ಕಲ್ಪ ಮೀಡಿಯಾ ಹೌಸ್
ಹೊಸನಗರ: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಯಡೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೊಳವಾಡಿ ಗ್ರಾಮ ಕುಂಬಾರಬಿಳು ಮಧ್ಯದಲ್ಲಿ ಬಿಚ್ಚಾಡಿ, ಮಾಗಲು, ಮನಿಜೆಡ್ಡು ಸಂಪರ್ಕ ಸೇತುವೆ ಭಾರಿ ಮಳೆಯಲ್ಲಿ ಕೊಚ್ಚಿಹೋಗಿದೆ.
ಮಲೆನಾಡು ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಧಾರಾಕಾರವಾಗಿ ಸುರಿಯುತ್ತಲೇ ಇದ್ದು, ಪರಿಣಾಮವಾಗಿ ನದಿ, ಹಳ್ಳ-ಕೊಳ್ಳಗಳು ಉಕ್ಕಿ ಹರಿಯುತ್ತಿವೆ. ಇದೇ ವೇಳೆ, ಕುಂಬಾರಬಿಳು ಮಧ್ಯದಲ್ಲಿ ಬಿಚ್ಚಾಡಿ, ಮಾಗಲು, ಮನಿಜೆಡ್ಡು ಸಂಪರ್ಕ ಸೇತುವೆ ಭಾರಿ ಮಳೆಯಲ್ಲಿ ಕೊಚ್ಚಿಹೋಗಿದೆ. ಈ ಮಾರ್ಗ ಬಿಟ್ಟು ಜನರು ಯಾವ ಮಾರ್ಗವೂ ಇಲ್ಲದೇ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಭಾರೀ ಮಳೆಯ ನಡುವೆಯೇ ಸಂಪರ್ಕ ಸೇತುವೆಯೂ ಸಹ ಕೊಚ್ಚಿ ಹೋಗಿರುವ ಪರಿಣಾಮ ಸ್ಥಳೀಯ ಜನಜೀವನ ಅಸ್ತವ್ಯಸ್ತವಾಗಿದೆ.
ಇನ್ನು, ಕಳೆದ ಮಳೆಗಾಲದಲ್ಲಿ ಈ ಭಾಗದಲ್ಲಿ ಗುಡ್ಡ ಕುಸಿದಿತ್ತು. ಆ ಸಂದರ್ಭದಲ್ಲಿ ಸ್ಥಳಕ್ಕೆ ಭೇಟಿ ನೀಡಿದ್ದ ಅಧಿಕಾರಿಗಳು ಸರಿಪಡಿಸುವ ಆಶ್ವಾಸನೆ ನೀಡಿದ್ದರೇ ಹೊರತು ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.
ಈಗ ನಿರಂತರವಾಗಿ ಮಳೆ ಸುರಿಯುತ್ತಿರುವ ಪರಿಣಾಮ ಈ ಭಾರಿಯೂ ಸಹ ಗುಡ್ಡ ಕುಸಿಯುವ ಭೀತಿ ಎದುರಾಗಿದ್ದು, ಇದರಿಂದ ಏನಾದರೂ ಅನಾಹುತ ಸಂಭವಿಸಿದರೆ ಅದಕ್ಕೆ ಸರ್ಕಾರವೇ ಹೊಣೆಯಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post