ಶಿವಮೊಗ್ಗ: ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಬುಧವಾರವೂ ಸಹ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಈ ಕುರಿತಂತೆ ಆದೇಶ ಹೊರಡಿಸಿರುವ ಜಿಲ್ಲಾಧಿಕಾರಿ ಕೆ.ಎ. ದಯಾನಂದ್, ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಎಲ್ಲ ಸರ್ಕಾರಿ, ಖಾಸಗಿ, ಅನುದಾನಿತ ಹಾಗೂ ಕೇಂದ್ರೀಯ ವಿದ್ಯಾಲಯ ಸೇರಿದಂತೆ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದಿದ್ದಾರೆ.
ಕಳೆದ ಒಂದು ವಾರದಿಂದ ನಿರಂತರ ವರ್ಷಧಾರೆ ಜಿಲ್ಲೆಯಲ್ಲಿ ಹೊಸಕಳೆ ತಂದಿದ್ದು, ಮೂರು ದಿನಗಳಿಂದ ಎಡೆಬಿಡದೇ ಸುರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಮಂಗಳವಾರವೂ ಸಹ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು.
Mysuru Job Alert : Project Assistant Vacancy, 22,000 Salary, Apply by Oct 10
Kalpa Media House | Mysuru | Applications have been invited for one Project Assistant post for the Optical Sensing Biotechnology...
Read moreDetails






