ಕಲ್ಪ ಮೀಡಿಯಾ ಹೌಸ್ | ಹೊಸನಗರ |
ಮಲೆನಾಡಿನಲ್ಲಿ ಪುಷ್ಯ ಮಳೆ ಅಬ್ಬರ ಜೋರಾಗಿದ್ದು, ಪರಿಣಾಮವಾಗಿ ಹೊಸನಗರ ತಾಲೂಕಿನಲ್ಲಿ ಇರುವ ಹುಲಿಕಲ್ ಘಾಟಿಯಲ್ಲಿ ಗುಡದಡ ಕುಸಿದಿದೆ.
ತೀರ್ಥಹಳ್ಳಿಯಿಂದ ಕುಂದಾಪುರಕ್ಕೆ ಸಂಪರ್ಕ ಕಲ್ಪಿಸುವ ಘಾಟಿ ಅಂದರೆ ರಾಜ್ಯ ಹೆದ್ದಾರಿ 52 ಹಾದು ಹೋಗುವ ಹುಲಿಕಲ್ ಘಾಟಿಯಲ್ಲಿ ಗುಡ್ಡ ಕುಸಿತವಾಗಿದೆ.
ಈ ಹಿಂದೆ ಹೇರ್ ಪಿನ್ ತಿರುವಿನಲ್ಲಿ ಘಾಟಿ ಕುಸಿದಿತ್ತು. ಘಾಟಿ ಕುಸಿತದಿಂದ ವಾಹನ ಸವಾರರು ಪರದಾಡುತ್ತಿದ್ದಾರೆ. ಪರಿಣಾಮವಾಗಿ ಕಿಲೋ ಮೀಟರ್’ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post