ನವದೆಹಲಿ: ಪ್ರತಿವರ್ಷದಂತೆ ಈ ವರ್ಷವೂ ಸಹ ಮಳೆಗಾಲ ಉತ್ತರಾಖಂಡ್ ರಾಜ್ಯವನ್ನು ಬಾಧೀಸುತ್ತಿದ್ದು, ನಿರಂತರವಾಗಿ ಸುರಿಯುತ್ತಿರುವ ಕುಂಭದ್ರೋಣ ಮಳೆಗೆ ಪ್ರವಾಹ ಉಂಟಾಗಿದೆ.
ಪ್ರಮುಖವಾಗಿ ಡೆಹ್ರಾಡೂನ್ ನಲ್ಲಿ ಪ್ರವಾಹಕ್ಕೆ 7 ಮಂದಿ ಬಲಿಯಾಗಿದ್ದಾರೆ. ಅಲ್ಲದೇ, ಹಲವು ಸೇತುವೆಗಳು ಕೊಚ್ಚಿ ಹೋಗಿದ್ದು, ಸಂಚಾರ ಸ್ಥಗಿತಗೊಂಡಿದೆ.
ಡೆಹಾರೂಡೂನಲ್ಲಿ ಬೃಹತ್ ಕಟ್ಟಡ ಕುಸಿದು ಬಿದ್ದಿದ್ದು, ಹಲವರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಇನ್ನು ಹೆದ್ದಾರಿಗಳಲ್ಲಿ ಭಾರೀ ಭೂಕುಸಿತ ಉಂಟಾಗಿದ್ದು, ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಅವರು ಅಧಿಕಾರಿಗಳ ರಜೆಗಳನ್ನು ರದ್ದು ಮಾಡಿ ಎಲ್ಲಾ ರೀತಿಯಲ್ಲಿ ಸಜ್ಜಾಗಲು ಮುನ್ಸೂಚನೆ ನೀಡಿದ್ದು ಹೈ ಅಲರ್ಟ್ ಘೋಷಿಸಲಾಗಿದೆ.
ಹವಾಮಾನ ಇಲಾಖೆಗೆ ವರದಿಯಂತೆ ರಾಜ್ಯದಲ್ಲಿ ಇನ್ನೂ ಮೂರು ದಿನಗಳ ಕಾಲ ಬಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಉತ್ತರಾಖಂಡದಲ್ಲಿ ಹೈಅಲರ್ಟ್ ಘೋಷಿಸಿದ್ದು, ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡಗಳನ್ನು ಸಜ್ಜಾಗಿರಿಸಲಾಗಿದೆ.
ಇನ್ನು, ಚಂಬಾ-ಹೃಷಿಕೇಶ ಹೆದ್ದಾರಿ(74)ಯಲ್ಲಿ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿದಿದ್ದು, ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.
Discussion about this post