ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಮಲೆನಾಡಿನಾದ್ಯಂತ ನಿರಂತರವಾಗಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತುಂಗಾನದಿ ಮೈದುಂಬಿದ್ದು, ಕೋರ್ಪಳಯ್ಯನ ಛತ್ರದ ಬಳಿಯಿರುವ ಮಂಟಪ ಇಂದು ಮುಳುಗಿದೆ.

ತೀರ್ಥಹಳ್ಳಿ ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಪರಿಣಾಮ ಗಾಜನೂರು ಅಣೆಕಟ್ಟೆಗೆ ಒಳಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ಭಾರೀ ಪ್ರಮಾಣದಲ್ಲಿ ನೀರನ್ನು ಹೊರಬಿಡಲಾಗುತ್ತಿದೆ. ಪರಿಣಾಮವಾಗಿ ತುಂಗಾ ನದಿ ಮೈದುಂಬಿ ಹರಿಯುತ್ತಿದ್ದು, ಮಂಟಪ ಮುಳುಗಡೆಯಾಗಿದೆ.

ಇದೇ ವೇಳೆ ನಗರದ ಕೆಲವು ಪ್ರದೇಶಗಳಲ್ಲಿ ನೆರೆ ಭೀತಿಯೂ ಸಹ ಆರಂಭವಾಗಿದೆ.
ಧಾರಾಕಾರ ಮಳೆಯಿಂದ ಶಿವಮೊಗ್ಗ ತಾಲೂಕು ಗಾಜನೂರು ತುಂಗಾ ಜಲಾಶಯದ ಒಳಹರಿವು ಹೆಚ್ಚಾದ ಹಿನ್ನೆಲೆಯಲ್ಲಿ, ಡ್ಯಾಂನ 21 ಕ್ರಸ್ಟ್ ಗೇಟ್ ತೆರೆದು ಆ. 5 ರಂದು ಬೆಳಿಗ್ಗೆ ಸುಮಾರು 56 ಸಾವಿರ ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ ಎಂದು ಡ್ಯಾಂ ವ್ಯಾಪ್ತಿಯ ಸಹಾಯಕ ಕಾರ್ಯಪಾಲಕ ಅಭಿಯಂತರ (ಎಇಇ) ಕೆ.ಟಿ.ಹರೀಶ್’ರವರು ಮಾಹಿತಿ ನೀಡಿದ್ದಾರೆ.
Get In Touch With Us info@kalpa.news Whatsapp: 9481252093















