ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯದ ಬಹುತೇಕ ಕಡೆಗಳಲ್ಲಿ ಮಳೆ ಮುಂದುವರೆಯುವ ಮುನ್ಸೂಚನೆ ನೀಡಿದ್ದು, ಏಳು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಿಲಾಗಿದೆ.
ಈ ಕುರಿತಂತೆ ಹವಾಮಾನ ಇಲಾಖೆ ಮಾಹಿತಿ ಪ್ರಕಟಿಸಿದ್ದು, ರಾಜ್ಯದ ಏಳು ಜಿಲ್ಲೆಗಳಲ್ಲಿ ಇಂದು ಯಲ್ಲೋ ಘೋಷಿಸಿದೆ.
ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರಿ ಪ್ರಮಾಣದ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮಳೆ ಜೊತೆ ಗಾಳಿಯ ವೇಗ ಗಂಟೆಗೆ 35-45 ಕಿ.ಮೀ. ಇರುವ ಸಾಧ್ಯತೆ ಹಿನ್ನಲೆ ಮುನ್ನೆಚ್ಚರಿಕೆಯಾಗಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲೂ ಸಾಧಾರಣ ಮಳೆಯಾಗಲಿದೆ.
ಇನ್ನು, ದಕ್ಷಿಣ ಒಳನಾಡು ಭಾಗದ ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಚಾಮರಾಜನಗರ ಮತ್ತು ಹಾಸನದಲ್ಲಿ ಆರೆಂಜ್ ಅಲರ್ಟ್ ಇರಲಿದೆ. ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಉತ್ತರ ಒಳನಾಡು ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿಯಲ್ಲಿ ಅಲ್ಪ ಪ್ರಮಾಣದ ಮಳೆಯಾಗಲಿದೆ. ಬಳ್ಳಾರಿ ಮತ್ತು ವಿಜಯನಗರದಲ್ಲಿ ಮೋಡ ಕವಿದ ವಾತಾವರಣ ಅಥವಾ ತುಂತುರು ಮಳೆಯ ನಿರೀಕ್ಷೆ ಇದೆ.
ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಸಂಜೆ ಗುಡುಗು ಸಹಿಳೆ ಮಳೆಯಾಗುವ ಸಾಧ್ಯತೆ ಇದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post