ಕೊಪ್ಪಳ: ತನ್ನ ಮೂವರು ಮಕ್ಕಳನ್ನು ನೀರಿನಲ್ಲಿ ಮುಳುಗಿಸಿ ಕೊಂದು, ತಾನೂ ಸಹ ತಾಯಿಯೂ ಸಹ ಆತ್ಮಹತ್ಯೆಗೆ ಶರಣಾಗಿರುವ ಘೋರ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಯರೇಹಂಚಿನಾಳ ಗ್ರಾಮದಲ್ಲಿ ಈ ಹೃದಯವಿದ್ರಾವಕ ಘಟನೆ ನಡೆದಿದ್ದು, ಯಲ್ಲಮ್ಮ ಎಂಬಾಕೆ ಮಕ್ಕಳಾದ ಅಕ್ಷತಾ (7), ಕಾವ್ಯಾ(4) ಮತ್ತು ನಾಗರಾಜ್(2) ರನ್ನು ನೀರಿನಲ್ಲಿ ಮುಳುಗಿಸಿ ಹತ್ಯೆಗೈದು ಬಳಿಕ ನೇಣಿಗೆ ಶರಣಾಗಿದ್ದಾಳೆ.
ಅಕ್ಷತಾಳನ್ನು ನೀರಿನ ಹಂಡೆಯಲ್ಲಿ , ಕಾವ್ಯಾಳನ್ನು ಬಕೆಟ್’ನಲ್ಲಿ ಮತ್ತು ನಾಗರಾಜನನ್ನು ನೀರಿನ ಟ್ಯಾಂಕ್‌ನಲ್ಲಿ ಮುಳುಗಿಸಿ ಹತ್ಯೆಗೈದಿದ್ದಾಳೆ.
ಹೆತ್ತ ತಾಯಿಯೇ ತನ್ನ ಮಕ್ಕಳನ್ನು ಈ ರೀತಿ ಕೊಂದು, ತಾನೂ ಸಹ ಆತ್ಮಹತ್ಯೆಗೆ ಶರಣಾಗಲು ಕಾರಣವೇನು ಎಂಬುದು ಮಾತ್ರ ತಿಳಿದುಬಂದಿಲ್ಲ.
ಇನ್ನು, ಈ ಕುರಿತಂತೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೇಣುಕಾ, ಘಟನೆಗೆ ಕಾರಣವೇನು ಎಂದು ಇನ್ನು ತನಿಖೆಯಿಂದಷ್ಟೇ ತಿಳಿದುಬರಬೇಕಿದೆ. ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ಆರಂಭವಾಗಿದೆ ಎಂದಿದ್ದಾರೆ.
Discussion about this post