ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ/ಬೆಂಗಳೂರು |
ಜೂನ್ 9ರವರೆಗೂ ಶಿವಮೊಗ್ಗ ಸೇರಿ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಈ ಕುರಿತಂತೆ ರಾಜ್ಯ ಹವಾಮಾನ ಇಲಾಖೆ ಮಾಹಿತಿ ಪ್ರಕಟಿಸಿದ್ದು, ಇದರಂತೆ ಯೆಲ್ಲೋ ಅಲರ್ಟ್ ಘೋಷಿಸಿರುವ ಜಿಲ್ಲೆಗಳ ವಿವರ ಇಂತಿದೆ.
ಜೂನ್ 7: ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ.
ಜೂನ್ 8: ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಉತ್ತರ ಒಳನಾಡಿನ ಹಾವೇರಿ, ಕೊಪ್ಪಳ, ಗದಗ, ಧಾರವಾಡ, ಬೆಳಗಾಂ ಹಾಗೂ ಬಾಗಲಕೋಟೆ.
ಜೂನ್ 9: ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಬೆಳಗಾಂ ಹಾಗೂ ಬಾಗಲಕೋಟೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post