ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಈಗಾಗಲೇ ಕಳೆದ ಕೆಲವು ದಿನಗಳಿಂದ ಮಳೆ ಸುರಿಯುತ್ತಿರುವಂತೆಯೇ ಇಂದು ಶಿವಮೊಗ್ಗ ಸೇರಿದಂತೆ ಏಳು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
Also Read: ಭಾರೀ ಮಳೆ ಹಿನ್ನೆಲೆ: ಶಿವಮೊಗ್ಗ ಜಿಲ್ಲೆಯ ಎಲ್ಲ ಶಾಲೆಗಳಿಗೆ ಇಂದು ರಜೆ ಘೋಷಣೆ
ಈ ಕುರಿತಂತೆ ಹವಾಮಾನ ಇಲಾಖೆ ಮಾಹಿತಿ ಪ್ರಕಟಿಸಿದ್ದು, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಹಾಸನ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಹಾಗೂ ಮಂಡ್ಯ, ಚಾಮರಾಜನಗರ, ರಾಮನಗರ, ಮೈಸೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್, ಇನ್ನುಳಿದ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
Also Read: ಕರಾವಳಿಯಲ್ಲಿ ಭಾರೀ ಮಳೆ: ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ಇಂದು ರಜೆ ಘೋಷಣೆ
ಶಿವಮೊಗ್ಗದಲ್ಲಿ ಹೇಗಿದೆ ಪರಿಸ್ಥಿತಿ?
ಜಿಲ್ಲೆಯಲ್ಲಿ 10-11-12 ಗಂಟೆ ವೇಳೆಗೆ 5 ಎಂಎಂ, ಮಧ್ಯಾಹ್ನ 3 ರಿಂದ 5 ಗಂಟೆಯವರೆಗೂ 10 ಎಂಎಂ ಪ್ರಮಾಣದ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
















