ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ #MalnadNews ಮಲೆನಾಡು, ಕರಾವಳಿ ಸೇರಿದಂತೆ ಹಲವು ಭಾಗಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
ದಕ್ಷಿಣ ಒಳನಾಡು, ಕರಾವಳಿ ಸೇರಿದಂತೆ ಹಲವು ಕಡೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಗುಡುಗು ಸಹಿತ ಭಾರೀ #HeavyRain ಮಳೆಯಾಗುವ ಸಾಧ್ಯತೆಯಿದೆ.
Also Read>> ಗಮನಿಸಿ ! ಮೇ 13, 14ರಂದು ಶಿವಮೊಗ್ಗ ನಗರದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ
ಪ್ರಮುಖವಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ಯೆಲ್ಲೋ ಅಲರ್ಟ್ #YellowAlert ಘೋಷಣೆ ಮಾಡಲಾಗಿದೆ. ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಮತ್ತು ದಾವಣಗೆರೆಯಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಅದರಲ್ಲೂ ಮೇ 15 ಮತ್ತು 16ರಂದು ಮಳೆಯ ತೀವ್ರತೆ ಹೆಚ್ಚಿರಲಿದ್ದು, ಸುಮಾರು 64.5 ಮಿಮೀ ಇಂದ 115.5 ಮಿಮೀ ವರೆಗೆ ಮಳೆ ದಾಖಲಾಗುವ ನಿರೀಕ್ಷೆಯಿದೆ.
Also Read>> ಯಶವಂತಪುರ ಮತ್ತು ಉಧ್ನಾ ನಡುವೆ ವಿಶೇಷ ರೈಲು | ಇಲ್ಲಿದೆ ಡೀಟೇಲ್ಸ್
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆ ಸಾಧಾರಣ ಮಳೆಯಾಗಲಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news




















