ಕಲ್ಪ ಮೀಡಿಯಾ ಹೌಸ್ | ದಕ್ಷಿಣ ಕನ್ನಡ |
ಕರಾವಳಿ ಸೇರಿ ಹಲವು ಜಿಲ್ಲೆಗಳಲ್ಲಿ ಜೂನ್ 17ರವರೆಗೂ ಭಾರೀ ಮಳೆ ಮುನ್ಸೂಚನೆ ನೀಡಲಾಗಿದ್ದು, ಈ ಎಲ್ಲ ಕಡೆಗಳಲ್ಲಿ ರೆಡ್ ಅಲರ್ಟ್ #RedAlert ಘೋಷಣೆ ಮಾಡಲಾಗಿದೆ.
ಈ ಕುರಿತಂತೆ ರಾಜ್ಯ ಹವಾಮಾನ ಇಲಾಖೆ #IMDKarnataka ಮಾಹಿತಿ ಪ್ರಕಟಿಸಿದ್ದು, ಇದರಂತೆ ಕರಾವಳಿ ಜಿಲ್ಲೆಗಳಲ್ಲಿ ಇಂದು ಸೇರಿದಂತೆ ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗಲಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ, ಹಾಸನ ಹಾಗೂ ಚಿಕ್ಕಮಗಳೂರು #Chikkamagaluru ಜಿಲ್ಲೆಗಳಲ್ಲಿ ಜೂನ್ 17ರವರೆಗೂ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಭಾರೀ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಲಾಗಿದೆ.

ಜೂನ್ 15ರಂದು ಬೀದರ್, ಗುಲ್ಬರ್ಗಾ, ವಿಜಯಪುರ, ಬೆಳಗಾಂ, ಧಾರವಾಡ, ಗದಗ, ಹಾವೇರಿ, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಇನ್ನು, ಅವಳಿ ನಗರಗಳಾದ ಹುಬ್ಬಳ್ಳಿ-ಧಾರವಾಡಗಳಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಭಾರೀ ಮಳೆ ಸುರಿದಿದ್ದು, ಹಲವು ಅವಾಂತರ ಸೃಷ್ಠಿಯಾಗಿದೆ.
ಅಯೋಧ್ಯಾ ನಗರದ ಒಬ್ಬರು ಮತ್ತು ಹುಬ್ಬಳ್ಳಿಯ ನೇಕಾರ ನಗರದ ಮತ್ತೊಬ್ಬರು ತುಂಬಿ ಹರಿಯುತ್ತಿದ್ದ ಚರಂಡಿಯಲ್ಲಿ ಕೊಚ್ಚಿ ಹೋಗಿದ್ದರೆ, ಮತ್ತೊಬ್ಬ ವ್ಯಕ್ತಿಯನ್ನು ರಕ್ಷಿಸಲಾಗಿದೆ. ಒಬ್ಬ ವ್ಯಕ್ತಿ ಇನ್ನೂ ನಾಪತ್ತೆಯಾಗಿದ್ದು ಶೋಧ ಕಾರ್ಯಾಚರಣೆ ನಡೆಯುತ್ತಿದೆ.
ಇದೇ ವೇಳೆ, ಕುಂದಗೋಳ ತಾಲೂಕಿನ ಹಂಚಿನಾಳ ಗ್ರಾಮದಲ್ಲಿ, ಟ್ರಾಕ್ಟರ್ ಬಿದ್ದು ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ. ಸುಮಾರು 45 ಮನೆಗಳು ಹಾನಿಗೊಳಗಾಗಿದ್ದು, ಅವುಗಳಲ್ಲಿ ಕೆಲವು ಸಂಪೂರ್ಣವಾಗಿ ಕುಸಿದಿದ್ದರೆ, ಇನ್ನು ಕೆಲವು ಭಾಗಶಃ ಹಾನಿಗೊಳಗಾಗಿವೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post