by kalpa News
September 16, 2026
0

Kalpa Media House  |  ​Bengaluru  | As Sarjapur and the larger South East Bengaluru corridor continue to expand rapidly, the...

Read moreDetails
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
  • Advertise With Us
  • Grievances
  • About Us
  • Contact Us
Wednesday, September 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉತ್ತರ ಕನ್ನಡ

ರೋಗವಿಲ್ಲದ ಸ್ಥಿತಿ ಆರೋಗ್ಯವಲ್ಲ : ದೇಹ–ಮನಸ್ಸು–ಆತ್ಮದ ಸಮತೋಲನ : ರಾಮಚಂದ್ರಾಪುರ ಶ್ರೀ

kalpa News by kalpa News
August 6, 2026
in ಉತ್ತರ ಕನ್ನಡ
0
concern for your food like your vehicle's fuel: Ramachandrapura Shri
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  |

ದೇಹದಲ್ಲಿ ಸಪ್ತ ಧಾತುಗಳಿದ್ದು, ಈ ಧಾತುಗಳು ಒಂದಕ್ಕೋಂದು ಸಾಮ್ಯವಾಗಿದ್ದಾಗ ಆರೋಗ್ಯ. ಧಾತುಗಳಲ್ಲಿ ವೈಷಮ್ಯ ಉಂಟಾದಾಗ ಅದೇ ಅನಾರೋಗ್ಯ ಎಂಬುದಾಗಿ ಆರೋಗ್ಯ ಶಾಸ್ತ್ರ ಹೇಳಿದ್ದು, ಆಯುರ್ವೇದದ ಮುಖ್ಯ ಲಕ್ಷ್ಯವೇ ಧಾತುಗಳ ಸಾಮ್ಯವಾಗಿದೆ ಎಂದು ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ತಿಳಿಸಿದರು.

ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಧರ್ಮಸಭೆಯಲ್ಲಿ ‘ಅನ್ನಂ ಬ್ರಹ್ಮ’ ಮಾಲಿಕೆಯಲ್ಲಿ ಪ್ರವಚನ ಅನುಗ್ರಹಿಸಿದ ಶ್ರೀಗಳು, ಆರೋಗ್ಯವೆಂದರೆ ಕೇವಲ ರೋಗವಿಲ್ಲದ ಸ್ಥಿತಿಯಲ್ಲ. ದೇಹ, ಮನಸ್ಸು ಹಾಗೂ ಆತ್ಮದ ನಡುವೆ ಸಮತೋಲನ ಸಾಧಿಸಿದ ಸ್ಥಿತಿ ಎಂದು ಆಯುರ್ವೇದ ತಿಳಿಸುತ್ತದೆ. ವಾತ, ಪಿತ್ತ ಮತ್ತು ಕಫ ಎಂಬ ತ್ರಿದೋಷಗಳು ಪರಸ್ಪರ ಹೊಂದಾಣಿಕೆಯಿಂದ ಕಾರ್ಯನಿರ್ವಹಿಸಿದಾಗ ಮಾತ್ರ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ. ಇವುಗಳ ಅಸಮತೋಲನವೇ ಅನಾರೋಗ್ಯಕ್ಕೆ ಕಾರಣವಾಗುತ್ತದೆ ಎಂದು ವಿವರಿಸಿದರು.

ಒಂದು ಮನೆಯಲ್ಲಿ ಸದಸ್ಯರು ಹೊಂದಾಣಿಕೆಯಿಂದ ಬದುಕಿದಾಗ ಮನೆ ಸುಖಮಯವಾಗಿರುವಂತೆ, ದೇಹದಲ್ಲಿರುವ ವಾತ, ಪಿತ್ತ ಮತ್ತು ಕಫಗಳೂ ಸಮತೋಲನದಲ್ಲಿದ್ದಾಗ ಆರೋಗ್ಯ ಸ್ಥಿರವಾಗಿರುತ್ತದೆ. ಈ ಸ್ಥಿತಿಯನ್ನು ‘ಧಾತು ಸಾಮ್ಯ’ ಎಂದು ಆಯುರ್ವೇದದಲ್ಲಿ ಕರೆಯಲಾಗುತ್ತದೆ. ಸರಿಯಾದ ಆಹಾರ, ಉತ್ತಮ ನಿದ್ರೆ ಹಾಗೂ ನಿಯಮಿತ ಜೀವನಶೈಲಿಯ ಮೂಲಕ ಈ ಸಮತೋಲನವನ್ನು ಕಾಪಾಡಿಕೊಳ್ಳಬಹುದು.

– ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು

ಪೂರ್ಣ ಆರೋಗ್ಯ ಉಂಟಾದಾಗ ಮಾತ್ರ ಪೂರ್ಣ ಆತ್ಮದರ್ಶನವನ್ನು ಹೊಂದಲು ಸಾಧ್ಯ. ಧಾತು ಸಾಮ್ಯ ಏರ್ಪಟ್ಟಾಗ ಆತ್ಮದರ್ಶನವನ್ನು ಪಡೆಯಲು ಶಕ್ಯವಾಗುತ್ತದೆ. ಮಹಾನಾರಾಯಣೋಪನಿಷತ್ತು ಹಾಗೂ ಕಠೋಪನಿಷತ್ತುಗಳಲ್ಲಿ ಧಾತು ಸಾಮ್ಯವಾದಾಗ ಹೃದಯ ಗುಹೆಯಲ್ಲಿ ಹುದುಗಿ ಕುಳಿತಿರುವ ಆತ್ಮವನ್ನು ಕಾಣಬಹುದು ಎಂದು ಹೇಳಲಾಗಿದೆ ಎಂದು ಆಯುರ್ವೇದ ಹಾಗೂ ಉಪನಿಷತ್ತುಗಳ ಸಮೀಕರಣದೊಂದಿಗೆ ಆರೋಗ್ಯದಿಂದ ಆತ್ಮದರ್ಶನ ಸಾಧ್ಯ ಎಂದು ನಿರೂಪಿಸಿದರು.

Also read>> ನಾರದರ ಆದರ್ಶಗಳು ಪತ್ರಿಕೋದ್ಯಮಕ್ಕೆ ಪ್ರೇರಣೆಯಾಗಲಿ : ಅರುಣ್ ಕುಮಾರ್

ಮಾನವನ ಜೀವನದಲ್ಲಿ ದೈಹಿಕ ಮತ್ತು ಮಾನಸಿಕ ವೇಗಗಳನ್ನು ಸರಿಯಾಗಿ ನಿರ್ವಹಿಸುವುದು ಅತ್ಯಂತ ಮುಖ್ಯ. ವಾಂತಿ, ಹಸಿವು, ಬಾಯಾರಿಕೆ ಮೊದಲಾದ ದೈಹಿಕ ವೇಗಗಳನ್ನು ಅನಗತ್ಯವಾಗಿ ತಡೆಯಬಾರದು. ಅದೇ ವೇಳೆ ಲೋಭ, ದ್ವೇಷ, ಈರ್ಷೆ, ಕೋಪದಂತಹ ಮನೋವೇಗಗಳನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬೇಕು. ಅಗತ್ಯವಿಲ್ಲದೆ ಮಾತನಾಡುವುದು, ಸುಳ್ಳು ಹೇಳುವುದು, ಕಟುವಾಗಿ ವರ್ತಿಸುವುದು ಹಾಗೂ ಇತರರಿಗೆ ನೋವುಂಟು ಮಾಡುವ ಮಾತುಗಳನ್ನು ಆಡಬಾರದು. ಒಟ್ಟಾರೆ, ಆರೋಗ್ಯಕರ ಜೀವನಕ್ಕಾಗಿ ದೇಹ, ಮನಸ್ಸು ಮತ್ತು ಆತ್ಮದ ಸಮನ್ವಯ ಅಗತ್ಯ. ಆಹಾರ, ನಿದ್ರೆ, ಬ್ರಹ್ಮಚರ್ಯ ಹಾಗೂ ಸದಾಚಾರದ ಮೂಲಕ ಧಾತುಗಳ ಸಮತೋಲನವನ್ನು ಕಾಪಾಡಿಕೊಂಡಾಗ ಮಾತ್ರ ಸಂಪೂರ್ಣ ಆರೋಗ್ಯ ಮತ್ತು ಆತ್ಮಜ್ಞಾನದ ಮಾರ್ಗ ಸುಗಮವಾಗುತ್ತದೆ ಎಂದು ತಿಳಿಸಿದರು.PES Shivamogga

ಬ್ರಹ್ಮಚರ್ಯ ಎಂಬುದಕ್ಕೆ ಧರ್ಮಶಾಸ್ತ್ರ, ಯೋಗಶಾಸ್ತ್ರ ಹಾಗೂ ಆಯೂರ್ವೇದ ಸ್ವಲ್ಪ ವಿಭಿನ್ನವಾದ ವ್ಯಾಖ್ಯಾನವನ್ನು ಮಾಡುತ್ತವೆ. ಸಂಕ್ಷೇಪವಾಗಿ ಹೇಳುವುದಾದರೆ ಆಯುರ್ವೇದದ ಪ್ರಕಾರ ಇಂದ್ರಿಯ ಸಂಯಮವೇ ಬ್ರಹ್ಮಚರ್ಯವಾಗಿದೆ. ಆಯುರ್ವೇದದ ಅಂತಿಮ ಉದ್ದೇಶ ಕೇವಲ ರೋಗ ನಿವಾರಣೆಯಲ್ಲ, ಆತ್ಮಜ್ಞಾನವನ್ನು ಸಾಧಿಸುವುದೇ ಅದರ ಪರಮ ಗುರಿಯಾಗಿದೆ. ಧಾತುಗಳ ಪ್ರಸನ್ನತೆ ಮತ್ತು ಮನಸ್ಸಿನ ಶುದ್ಧತೆಯ ಮೂಲಕ ಆತ್ಮಸಾಕ್ಷಾತ್ಕಾರ ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಖ್ಯಾತ ದೈವಜ್ಞ ವಿಷ್ಣು ಪೂಚಕ್ಕಾಡು ದಂಪತಿಗಳು, ಯುವ ಮುಖಂಡ ಹರಿಪ್ರಕಾಶ ಕೋಣೆಮನೆ, ವಿದ್ವಾನ್ ಗೋಪಾಲಕೃಷ್ಣ ಭಟ್ ಹಂಡ್ರಮನೆ ಶ್ರೀಗಳಿಂದ ಆಶೀರ್ವಾದ ಪಡೆದರು. ಸಾಗರ ಹವ್ಯಕ ಮಂಡಲ ಗೋಳಗೋಡು, ಕೋಗೋಡು, ಮರಗುಡಿ, ಸಾಗರ ಪೂರ್ವ, ಸಾಗರ ಪಶ್ಚಿಮ ವಲಯಗಳ ಪರವಾಗಿ ಸುಬ್ರಾಯ ಮಂಜಪ್ಪ ಹೆಗಡೆ ದಂಪತಿಗಳು ಭಿಕ್ಷಾಸೇವೆ ಸಮರ್ಪಿಸಿದರು. ಜಿ. ಕೆ. ಹೆಗಡೆ ಗೋಳಗೋಡ, ಲಕ್ಷ್ಮೀನಾರಾಯಣ ಸಂಪ, ವಿ. ಜಿ ಹೆಗಡೆ ಸಾಗರ, ಅನುಪಮಾ ಸಾರಂಗ, ರುಕ್ಮಾವತಿ ಸಾಗರ, ದಿನ ಪ್ರಧಾನರಾದ ಮುಳ್ಳಂಜ ವೆಂಕಟೇಶ್ವರ ಭಟ್ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      Kumadvathi College ShikariuraKalpa News Advertising DisclaimerKalahamsa Infotech private limited

 

 

 

Tags: GokarnaKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaRaghaveshwara shriShri Ramachandrapura MuttUttara Kannadaಗೋಕರ್ಣ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನಾರದರ ಆದರ್ಶಗಳು ಪತ್ರಿಕೋದ್ಯಮಕ್ಕೆ ಪ್ರೇರಣೆಯಾಗಲಿ : ಅರುಣ್ ಕುಮಾರ್

Next Post

ತೀರ್ಥಹಳ್ಳಿ, ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು!

kalpa News

kalpa News

Next Post
Thirthahalli-driver loses control-Car plunges into lake

ತೀರ್ಥಹಳ್ಳಿ, ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು!

Leave a Reply Cancel reply

Your email address will not be published. Required fields are marked *

No Result
View All Result
Sparsh Hospital Sarjapur Bengaluru 1st Anniversary
English Articles

SPARSH Hospital Sarjapur Celebrates 1st Anniversary, Expands Advanced Healthcare Access

by kalpa News
September 16, 2026
0

Kalpa Media House  |  ​Bengaluru  | As Sarjapur and the larger South East Bengaluru corridor continue to expand rapidly, the...

Read moreDetails
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL