ಕಲ್ಪ ಮೀಡಿಯಾ ಹೌಸ್ | ಹೈದರಾಬಾದ್ |
ಪ್ರೀತಿಸಿದ ಯುವತಿ ಬೇರೊಬ್ಬನನ್ನು ಮದುವೆಯಾದ ಹಿನ್ನೆಲೆಯಲ್ಲಿ ಮನನೊಂದ ಪ್ರೇಮಿಯೊಬ್ಬ ಫೇಸ್ ಬುಕ್ ಲೈವ್ ಮಾಡಿ, ಚೈನ್ಸಾದಿಂದ ತನ್ನ ಕತ್ತನ್ನು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಳ್ಳುವ ಯತ್ನ ಮಾಡಿರುವ ಅತ್ಯಂತ ಭೀಕರ ಘಟನೆ ಹೈದರಾಬಾದ್’ನಲ್ಲಿ ನಡೆದಿದೆ.
ಇಲ್ಲಿನ ಮಹಾರಾಜ್ ಗಂಜ್ ಜಿಲ್ಲೆಯಲ್ಲಿನ ಯುವಕ ಹೈದರಾಬಾದ್’ನಲ್ಲಿ ಕೆಲಸ ಮಾಡುತ್ತಿದ್ದನು. ಈ ಯುವಕ ಹಾಗೂ ಯುವತಿ ಬಹಳ ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ, ಯುವತಿಗೆ ಮನೆಯಲ್ಲಿ ಬೇರೊಂದು ಮದುವೆ ನಿಶ್ಚಯ ಮಾಡಿರುವ ವಿಷಯ ತಿಳಿದು ಆಕೆಯನ್ನು ಭೇಟಿ ಮಾಡಲು ಯತ್ನಿದ್ದಾನೆ. ಆದರೆ, ಅದು ಸಾಧ್ಯವಾಗದೇ ಇದ್ದಾಗ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸುತ್ತಾನೆ.
ಫೇಸ್ ಬುಕ್ ಲೈವ್ ಬಂದ ಯುವಕ ತನ್ನ ಮನದ ನೋವನ್ನು ಹಂಚಿಕೊAಡು ತನ್ನ ಕತ್ತು ಕೊಯ್ದುಕೊಳ್ಳಲು ಚೈನ್ಸಾದಿಂದ ಯತ್ನಿಸಿದ್ದಾನೆ. ಆದರೆ, ಫೇಸ್ ಬುಕ್ ಲೈವ್ ನೋಡುತ್ತಿದ್ದ ಕೆಲವರು ತತಕ್ಷಣ ಎಚ್ಚೆತ್ತು ಅವನ ಕುಟುಂಬಸ್ಥರಿಗೆ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತತಕ್ಷಣ ಎಚ್ಚೆತ್ತ ಪೊಲೀಸರು ಆತನನ್ನು ರಕ್ಷಣೆ ಮಾಡಿ, ಆಸ್ಪತ್ರೆಗೆ ದಾಖಲಿಸಿದ್ದಾರೆ.
ಗಾಯಗೊಂಡಿರುವ ಯುವಕ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಈ ಕುರಿತಂತೆ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post