ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಶಿವಮೊಗ್ಗ ಸೇರಿದಂತೆ ದಕ್ಷಿಣ ಒಳನಾಡಿದ ಹಲವು ಜಿಲ್ಲೆಗಳು ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಇಂದು ಹಾಗೂ ನಾಳೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಈ ಕುರಿತಂತೆ ಮಾಹಿತಿ ಬಿಡುಗಡೆ ಮಾಡಿರುವ ಇಲಾಖೆ, ಕರಾವಳಿ ಕರ್ನಾಟಕ, ಶಿವಮೊಗ್ಗ, ಬೆಳಗಾವಿ, ಧಾರವಾಡ, ಗದಗ್, ಹಾವೇರಿ, ಬಳ್ಳಾರಿ, ಬೆಂಗಳೂರು ನಗರ, ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಇಂದು ಹಾಗೂ ನಾಳೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಅ.23ರಂದು ಕರಾವಳಿ ಪ್ರದೇಶದಲ್ಲಿ ಭಾರೀ ಮಳೆ ಮುಂದುವರೆಯುವ ಸಾಧ್ಯತೆಯಿದ್ದು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮೋಡ ಮುಸುಕಿದ ವಾತಾವರಣ ಇರಲಿದೆ. ಅ.24ರವರೆಗೂ ಕರಾವಳಿಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post